Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವೆನ್ಲಾಕ್‌ ಆಸ್ಪತ್ರೆಯ ಹೊರವಲಯದಲ್ಲಿ...

ವೆನ್ಲಾಕ್‌ ಆಸ್ಪತ್ರೆಯ ಹೊರವಲಯದಲ್ಲಿ ಜಮೀನು ಕಾಯ್ದಿರಿಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ

ತ್ರೈಮಾಸಿಕ ಕೆಡಿಪಿ ಸಭೆ

ವಾರ್ತಾಭಾರತಿವಾರ್ತಾಭಾರತಿ30 Jun 2025 10:15 PM IST
share
ವೆನ್ಲಾಕ್‌ ಆಸ್ಪತ್ರೆಯ ಹೊರವಲಯದಲ್ಲಿ ಜಮೀನು ಕಾಯ್ದಿರಿಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಮಂಗಳೂರು: ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯ ಭವಿಷ್ಯದ ಅಭಿವೃದ್ದಿಯ ದೃಷ್ಟಿಯಿಂದ ನಗರದ ಕೇಂದ್ರಭಾಗದ ಹೊರವಲಯದಲ್ಲಿ ಜಮೀನು ಕಾಯ್ದಿರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.

ಅವರು ಸೋಮವಾರ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಭೆಯಲ್ಲಿ ಶಾಸಕ ಹರೀಶ್ ಪೂಂಜಾ ಅವರು ವಿಷಯ ಪ್ರಸ್ತಾಪಿಸಿ, ವೆನ್‌ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಪ್ರಸ್ತುತ ಇರುವ ಜಮೀನಿನಲ್ಲಿ ವಿವಿಧ ಕಟ್ಟಡಗಳು ತುಂಬಿದ್ದು, ಭವಿಷ್ಯದ ವಿಸ್ತರಣೆ ಹಾಗೂ ಹೊಸ ಅಭಿವೃದ್ಧಿ ಯೋಜನೆಗಳಿಗೆ ಸ್ಥಳಾವಕಾಶದ ಕೊರತೆ ಎದುರಾಗಬಹುದು. ಈ ನಿಟ್ಟಿನಲ್ಲಿ ನಗರ ಸಂಪರ್ಕಿಸುವ ಹೆದ್ದಾರಿಯ ಸಮೀಪ ಜಾಗ ಕಾಯ್ದಿರಿಸುವಂತೆ ಅಗ್ರಹಿಸಿದರು. ಇದಕ್ಕೆ ಸ್ಪಂದಿಸಿದ ಸಚಿವರು, ಈ ಬಗ್ಗೆ ಜಮೀನು ಗುರುತಿಸಲು ಅಗತ್ಯ ಕ್ರಮ ಕ್ಯೆಗೊಳ್ಳಲು ಸೂಚಿಸಿದರು.

ಜಿಲ್ಲಾ ಅರೋಗ್ಯಧಿಕಾರಿ ಡಾ. ತಿಮ್ಮಯ್ಯ ಮಾತನಾಡಿ, ಮೂಡುಶೆಡ್ಡೆ ಟಿಬಿ ಆಸ್ಪತ್ರೆ ಸಮೀಪ 8 ಎಕರೆ ಜಾಗ ಲಭ್ಯವಿದೆ ಎಂದರು.

ವೆನ್ಲಾಕ್ ಆಸ್ಪತ್ರೆಯ ಹಾಲಿ ಹೊರರೋಗಿ ವಿಭಾಗವನ್ನು ತೆರವುಗೊಳಿಸಿ, 4 ಮಹಡಿಗಳ ಹೊಸ ಕಟ್ಟಡ ನಿರ್ಮಾಣ ಶೀಘ್ರದಲ್ಲಿ ಆರಂಭವಾಗಲಿದೆ ಎಂದು ವೆನ್ಲಾಕ್ ಅಧೀಕ್ಷಕ ಡಾ. ಶಿವಪ್ರಸಾದ್ ತಿಳಿಸಿದರು.

ಬೆಳ್ತಂಗಡಿಗೆ ಡಯಾಲಿಸ್ ಕೇಂದ್ರಕ್ಕೆ ಬೇಡಿಕೆ : ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ಮತ್ತು ಶವಗಾರ ಸ್ಥಾಪಿಸುವಂತೆ ಶಾಸಕ ಹರೀಶ್ ಪೂಂಜಾ ಕೋರಿದರು.

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಲಭ್ಯವಿಲ್ಲದ ಅಂಗನವಾಡಿ ಮತ್ತು ಅರೋಗ್ಯ ಉಪಕೇಂದ್ರಗಳಿಗೆ ಶೀಘ್ರದಲ್ಲಿ ನಗರಪಾಲಿಕೆಯ ಅಥವಾ ಕಂದಾಯ ಜಾಗವನ್ನು ಮಂಜೂರು ಮಾಡಲು ಉಸ್ತುವಾರಿ ಸಚಿವರು ತಿಳಿಸಿದರು.

