ಗಾಂಜಾ ಸೇವನೆ ಆರೋಪ: ಇಬ್ಬರ ಬಂಧನ

ಮಂಗಳೂರು, ಜೂ.27: ಬರ್ಕೆ ಠಾಣಾ ವ್ಯಾಪ್ತಿಯ ಕೊಡಿಯಾಲಗುತ್ತು (ಪಶ್ಚಿಮ) ಬಳಿ ಗಾಂಜಾ ಸೇವನೆ ಮಾಡಿದ್ದ ಆರೋಪದ ಮೇರೆಗೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಅಶೋಕನಗರ ನಿವಾಸಿ ಡ್ಯಾನಿಶ್ (23) ಮತ್ತು ಸುರತ್ಕಲ್ ಹೊಸಬೆಟ್ಟು ನಿವಾಸಿ ಅಖಿಲ್ (22) ಬಂಧಿತ ಆರೋಪಿಗಳು. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಸ್ಪಷ್ಟ ಉತ್ತರ ನೀಡಿರಲಿಲ್ಲ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಇಬ್ಬರ ವಿರುದ್ಧವೂ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
Next Story





