Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಧಿಕಾರಿಗಳ ಗೈರು: ಕೋಟೆಕಾರ್ ಪಟ್ಟಣ...

ಅಧಿಕಾರಿಗಳ ಗೈರು: ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ ಅರ್ಧದಲ್ಲೇ ಮೊಟಕು

ವಾರ್ತಾಭಾರತಿವಾರ್ತಾಭಾರತಿ27 Jun 2025 5:52 PM IST
share
ಅಧಿಕಾರಿಗಳ ಗೈರು: ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ ಅರ್ಧದಲ್ಲೇ ಮೊಟಕು

ಉಳ್ಳಾಲ: ವಿವಿಧ ಇಲಾಖೆಗಳ ಅಧಿಕಾರಿಗಳು ಗೈರು ಹಾಜರಾಗಿದ್ದರಿಂದ ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯನ್ನು ಅಧ್ಯಕ್ಷರು ಅರ್ಧದಲ್ಲೇ ಮೊಟಕುಗೊಳಿಸಿದ ಘಟನೆ ಕೋಟೆಕಾರ್ ಪಟ್ಟಣ ಪಂಚಾಯತ್ ನಲ್ಲಿ ಶುಕ್ರವಾರ ನಡೆದಿದೆ.

ಕೋಟೆಕಾರ್ ಪ.ಪಂ. ಅಧ್ಯಕ್ಷೆ ದಿವ್ಯಾ ಸತೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಗೆ ಮೆಸ್ಕಾಂ ಮತ್ತು ಅಮೃತ್ 2.0 ಕುಡಿಯುವ ನೀರು ವಿಭಾಗದ ಅಧಿಕಾರಿಗಳು ಮಾತ್ರ ಹಾಜರಾಗಿದ್ದರು. ಪಿಡಬ್ಲ್ಯುಡಿ, ಕಂದಾಯ, ಆರೋಗ್ಯ ಸಹಿತ ವಿವಿಧ ಇಲಾಖಾಧಿಕಾರಿಗಳು ಗೈರಾಗಿದ್ದರು. ಇದನ್ನು ಗಮನಿಸಿದ ಸದಸ್ಯ ಸುಜಿತ್ ಮಾಡೂರು ಮಾತನಾಡಿ, ಅಧಿಕಾರಿಗಳು ಬಾರದೇ ಸಭೆ ನಡೆಸುವುದು ಬೇಡ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷೆ ಸಭೆ ಹಾಜರಾಗಿರುವ ಅಧಿಕಾರಿಗಳ ಜತೆ ಚರ್ಚಿಸಿ ಸಭೆ ಮುಂದುವರಿಸೋಣ ಎಂದರು.

ಅಮೃತ್ 2.0 ಕುಡಿಯುವ ನೀರು ಯೋಜನೆ ಸಹಾಯಕ ಇಂಜಿನಿಯರ್ ಶ್ರೀಕಾಂತ್, ಪೂರ್ಣಗೊಂಡ ಹಾಗೂ ಹಾಗೂ ಬಾಕಿ ಉಳಿದಿರುವ ಪೈಪ್ ಲೈನ್ ಕಾಮಗಾರಿ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ಆಕ್ಷೇಪಿಸಿದ ಸುಜಿತ್ ಮಾಡೂರು, ಶ್ರೀಮಂತರ ಮನೆಯ ಪೈಲ್ ಲೈನ್ ಕಾಮಗಾರಿ ಮುಗಿಸಿ ಬಡವರಿಗೆ ಸಂಬಂಧಿಸಿದ ಕಾಮಗಾರಿ ಬಾಕಿ ಇಟ್ಟಿದ್ದೀರಿ ಎಂದು ದೂರಿದರು.

ವಿಪಕ್ಷದ ಸದಸ್ಯ ಅಹ್ಮದ್ ಅಜ್ಜಿನಡ್ಕ ಮಾತನಾಡಿ, ಕಾಮಗಾರಿ ಅರ್ಧಂಬರ್ಧ ಮಾಡುವುದು ಬೇಡ. ಅಜ್ಜಿನಡ್ಕ, ಮುಳ್ಳುಗುಡ್ಡೆ ಬಳಿ ಪೈಪ್ ಲೈನ್ ಗೆ ಅಗೆದ ಗುಂಡಿಗಳು ಹಾಗೆಯೇ ಇವೆ. ಈ ಪ್ರದೇಶದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಎಂದರು.

ಅಧ್ಯಕ್ಷ ದಿವ್ಯಾ ಸತೀಶ್ ಮಾತನಾಡಿ, ಒಂದು ದಿನ ನಾಲ್ಕು ವಾರ್ಡ್ ಗಳಿಗೆ ಭೇಟಿ ನೀಡಿ ಪೈಪ್ ಲೈನ್ ಕಾಮಗಾರಿಯನ್ನು ಪರಿಶೀಲಿಸಬೇಕು. ಕಾಮಗಾರಿ ನಡೆಸುವ ಮೊದಲು ಆಯಾ ವಾರ್ಡ್ ಸದಸ್ಯರ ಗಮನಕ್ಕೆ ತರಬೇಕು. ತೆರೆದಿಟ್ಟ ಹೊಂಡಗಳನ್ನು ಶೀಘ್ರ ಮುಚ್ಚಬೇಕು ಎಂದು ಇಂಜಿನಿಯರ್ ಗೆ ಸೂಚನೆ ನೀಡಿದರು.

ಮೆಸ್ಕಾಂ ಎಇ ಮಾರಪ್ಪ ಮಾತನಾಡಿ, ವಿದ್ಯುತ್ ಎಚ್.ಟಿ. ಲೈನ್ ಹಾದು ಹೋಗಿರುವ ಜಾಗದಲ್ಲಿ ಮರಗಳು ಬೆಳೆದು ನಿಂತಿದ್ದು, ಅವುಗಳನ್ನು ಅರಣ್ಯ ಇಲಾಖೆ ತೆರವು ಮಾಡಿಲ್ಲ. ಆದ್ದರಿಂದ ಪಪಂ ಮರಗಳನ್ನು ಆದ್ಯತೆಯಲ್ಲಿ ತೆರವು ಮಾಡಬೇಕು ಎಂದು ವಿನಂತಿಸಿದರು.

ಕೌನ್ಸಿಲರ್ ಅಹ್ಮದ್ ಅಜ್ಜಿನಡ್ಕ ಮಾತನಾಡಿ, ಕೋಟೆಕಾರ್ ನಲ್ಲಿ ಮೆಸ್ಕಾಂ ಶಾಖಾ ಕಚೇರಿ ಬೇಕು. ಜತೆಗೆ ಬಿಲ್ ಪಾವತಿ ಮಾಡಲು ಪ.ಪಂ. ವ್ಯಾಪ್ತಿಯಲ್ಲಿ ವ್ಯವಸ್ಥೆ ಮಾಡಬೇಕು. ಕರೆ ಮಾಡಿದರೆ ಸ್ವೀಕರಿಸುವ ವ್ಯವಸ್ಥೆ ಕೂಡ ಮಾಡಬೇಕು ಎಂದು ಆಗ್ರಹಿಸಿದರು.

ಸಭೆಗೆ ಪಿಡಬ್ಲ್ಯುಡಿ, ಕಂದಾಯ, ಆರೋಗ್ಯ ಸಹಿತ ವಿವಿಧ ಇಲಾಖಾಧಿಕಾರಿಗಳು ಸಭೆಗೆ ಗೈರು ಹಾಜರಾಗಿದ್ದರಿಂದ ಯಾವುದೇನಿರ್ಣಯವನ್ನು ತೆಗೆದುಕೊಳ್ಳಲಾಗದೇ ಸದಸ್ಯರ ಸರ್ವಾನುಮತದಿಂದ ಅಧ್ಯಕ್ಷೆ ದಿವ್ಯಾ ಶೆಟ್ಟಿ ಸಭೆಯನ್ನು ಅರ್ಧದಲ್ಲೇ ಮೊಟಕುಗೊಳಿಸಿ ಬುಧವಾರಕ್ಕೆ ಮುಂಡೂಡಿದರು.

ಸಭೆಯಲ್ಲಿ ಮುಖ್ಯಾಧಿಕಾರಿ ಮಾಲಿನಿ, ಪ.ಪಂ.ಉಪಾಧ್ಯಕ್ಷ ಪ್ರವೀಣ್, ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಕುಮಾರ್ ಉಪಸ್ಥಿತರಿದ್ದರು.

ಅಧಿಕಾರಿಗಳು ಗೈರು ಹಾಜರಿಯಲ್ಲಿ ಸಮಸ್ಯೆಯ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಪ್ರತೀ ಸಭೆಗೂ ಮುನ್ನ ಸಂಬಂಧಪಟ್ಟ ಇಲಾಖೆಗೆ ನೋಟಿಸ್ ಕಳಿಸಲಾಗುತ್ತದೆ. ಜನರಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮ ಉದ್ದೇಶ. ಈ ಕಾರಣದಿಂದ ಸಭೆ ರದ್ದುಗೊಳಿಸಿ ಬುಧವಾರಕ್ಕೆ ಮುಂದೂಡಿದ್ದೇವೆ ಎಂದು ಸಭೆಯ ಬಳಿಕ ಅಧ್ಯಕ್ಷೆ ದಿವ್ಯಾ ಶೆಟ್ಟಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X