ವಿಟ್ಲ: ವಾಹನ ದಟ್ಟನೆಗೆ ಕಾರಣವಾಗುತ್ತಿದ್ದ ಫ್ಲೆಕ್ಸ್, ತಳ್ಳುಗಾಡಿಗಳ ತೆರವು

ವಿಟ್ಲ: ವಿಟ್ಲದಲ್ಲಿ ಸಂಭವಿಸುತ್ತಿರುವ ವಾಹನ ದಟ್ಟನೆ ನಿಯಂತ್ರಿಸಲು ವಿಟ್ಲ ಪಟ್ಟಣ ಪಂಚಾಯತ್ ಅಧಿಕಾರಿಗಳು ವಾಹನ ದಟ್ಟನೆಗೆ ಕಾರಣವಾಗುತ್ತಿದ್ದ ಫ್ಲೆಕ್ಸ್ ಮತ್ತು ತಳ್ಳುಗಾಡಿಗಳನ್ನು ತೆರವುಗೊಳಿಸಿದರು.
ವಿಟ್ಲ ಪೇಟೆಯಲ್ಲಿ ಸಂಭವಿಸುತ್ತಿರುವ ವಾಹನ ದಟ್ಟನೆಯನ್ನು ನಿಯಂತ್ರಿಸುವ ಉದ್ದೇಶದಿಂದ ಶನಿವಾರ ಪಟ್ಟಣ ಪಂಚಾಯತ್ ವತಿಯಿಂದ ಪೊಲೀಸ್, ಇಲಾಖೆ ಮತ್ತು ವಾಹನ ಚಾಲಕ ಸಭೆ ಕರೆದ ಈ ಹಿಂದೆ ಜಿಲ್ಲಾಧಿಕಾರಿಗಳು ಹೊರಡಿಸಿದ್ದ ಆದೇಶವನ್ನು ಮುಂದುವರಿಸಲು ನಿರ್ಣಯ ಕೈಗೊಳ್ಳಲಾಗಿತ್ತು. ಅದರಂತೆ ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ಅಳವಡಿಸಲಾಗಿದ್ದ ಪ್ರಚಾರದ ಫ್ಲೆಕ್ಸ್ ಹಾಗೂ ವಿಟ್ಲ-ಪುತ್ತೂರು ರಸ್ತೆಯ ಬದಿಯಲ್ಲಿದ್ದ ತಳ್ಳುಗಾಡಿಗಳನ್ನು ತೆರವುಗೊಳಿಸಿದರು. ಅದೇ ರೀತಿ ವಿಟ್ಲ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಗಳು ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸುತ್ತಿದ್ದ ಆಟೋ ರಿಕ್ಷಾ ಮತ್ತು ದ್ವಿಚಕ್ರ ವಾಹನಗಳು ನಿಲ್ಲಿಸದಂತೆ ಸೂಚಿಸಲಾಯಿತು. ಅವರಿಗೆ ಪ್ರತ್ಯೇಕ ಪಾರ್ಕಿಂಗ್ ಸ್ಥಳ ನಿಗದಿಪಡಿಸಲಾಗಿದ್ದು, ಅಲ್ಲೇ ನಿಲ್ಲಿಸುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.