ಕರ್ಣಾಟಕ ಬ್ಯಾಂಕ್ ಉದ್ಯೋಗಿಗಳ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಪಣೀಂದ್ರ ಕೆ.ಜಿ. ಆಯ್ಕೆ

ಪಣೀಂದ್ರ
ಮಂಗಳೂರು: ಅಖಿಲ ಭಾರತ ಕರ್ಣಾಟಕ ಬ್ಯಾಂಕ್ ಉದ್ಯೋಗಿಗಳ ಸಂಘದ (ಎಐಕೆಬಿಇಎ ) ಪ್ರಧಾನ ಕಾರ್ಯದರ್ಶಿಯಾಗಿ ಪಣೀಂದ್ರ ಕೆ.ಜಿ. ಆಯ್ಕೆಯಾಗಿದ್ದಾರೆ.
ಮಂಗಳೂರಿನ ಸಂಘ ನಿಕೇತನದಲ್ಲಿ ಜೂನ್ 28 ಮತ್ತು 29ರಂದು ನಡೆದ ಅಖಿಲ ಭಾರತ ಕರ್ಣಾಟಕ ಬ್ಯಾಂಕ್ ಉದ್ಯೋಗಿಗಳ ಸಂಘ ದ(ಎಐಕೆಬಿಇಎ) 26ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಪಣೀಂದ್ರ ಕೆ.ಜಿ. ಅವಿರೋಧವಾಗಿ ಆಯ್ಕೆಯಾದರು.
1,600 ಕ್ಕೂ ಹೆಚ್ಚು ಪ್ರತಿನಿಧಿಗಳು, ವೀಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮ್ಮೇಳನವನ್ನು ಎಐಬಿಇಎ ಪ್ರಧಾನ ಕಾರ್ಯದರ್ಶಿ ಸಿ. ಎಚ್. ವೆಂಕಟಾಚಲಂ ಉದ್ಘಾಟಿಸಿದರು.
ಕರ್ಣಾಟಕ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕರು ಮತ್ತು ಸಿಇಒ ಶ್ರೀ ಕೃಷ್ಣನ್ ಎಚ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
Next Story





