Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರಿನಲ್ಲಿ ಅತ್ಯಾಧುನಿಕ ಟ್ಯಾಂಕರ್‌...

ಮಂಗಳೂರಿನಲ್ಲಿ ಅತ್ಯಾಧುನಿಕ ಟ್ಯಾಂಕರ್‌ ಮಾಪನಾಂಕ ನಿರ್ಣಯ ಘಟಕ ಕಾರ್ಯಾರಂಭ

ವಾರ್ತಾಭಾರತಿವಾರ್ತಾಭಾರತಿ26 Jun 2025 6:14 PM IST
share
ಮಂಗಳೂರಿನಲ್ಲಿ ಅತ್ಯಾಧುನಿಕ ಟ್ಯಾಂಕರ್‌ ಮಾಪನಾಂಕ ನಿರ್ಣಯ ಘಟಕ ಕಾರ್ಯಾರಂಭ

ಮಂಗಳೂರು: "ಎಸ್‌ಎಸ್ ಮೆಟಲ್ಸ್ ಆಂಡ್ ಇಂಡಸ್ಟ್ರೀಸ್‌’ನ ಅತ್ಯಾಧುನಿಕ ಟ್ಯಾಂಕರ್ ಮಾಪನಾಂಕ ನಿರ್ಣಯ ಘಟಕ ಮಂಗಳವಾರ ನಗರದಲ್ಲಿ ಉದ್ಘಾಟನೆ ಗೊಂಡಿದೆ. ಮಂಗಳೂರಿನ ಓಷನ್ ಪರ್ಲ್ ಹೊಟೇಲ್‌ನಲ್ಲಿ ನಡೆದ ಕಾರ್ಯಕ್ರ ಮದಲ್ಲಿ ಅನಾವರಣಗೊಂಡಿದೆ.

ಜೋನಸ್ ಗ್ರೂಪ್‌ನ ಪ್ರಮುಖ ಉದ್ಯಮವಾದ ಎಸ್‌ಎಸ್ ಮೆಟಲ್ಸ್‌ನ್ನು ಸಂಧ್ಯಾ ದೀಪಾ ಜೋನಸ್ ಸ್ಥಾಪಿಸಿದ್ದು ಅವರು ಸಮಾರಂಭವನ್ನು ದ್ದೇಶಿಸಿ ಮಾತನಾಡುತ್ತಾ, ಉದ್ಯಮ ವಲಯದ ನಾವೀನ್ಯತೆ ಮತ್ತು ಅಭಿವೃದ್ಧಿಗೆ ಅಡಿಪಾಯ ಹಾಕಿದೆ. 2020ರಲ್ಲಿ ಎಸ್‌ಎಸ್ ಮೆಟಲ್ಸ್ ಮತ್ತು ಇಂಡಸ್ಟ್ರೀಸ್ ಅತ್ಯಾಧುನಿಕ ಎಫ್ಲುಯೆಂಟ್ ಟ್ರೀಟ್‌ಮೆಂಟ್ ಪ್ಲಾಂಟ್ (ಇಟಿಪಿ) ಜತೆಗೆ ಸುಧಾರಿತ- ಸ್ವಯಂಚಾಲಿತ ಶುದ್ಧೀಕರಣ ಘಟಕವನ್ನು ಪ್ರಾರಂಭಿಸುವ ಮೂಲಕ ಮಹತ್ವದ ಮೈಲಿಗಲ್ಲನ್ನು ಸಾಧಿಸಿತ್ತು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧಿಕೃತಗೊಳಿಸಿದ ಈ ನವೀನ ಸೌಲಭ್ಯವು ಕರ್ನಾಟಕದಲ್ಲೇ ಪ್ರಥಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಘಟಕವು ಮಂಗಳೂರು ಸೇರಿದಂತೆ ವಿವಿಧೆಡೆಗಳಲ್ಲಿ ಬೃಹತ್ ತೈಲ, ರಾಸಾಯನಿಕ ನಿರ್ವಹಣೆ ಮಾಡುವ ಕೈಗಾರಿಕೆಗಳಿಗೆ ನಿಖರತೆ, ಸುರಕ್ಷತೆ ಮತ್ತು ನಿಯಂತ್ರಕ ಕ್ರಮಗಳನ್ನು ಅನುಸ ರಿಸಲು ಪೂರಕವಾಗಲಿದೆ ಎಂದು ಸಂಧ್ಯಾ ದೀಪಾ ಜೋನಸ್ ತಿಳಿಸಿದ್ದಾರೆ.

ಇಟಿಪಿಯಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಟ್ಯಾಂಕ್ ತೊಳೆಯಲು ಪರಿಣಾಮಕಾರಿಯಾಗಿ ಮರುಬಳಕೆ ಮಾಡಲಾಗುತ್ತದೆ, ಇದು ಸಿಹಿನೀರಿನ ಬಳಕೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಮತ್ತು ಪರಿಸರ ಸ್ನೇಹಿಯೂ ಆಗಿದೆ. ಕಂಪೆನಿಯು ಇದೀಗ ಟ್ಯಾಂಕರ್ ಮಾಪನಾಂಕ ನಿರ್ಣಯ ಘಟಕ ಆರಂಭಿಸು ವುದರೊಂದಿಗೆ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ.ಈ ಅತ್ಯಾಧುನಿಕ ಸೌಲಭ್ಯವು ಮಂಗಳೂರು ಮತ್ತು ವಿವಿಧೆಡೆ ಬೃಹತ್ ತೈಲ ಮತ್ತು ರಾಸಾಯನಿಕಗಳನ್ನು ನಿರ್ವಹಿಸುವ ವ್ಯವಹಾರಗಳಿಗೆ ಮೂಲಾಧಾರ ವಾಗಲಿದೆ. ಈ ಸೌಲಭ್ಯವು ಸಾಟಿಯಿಲ್ಲದ ನಿಖರತೆ ಒದಗಿಸಲಿದೆ ಜೋನಸ್ ಗ್ರೂಪ್‌ ಕಂಪೆನಿಯು ಕರಾವಳಿ ಕರ್ನಾಟಕದ ಏಕೈಕ ಕೆಎಸ್‌ಪಿಸಿಬಿ- ಅಧಿಕೃತ ತ್ಯಾಜ್ಯ ತೈಲ ನಿರ್ವಹಣಾ ಕಂಪೆನಿಯಾಗಿದೆ. ಇದೀಗ ಟ್ಯಾಂಕರ್‌ ಮಾಪನಾಂಕ ನಿರ್ಣಯ ಘಟಕ ಇನ್ನೊಂದು ಮೈಲಿಗಲ್ಲು ಸ್ಥಾಪಿಸಿದೆ.ತೈಲ, ಪೆಟ್ರೋಲಿಯಂ ಉತ್ಪನ್ನಗಳು ಮತ್ತು ರಾಸಾಯನಿಕಗಳನ್ನು ನಿರ್ವಹಿಸುವ ಕೈಗಾರಿಕೆಗಳಿಗೆ ಟ್ಯಾಂಕರ್ ಮಾಪನಾಂಕ ನಿರ್ಣಯದ ಪ್ರಕ್ರಿಯೆ ಅತ್ಯಂತ ಅನಿವಾರ್ಯ. ಕಾನೂನು ಅನುಸರಣೆ, ದೃಢವಾದ ಗುಣಮಟ್ಟ, ನ್ಯಾಯಯುತ ವ್ಯಾಪಾರ ಅಭ್ಯಾಸಗಳು ಮತ್ತು ಪರಿಸರ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ನಿಖರವಾದ ಮಾಪನ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪನೆ ಯಾಗಿರುವ ಈ ಹೊಸ ಘಟಕವು ವೈವಿಧ್ಯಮಯ ಶ್ರೇಣಿಯ ಟ್ಯಾಂಕರ್‌ಗಳಿಗೆ ವಿಶ್ವಾಸಾರ್ಹ ಮತ್ತು ಹೆಚ್ಚು ನಿಖರವಾದ ಮಾಪನಾಂಕ ನಿರ್ಣಯ ಸೇವೆ ಒದಗಿಸಲು ಸಜ್ಜಾಗಿದೆ ಎಂದು ಸಂಧ್ಯಾ ಜೋನಾಸ್ ಹೇಳಿದರು.

ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿಎಲ್), ಭಾರತ್ ಪೆಟ್ರೋಲಿಯಂ (ಬಿಪಿಸಿಎಲ್), ಹಿಂದೂಸ್ತಾನ್ ಪೆಟ್ರೋಲಿಯಂ (ಎಚ್‌ಪಿಸಿಎಲ್), ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್), ಶೆಲ್ ಮತ್ತು ನಯಾರಾ ಎನರ್ಜಿ ಸೇರಿದಂತೆ ಪ್ರಮುಖ ತೈಲ ಮತ್ತು ಇಂಧನ ಕಂಪೆನಿಗಳ ಪ್ರಮುಖ ವ್ಯಕ್ತಿಗಳು ನೂತನ ಘಟಕದ ಮಹತ್ವದ ಕುರಿತು ಬೆಳಕು ಚೆಲ್ಲಿದರು. ಇದೇ ಸಂದರ್ಭದಲ್ಲಿ, ಎಂಆರ್‌ಪಿಎಲ್‌ ಕಾರ್ಯ ನಿರ್ವಾಹಕ ನಿರ್ದೇಶಕ (ರಿಫೈನರಿ) ಬಿ. ಸುದರ್ಶನ್ ಅವರನ್ನು ಅವರ ಕೊಡುಗೆಗಳಿಗಾಗಿ ಸನ್ಮಾನಿಸಲಾಯಿತು.

ಉದ್ಘಾಟನಾ ಸಮಾರಂಭದಲ್ಲಿ ಉದ್ಯಮದ ಮುಖಂಡರು ಮತ್ತು ಧಾರ್ಮಿಕ ನಾಯಕರು ಪಾಲ್ಗೊಂಡಿದ್ದರು. ಬೆಂಗಳೂರಿನ ಸೈಂಟ್ ಆಂಡ್ರ್ಯೂಸ್ ಚರ್ಚ್‌ನ ವಂ.ಡಾ. ಡೆಕ್ಸ್ಟರ್ ಎಸ್. ಮಾಬೆನ್, ಜೋನಸ್ ಗ್ರೂಪ್‌ನ ನಿರ್ದೇಶಕ ಸುನಿಲ್ ಎ. ಜೋನಸ್, ಎಸ್‌ಎಸ್ ಮೆಟಲ್ಸ್‌ ನಿರ್ದೇಶಕಿ ಸಂಧ್ಯಾ ದೀಪಾ ಜೋನಸ್ ಭಾಗವಹಿಸಿದ್ದರು.

ಪ್ರಮುಖ ಉದ್ಯಮ ಪ್ರತಿನಿಧಿಗಳಾದ ಎಂಆರ್‌ಪಿಎಲ್‌ನ ಜಿಜಿಎಂ (ಎಚ್‌ಆರ್) ಕೃಷ್ಣ ಹೆಗ್ಡೆ ಮಿಯಾರ್, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ಕಾರ್ಯ ನಿರ್ವಾಹಕ ನಿರ್ದೇಶಕ ಸಂಜಯ್ ಪರಾಶರ್, ಶೈನಿ ಶಿಪ್ಪಿಂಗ್ ಮತ್ತು ಲಾಜಿಸ್ಟಿಕ್ಸ್ ಪ್ರೈವೇಟ್ ಲಿಮಿಟೆಡ್‌ ಸಂಸ್ಥಾಪಕ ಸ್ಟ್ಯಾನಿ ಲಿಯೋ ನೊರೊನ್ಹಾ ಉಪಸ್ಥಿತರಿದ್ದರು.










share
ವಾರ್ತಾಭಾರತಿ
ವಾರ್ತಾಭಾರತಿ
Next Story
X