ಮೆಲ್ಕಾರ್ ಮಹಿಳಾ ಕಾಲೇಜಿನಲ್ಲಿ ನಶಮುಕ್ತ ಭಾರತ ಅಭಿಯಾನ

ಬಂಟ್ವಾಳ : ಮಾರ್ನಬೈಲಿನಲ್ಲಿರುವ ಮೆಲ್ಕಾರ್ ಮಹಿಳಾ ಪದವಿ ಪೂರ್ವ ಹಾಗೂ ಪದವಿ ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರುದ್ಧ ಅಂತಾರಾಷ್ಟ್ರೀಯ ದಿನಾಚರಣೆಯ ಪ್ರಯುಕ್ತ ನಶಮುಕ್ತ ಭಾರತ ಅಭಿಯಾನದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವು ಕಾಲೇಜಿನಲ್ಲಿ ಗುರುವಾರ ನಡೆಯಿತು.
ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಕುರಿತು ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಮಜೀದ್ ಎಸ್. ಮಾಹಿತಿ ನೀಡಿದರು.
ಆ ಬಳಿಕ ಪದವಿ ಹಾಗೂ ಪದವಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಈ ಸಂದರ್ಭ ಕಾಲೇಜಿನ ಎಲ್ಲಾ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.
Next Story







