Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ| ಕೆಸರು ಗದ್ದೆಯಂತಾದ ರಸ್ತೆ;...

ಉಪ್ಪಿನಂಗಡಿ| ಕೆಸರು ಗದ್ದೆಯಂತಾದ ರಸ್ತೆ; ವಾಹನ ಸವಾರರಿಗೆ ಸಂಕಷ್ಟ

ವಾರ್ತಾಭಾರತಿವಾರ್ತಾಭಾರತಿ24 Jun 2025 8:45 PM IST
share
ಉಪ್ಪಿನಂಗಡಿ| ಕೆಸರು ಗದ್ದೆಯಂತಾದ ರಸ್ತೆ; ವಾಹನ ಸವಾರರಿಗೆ ಸಂಕಷ್ಟ

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ ಚತುಷ್ಫಥ ಕಾಮಗಾರಿಯ ಭಾಗವಾಗಿ ಇಲ್ಲಿನ ಹಳೆಗೇಟು ಎಂಬಲ್ಲಿ ಸರ್ವೀಸ್ ರಸ್ತೆಯ ಬದಿ ನಿರ್ಮಿಸಲಾದ ಚರಂಡಿಯ ಬದಿಗೆ ಮಣ್ಣು ತುಂಬಿಸುವ ಕಾರ್ಯಕ್ಕೆ ಗುತ್ತಿಗೆದಾರ ಸಂಸ್ಥೆಯ ಸಿಬ್ಬಂದಿಗಳು ಹೊರಟಿದ್ದು, ಇದರಿಂದಾಗಿ ಈ ಜಡಿ ಮಳೆಗೆ ಮಣ್ಣೆಲ್ಲಾ ಕರಗಿ ರಸ್ತೆಯಿಡೀ ಕೆಸರು ಗದ್ದೆಯುಂಟಾಗಿ ವಾಹನ ಸವಾರರು ಸಂಕಷ್ಟಪಡುವ ಸ್ಥಿತಿ ನಿರ್ಮಾಣವಾಗಿದೆ. ಗುತ್ತಿಗೆದಾರ ಸಂಸ್ಥೆಯ ಬೇಜಾವಬ್ದಾರಿ ಕಾಮಗಾರಿಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಉಪ್ಪಿನಂಗಡಿ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಫಥ ಕಾಮಗಾರಿ ಆರಂಭವಾಗಿ ವರ್ಷಗಳು ಹಲವು ಉರುಳಿದರೂ ಕಾಮಗಾರಿ ಮಾತ್ರ ಇನ್ನೂ ಅಪೂರ್ಣ ಸ್ಥಿತಿಯಲ್ಲಿಯೇ ಇದೆ. ಕೂಟೇಲು ಬಳಿಯಿಂದ ಮಠದವರೆಗಿನ ಎತ್ತರಿಸಲ್ಪಟ್ಟ ಹೆದ್ದಾರಿಯಲ್ಲಿ ಈಗ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾ ಗಿದ್ದು, ಹಳೆಗೇಟುವಿನಲ್ಲಿ ತಿರುವು ಪಡೆದು ಮರ್ಧಾಳ ಕಡೆಗೆ ಸಂಚರಿಸಬೇಕಾದರೆ ವಾಹನಗಳು ಎತ್ತರಿಸಲ್ಪಟ್ಟ ರಸ್ತೆಯ ಎರಡೂ ಬದಿಯಲ್ಲಿರುವ ಸರ್ವೀಸ್ ರಸ್ತೆಯಲ್ಲಿ ಸಾಗಬೇಕು. ಇಲ್ಲಿ ಒಂದು ಬದಿಯ ಸರ್ವೀಸ್ ರಸ್ತೆಯ ಕಾಮಗಾರಿ ಶೇ.75 ಮುಗಿದಿದ್ದು, ಉಳಿದ ಕಡೆ ರಸ್ತೆ ನಿರ್ಮಾಣವಾಗಬೇಕಿದೆ. ಇನ್ನೊಂದು ಬದಿಯ ಸರ್ವೀಸ್ ರಸ್ತೆಯೂ ಸಂಪೂರ್ಣ ಹದಗೆಟ್ಟಿದ್ದು, ಹೊಂಡ ಗುಂಡಿಗಳಿಂದ ಕೂಡಿದೆ. ಇಲ್ಲಿ ಇನ್ನಷ್ಟೇ ಹೊಸ ರಸ್ತೆ ನಿರ್ಮಾಣವಾಗಬೇಕಿದೆ. ಮೊದಲೇ ಹೊಂಡ ಗುಂಡಿಗಳಿಂದ ಕೂಡಿರುವ ಈ ರಸ್ತೆಯ ಬದಿಯಲ್ಲಿ ನಿರ್ಮಿಸಿರುವ ಚರಂಡಿಗೆ ಬದಿ ಮಣ್ಣು ತುಂಬಿಸುವ ಕೆಲಸವನ್ನು ಎರಡು ಮೂರು ದಿನಗಳಿಂದ ಕಾಮಗಾರಿ ಗುತ್ತಿಗೆದಾರ ಸಂಸ್ಥೆ ಮಾಡುತ್ತಿದೆ. ಮಣ್ಣನ್ನು ರಸ್ತೆಯಲ್ಲೇ ತಂದು ರಾಶಿ ಹಾಕಿ ಮತ್ತೆ ಅದನ್ನು ಹಿಟಾಚಿ ಮೂಲಕ ಚರಂಡಿ ಬದಿಗೆ ತುಂಬಿಸಲಾಗುತ್ತಿದೆ. ಈಗ ಮಳೆಗಾಲದ ಸಮಯ ವಾಗಿದ್ದರಿಂದ ಮಣ್ಣೆಲ್ಲಾ ಕರಗಿ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು, ಗದ್ದೆಯಂತಾಗಿದೆ. ಇನ್ನೊಂದು ಕಡೆಯಿಂದ ಹೊಂಡ- ಗುಂಡಿಗಳಿಂದಾಗಿಯೂ ಇಲ್ಲಿ ಸಂಚರಿಸುವ ವಾಹನ ಸವಾರರು ಸಂಕಷ್ಟಪಡುವ ಸ್ಥಿತಿ ನಿರ್ಮಾಣವಾಗಿದೆ. ಮೊದಲೇ ಸಂಚಾರಕ್ಕೆ ತೊಂದರೆಯಾಗುತ್ತಿರುವ ಈ ರಸ್ತೆಯಲ್ಲಿ ಮಳೆಯ ಸಂದರ್ಭ ಈ ಕಾಮಗಾರಿಯ ಅಗತ್ಯವಿತ್ತೇ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೊಂದು ರಸ್ತೆ ಬಂದ್ : ಒಂದು ಸರ್ವೀಸ್ ರಸ್ತೆಯಲ್ಲಿ ಕೆಸರು, ಹೊಂಡ- ಗುಂಡಿಗಳಿಂದಾಗಿ ಸಂಚಾರಕ್ಕೆ ತೊಂದರೆಯಾಗುತ್ತಿರುವ ಸಂದರ್ಭದಲ್ಲೇ ಕಾಮಗಾರಿಯ ನೆಪದಲ್ಲಿ ಶೇ.75ರಷ್ಟು ರಸ್ತೆಯ ಕಾಮಗಾರಿ ಆಗಿರುವ ಮತ್ತೊಂದು ಸರ್ವೀಸ್ ರಸ್ತೆಯನ್ನು ಜೂ.24ರಂದು ಮುಚ್ಚಲಾಗಿತ್ತು. ಇದರಿಂದಾಗಿ ಮರ್ಧಾಳ ಕಡೆಗೆ ತೆರಳುವ ವಾಹನಗಳೆಲ್ಲಾ ಅನಿವಾರ್ಯವಾಗಿ ಕೆಸರುಗದ್ದೆಯಂತಾಗಿರುವ ಈ ರಸ್ತೆಯಲ್ಲೇ ಸಂಚರಿ ಸುವ ಪ್ರಸಂಗ ಬಂದೊದಗಿತ್ತು. ಇದರಿಂದಾಗಿ ವಾಹನಗಳು ಹೊಂಡ- ಗುಂಡಿಯಲ್ಲಿ ಬೀಳುತ್ತಾ, ಏಳುತ್ತಾ ಸಾಗುತ್ತಿರುವ ನಡುವೆಯೇ ಈಗ ಕೆಸರಿನಲ್ಲಿ ಜಾರಿಕೊಂಡು ಹೋಗಬೇಕಾದ ಸಂದರ್ಭವೂ ಬಂದೊದ ಗಿದೆ. ಅಲ್ಲದೇ, ಕೂಟೇಲು ಬಳಿ ಬಂದ್ ಮಾಡಲಾದ ರಸ್ತೆಯ ಬಗ್ಗೆ ಯಾವುದೇ ಸೂಚನೆ ನೀಡದ್ದರಿಂದ ಕೆಲವು ವಾಹನಗಳು ಈ ರಸ್ತೆಯಲ್ಲಿ ಹಳೆಗೇಟು ತನಕ ಬಂದು ವಾಪಸ್ ತಿರುಗಿಸಿ ಹೋಗುವ ಪರಿಸ್ಥಿ ತಿಯೂ ನಿರ್ಮಾಣವಾಗಿತ್ತು. ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯನ್ನು ಗುತ್ತಿಗೆದಾರ ಸಂಸ್ಥೆಯವರು ಕೆಲವು ಕಡೆ ಸ್ವಲ್ಪ ಕಾಮಗಾರಿ ನಡೆಸಿ, ಮತ್ತೆ ಅದನ್ನು ಬಿಟ್ಟು ಬೇರೆ ಕಡೆ ಹೋಗುವುದ ರಿಂದ ಈ ಭಾಗದಲ್ಲಿ ಕಾಮಗಾರಿಯು ಅರ್ಧಂಬರ್ಧ ಆಗಿದ್ದು, ಅಪೂರ್ಣ ಸ್ಥಿತಿಯಲ್ಲೇ ಇದೆ. ಇನ್ನಾದರೂ ಕಾಮಗಾರಿ ಗುತ್ತಿಗೆದಾರ ಸಂಸ್ಥೆಯವರು ಅರ್ಧಂಬರ್ಧ ಕಾಮಗಾರಿ ಮಾಡದೇ ಒಂದು ಕಡೆಯ ಕಾಮಗಾ ರಿಯನ್ನು ಸಂಪೂರ್ಣವಾಗಿ ಮುಗಿಸಿಯೇ ಮತ್ತೊಂದು ಕಡೆಗೆ ಹೋಗಬೇಕು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಿಂದ ವ್ಯಕ್ತವಾಗುತ್ತಿದೆ.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X