ಬಂಟರ ಯಾನೆ ನಾಡವರ ಮಾತೃಸಂಘದಿಂದ ಪ್ರತಿಭಾ ಪುರಸ್ಕಾರ

ಮಂಗಳೂರು, ಜೂ.28: ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ತಾಲೂಕು ಸಮಿತಿಯ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮಂಗಳೂರು ತಾಲೂಕು ವ್ಯಾಪ್ತಿಯ ಬಂಟ ಸಮಾಜದ 2024-25ರ ಸಾಲಿನಲ್ಲಿ ಎಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.95 ಮತ್ತು ಅದಕ್ಕಿಂತ ಮೇಲ್ಪಟ್ಟು ಅಂಕಗಳಿಸಿದ ವಿದ್ಯಾರ್ಥಿಗಳಿಂದ ಅರ್ಜಿ ಯನ್ನು ಆಹ್ವಾನಿಸಿದೆ. ಸ್ವಯಂ ಲಿಖಿತ ಅರ್ಜಿಯ ಜೊತೆ ಆಧಾರ್ ಕಾರ್ಡಿನ ಪ್ರತಿ ಮತ್ತು ಅಂಕಪಟ್ಟಿಯ ಪ್ರತಿ, ಒಂದು ಪಾಸ್‌ಪೋರ್ಟ್ ಸೈಝ್ ಪೊಟೋವನ್ನು ಜು.10ರೊಳಗೆ ಬಂಟರ ಯಾನೆ ನಾಡವರ ಮಾತೃ ಸಂಘದ ಕಚೇರಿ, ಅಮೃತೋತ್ಸವ ಕಟ್ಟಡ, ಬಂಟ್ಸ್ ಹಾಸ್ಟೇಲ್ ಮಂಗಳೂರು ಇಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮೊ.ಸಂ: 9343562173, 9448858292, 9480015895ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story