*ಭಿನ್ನಾಭಿಪ್ರಾಯ ಬಗೆ ಹರಿಸಲು ಸೂಚನೆ: ನಗರದ ಎಮ್ಮೆಕೆರೆ ಈಜುಕೊಳದ ಸೌಲಭ್ಯಗಳ ಬಳಕೆ ಬಗ್ಗೆ ಈಜು ಸಂಸ್ಥೆಗಳ ನಡುವೆ ಭಿನ್ನಾಭಿಪ್ರಾಯ ಕುರಿತು ಸಭೆ ನಡೆಸಿ ಚರ್ಚಿಸುವಂತೆ ಸಚಿವರು ಜಿಲ್ಲಾಧಿಕಾರಿ ಗಳಿಗೆ ಸೂಚಿಸಿದರು.

ಈಜುಕೊಳದ ಯಾವುದೇ ನಿರ್ಮಾಣಗಳನ್ನು ಅನುಮತಿ ಇಲ್ಲದೇ ಬದಲಾಯಿಸಲು ಅವಕಾಶ ನೀಡಬಾರದು ಎಂದು ಅವರು ತಿಳಿಸಿದರು.

*ಸಿಬ್ಬಂದಿ ಕೊರತೆ: ನಗರ ಯೋಜನಾ ಪ್ರಾಧಿಕಾರಗಳಲ್ಲಿ ಸಿಬ್ಬಂದಿ ಕೊರತೆಯಿಂದ ಸಾರ್ವಜನಿಕರ ನಕ್ಷೆ ಮಂಜೂರಾತಿ, 9/11, ಮನೆ ನಿರ್ಮಾಣ ಅನುಮತಿ ಮತ್ತಿತರ ಕಾರ್ಯಗಳಿಗೆ ತೀವ್ರ ತೊಂದರೆಯಾ ಗುತ್ತಿರುವ ಬಗ್ಗೆ ಕೆಡಿಪಿ ಸಭೆಯಲ್ಲಿ ತೀವ್ರ ಚರ್ಚೆಯಾಗಿ, ಅಗತ್ಯ ಸಿಬ್ಬಂದಿ ಒದಗಿಸಲು ಸಚಿವರು ಸೂಚಿಸಿದರು.

ಸಾರ್ವಜನಿಕ ರಸ್ತೆ ಸಂಪರ್ಕ ಇಲ್ಲದಿದ್ದಲ್ಲಿ ಯಾವುದೇ ನಿರ್ಮಾಣ ಚಟುವಟಿಕೆಗಳಿಗೆ ಅನುಮತಿ ನೀಡಲು ಅವಕಾಶ ಇಲ್ಲ ಎಂದು ಜಿ ಪಂ ಸಿ ಇ ಒ ಡಾ. ಕೆ. ಆನಂದ್ ತಿಳಿಸಿದರು.

ಮಂಗಳೂರು ಮಹಾನಗರ ಯೋಜನೆ ಕರಡನ್ನು ಮುಂದಿನ ಕೆಡಿಪಿ ಸಭೆಯೊಳಗೆ ಪ್ರಕಟಿಸುವಂತೆ ಸಚಿವರು ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರಕ್ಕೆ ಸೂಚಿಸಿದರು.

ಇಲೆಕ್ಟ್ರಿಕಲ್ ಬಸ್ ಡಿಪೋ : ಪಂಪ್‌ವೆಲ್ ಸಮೀಪ ಕೆಎಸ್‌ಆರ್‌ಟಿಸಿ ಇಲೆಕ್ಟ್ರಿಕಲ್ ಬಸ್ ಡಿಪೋ ನಿರ್ಮಾ ಣಕ್ಕೆ ಜಾಗ ಮಂಜೂರು ಮಾಡಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ತಿಳಿಸಿದರು.

ಸುಳ್ಯ ವಿದ್ಯುತ್ ಸಮಸ್ಯೆಗೆ 110 ಕೆ ವಿ ಸಂಪರ್ಕ ನಿರ್ಮಾಣ ಸಂಬಂಧ ಉಂಟಾಗಿರುವ ಎಲ್ಲಾ ಸಮಸ್ಯೆ ಗಳನ್ನು ಬಗೆಹರಿಸಿ ಕಾಮಗಾರಿ ಮುಂದುವರಿಸುವಂತೆ ಸಚಿವ ದಿನೇಶ್ ಗುಂಡೂರಾವ್ ಕೆಪಿಟಿಸಿಎಲ್ ಅಧಿಕಾರಿಗಳಿಗೆ ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X