Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಪೌಷ್ಟಿಕ ಆಹಾರ ಪೂರೈಕೆಯಲ್ಲಿ...

ಮಂಗಳೂರು: ಪೌಷ್ಟಿಕ ಆಹಾರ ಪೂರೈಕೆಯಲ್ಲಿ ಪ್ರಗತಿ ಸಾಧಿಸಲು ಜಿಪಂ ಸಿಇಒ ಸೂಚನೆ

ವಾರ್ತಾಭಾರತಿವಾರ್ತಾಭಾರತಿ26 Jun 2025 8:06 PM IST
share
ಮಂಗಳೂರು: ಪೌಷ್ಟಿಕ ಆಹಾರ ಪೂರೈಕೆಯಲ್ಲಿ ಪ್ರಗತಿ ಸಾಧಿಸಲು ಜಿಪಂ ಸಿಇಒ ಸೂಚನೆ

ಮಂಗಳೂರು, ಜೂ.26: ಪೌಷ್ಟಿಕ ಆಹಾರ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ದ.ಕ. ಜಿಲ್ಲೆಯ ಪ್ರಗತಿಯು ತೀರಾ ಕಡಿಮೆ ಇದೆ. ಹಾಗಾಗಿ ಜಿಲ್ಲೆಯಲ್ಲಿ ಪೌಷ್ಟಿಕ ಆಹಾರ ಪೂರೈಸುವ ಕಾರ್ಯಕ್ರಮದಲ್ಲಿ ಪ್ರಗತಿ ಸಾಧಿಸುವ ಕಡೆಗೆ ಹೆಚ್ಚು ಗಮನಹರಿಸಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ದ.ಕ.ಜಿಪಂ ಸಿಇಒ ಡಾ.ಕೆ. ಆನಂದ್ ಸೂಚಿಸಿದರು.

ದ.ಕ.ಜಿಪಂ ಮಿನಿ ಸಭಾಂಗಣದಲ್ಲಿ ಗುರುವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ತೀವ್ರ ಅಪೌಷ್ಟಿಕತೆ ಹೊಂದಿರುವ 20 ಮಕ್ಕಳಿದ್ದು, ಉತ್ತಮ ಆರೈಕೆಗಾಗಿ ಅವರನ್ನು ಪೌಷ್ಟಿ ಕಾಂಶ ಪುನರ್ವಸತಿ ಕೇಂದ್ರ (ಎನ್‌ಆರ್‌ಸಿ)ಕ್ಕೆ ದಾಖಲಿಸಬೇಕು. ಮಕ್ಕಳಿಗೆ ಸೂಕ್ತವಾದ ಪೌಷ್ಟಿಕ ಆಹಾರ, ಆರೈಕೆಯ ಜೊತೆಗೆ ಕೇಂದ್ರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಅಲ್ಲದೆ ಜಿಲ್ಲೆಯನ್ನು ಅಪೌಷ್ಟಿಕತೆ ಮುಕ್ತ ಜಿಲ್ಲೆಯನ್ನಾಗಿಸಬೇಕು ಎಂದು ಡಾ. ಆನಂದ್ ಕರೆ ನೀಡಿದರು.

3ರಿಂದ 5 ವಷರ್ ಪ್ರಾದ ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಬೇಕು. ಶಾಲೆಗೆ ಹೋಗದಿರುವ ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣ ದೊರಕಿಸುವ ಬಗ್ಗೆ ಮಹಿಳಾ ಸಭೆ, ಗ್ರಾಮ ಸಭೆಗಳಲ್ಲಿ ಚರ್ಚಿಸ ಬೇಕು. ಅಂಗನವಾಡಿ ಕಟ್ಟಡಗಳ ನಿರ್ವಹಣೆ ಯೋಜನೆಯಡಿ ಅಂಗನವಾಡಿ ಕೇಂದ್ರಗಳ ದುರಸ್ತಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ 2024ರ ಜುಲೈನಿಂದ ಡಿಸೆಂಬರ್‌ವರೆಗೆ 2 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದೆ. ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ 13 ವರದಕ್ಷಿಣೆ ಪ್ರಕರಣಗಳು ದಾಖಲಾಗಿದೆ. 11 ಪ್ರಕರಣಗಳು ತನಿಖೆ ಹಂತದಲ್ಲಿದೆ. ಬಾಲ್ಯ ವಿವಾಹ, ಬಾಲ ಗರ್ಭಿಣಿಯರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮ ವಹಿಸಲು ಸಿಇಒ ಸೂಚಿಸಿದರು.

ಗ್ರಾಪಂ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಕಾವಲು ಸಮಿತಿ ಸಭೆ ನಡೆಸಿ ಬಾಲ್ಯ ವಿವಾಹ ಮತ್ತು ಹದಿಹರೆಯದ ಗರ್ಭಧಾರಣೆ ಬಗ್ಗೆ ಚರ್ಚಿಸಿ ಅವುಗಳನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು. ಬಾಲ್ಯ ವಿವಾಹ ಕಂಡು ಬಂದರೆ 1098 ಸಹಾಯವಾಣಿಗೆ ದೂರು ನೀಡಬೇಕು. ಬಾಲ್ಯ ವಿವಾಹ, ಹದಿಹರೆಯದ ಗರ್ಭ ಧಾರಣೆ ತಡೆಯಲು ಅರಿವು ಕಾರ್ಯಗಾರವನ್ನು ಮಾಡಬೇಕು ಎಂದು ಹೇಳಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನಿಸಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಉಸ್ಮಾನ್, ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್‌ನ ಹಿಲ್ಡಾ ರಾಯಪ್ಪನ್, ಜಿಪಂ ಸಿಇಒ ಸಂಧ್ಯಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ.ಉಳೆಪಾಡಿ, ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X