ಸುಳ್ಯ| ಕೆಎಸ್ಸಾರ್ಟಿಸಿ ಬಸ್‌ಗಳ ನಡುವೆ ಅಪಘಾತ: ಓರ್ವ ಮಹಿಳೆ ಸ್ಥಳದಲ್ಲೇ ಮೃತ್ಯು
20ಕ್ಕೂ ಅಧಿಕ ಮಂದಿಗೆ ಗಾಯ

ಸುಳ್ಯ: ಮಾಣಿ - ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡು ಬಳಿ ಕೆಎಸ್ಸಾರ್ಟಿಸಿ ಬಸ್‌ಗಳ ನಡುವೆ ನಡೆದ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟು, 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಬುಧವಾರ ಸಂಭವಿಸಿದೆ.
ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಹಾಗೂ ಮಡಿಕೇರಿಯಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ಗಳ ನಡುವೆ ಸುಳ್ಯ ತಾಲೂಕಿನ ಅರಂತೋಡು ಬಳಿಯ ತಿರುವಿನಲ್ಲಿ ಅಪಘಾತ ಸಂಭವಿಸಿದೆ.
ಮಂಗಳೂರಿಗೆ ಚಿಕಿತ್ಸೆಗೆ ತೆರಳಿ ಮಡಿಕೇರಿಗೆ ಹಿಂತಿರುಗುತ್ತಿದ್ದ ಕುಶಾಲನಗರ ನಿವಾಸಿ ಭಾರತಿ (50) ಎಂಬವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಚೈತ್ರ (22), ಮಾಯಿಲ್ಪ (43), ಶ್ರಾವ್ಯಶ್ರೀ (24), ಕುಮುದಿನಿ (24), ಯಮುನಾ (55), ವೇದಿಕಾ (10), ಯಕ್ಷಿತಾ (22), ಸಮದ್ (38), ಮುತ್ತಮ್ಮ (37), ಚಂದ್ರಾವತಿ (43), ತಿರುಮಲೇಶ್ವರ (49), ಸೋನಿ ಎಚ್.ಪಿ. (21), ಚಿದಾನಂದ (42), ನಯನ ವಿತೋಬಾರಾವ್ (25), ಸುಬ್ರಮಣಿ (51), ಕಾವೇರಮ್ಮ (35), ಅಭಿಲಾಷ್ (21), ಜಯಂತ್ (17), ಕರಣ್ (37) ಮೊದಲಾದವರು ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ಕೆಲವರು ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಲ್ಲಿ ಇಬ್ಬರು ತೀವ್ರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







