Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆ...

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆ ವಿರುದ್ಧ ಕಾರ್ಯಾಚರಣೆಗೆ ಉಪವಿಭಾಗಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ2 July 2025 7:58 PM IST
share
ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆ ವಿರುದ್ಧ ಕಾರ್ಯಾಚರಣೆಗೆ ಉಪವಿಭಾಗಾಧಿಕಾರಿ ಸೂಚನೆ

ಮಂಗಳೂರು, ಜು.2: ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ಮಂಗಳವಾರ ಮಂಗಳೂರು ಸಹಾಯಕ ಆಯುಕ್ತ ಹಷರ್ವರ್ಧನ್ ಎಸ್.ಜೆ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯಲ್ಲಿ ನಡೆಯಿತು.

ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ತಂಬಾಕು ಸೇವನೆ ಇದ್ದಾಗ ಕೆಟ್ಟ ಪರಿಣಾಮದ ಬಗ್ಗೆ ಅರಿವು ಮೂಡಿಸು ವುದರ ಜೊತೆಗೆ ಶಾಲಾ-ಕಾಲೇಜು ಮತ್ತು ಗ್ರಾಮ ಪಂಚಾಯತ್ ಸಮನ್ವಯದೊಂದಿಗೆ ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಂಡು ಶಿಕ್ಷಣ ಸಂಸ್ಥೆಗಳನ್ನು ತಂಬಾಕು ಮುಕ್ತವಾಗಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಅವರು ಹೇಳಿದರು.

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಮತ್ತು ತಂಬಾಕು ಸೇವನೆ ನಿಯಂತ್ರಿಸಲು ಆರೋಗ್ಯ ಇಲಾಖೆಯ ಜೊತೆ ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಪಂಚಾಯತ್ ರಾಜ್ ಇಲಾಖೆ ಸಮನ್ವಯದೊಂದಿಗೆ ತಾಲೂಕು ಮಟ್ಟದಲ್ಲಿ ತಿಂಗಳಿಗೊಮ್ಮೆ ಕೋಟ್ಪಾ ಕಾರ್ಯಾಚರಣೆ ನಡೆಸಬೇಕು ಎಂದು ಅವರು ಸೂಚಿಸಿದರು.

ಮಂಗಳೂರು ತಾಲೂಕಿನಲ್ಲಿ ಕೋಟ್ಪಾ ಕಾಯ್ದೆಯಡಿ ಡಿಸೆಂಬರ್ 2024 ರಿಂದ ಜೂನ್ 2025 ವರೆಗೆ 87 ಪ್ರಕರಣಗಳು ದಾಖಲಾಗಿದ್ದು, ಒಟ್ಟು 22,700ರೂ. ದಂಡ ಸಂಗ್ರಹಿಸಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 43 ದಡಾರ ರುಬೆಲ್ಲಾ ಸಂಶಯಾಸ್ಪದ ಪ್ರಕರಣಗಳು ದಾಖಲಾಗಿದ್ದು, ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಇಲಾಖೆ ಹೆಚ್ಚು ಗಮನ ಹರಿಸಬೇಕು. ಜ್ವರ, ದದ್ದುಗಳು ಕಂಡುಬಂದಲ್ಲಿ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ವರದಿ ಮಾಡುವಂತೆ ಅವರು ಸೂಚಿಸಿದರು. ಲಸಿಕಾ ಕಾರ್ಯಕ್ರಮದ ಬಗ್ಗೆ ಪೋಷಕರಿಗೆ ಮಾಹಿತಿ ನೀಡಬೇಕು ಎಂದು ಅವರು ಹೇಳಿದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಮಾತನಾಡಿ, ಅತಿಸಾರ ನಿಯಂತ್ರಣ ಅಭಿಯಾನದಲ್ಲಿ ಜನರಿಗೆ ಅತಿಸಾರದ ಕಾರಣ ಚಿಕಿತ್ಸೆ ತಡೆಗಟ್ಟುವಿಕೆಯ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಪ್ರಸ್ತುತ ಮಳೆಗಾಲದ ಸಂದರ್ಭದಲ್ಲಿ ಕಲುಷಿತ ನೀರಿನಿಂದ ಅಥವಾ ಪಾನೀಯ ಮುಂತಾದ ಆಹಾರ ಪದಾರ್ಥಗಳ ಸೇವನೆಯಿಂದ ಸೋಂಕು ಕಾಣಿಸಿಕೊಂಡು ಮಕ್ಕಳಲ್ಲಿ ಅತಿಸಾರ ಸಮಸ್ಯೆ ಉಂಟಾಗಬಹುದು. ಅತಿಸಾರವನ್ನು ತಡೆಗಟ್ಟಲು ಮನೆಗಳಲ್ಲಿ ಒಆರ್‌ಎಸ್ ಇಟ್ಟುಕೊಳ್ಳಬೇಕು. ಶಾಲೆಗಳಲ್ಲಿ ಮಕ್ಕಳಿಗೆ ನೈರ್ಮಲ್ಯದ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಅಗತ್ಯ ಸೌಲಭ್ಯಗಳನ್ನು ಅವರಿಗೆ ನೀಡಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕೆ ಕಾರಿಗೆ, ಮಂಗಳೂರು ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಮಹೇಶ್ ಹೊಳ್ಳ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X