ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ದೂರ ಶಿಕ್ಷಣ: ಅರ್ಜಿ ಅಹ್ವಾನ

ಮಂಗಳೂರು: ಪದವಿ ಶಿಕ್ಷಣದಿಂದ ವಂಚಿತರಾಗಿರುವ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ದೂರ ಶಿಕ್ಷಣ ಮಾದರಿಯಲ್ಲಿ ಪದವಿ/ಸ್ನಾತ್ತಕೋತ್ತರ ಪದವಿ/ಡಿಪ್ಲೊಮಾ ಸರ್ಟಿಫಿಕೆಟ್ ಕೋರ್ಸ್‌ಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 25 ಕೊನೆಯ ದಿನವಾಗಿದೆ. ವಿದ್ಯಾರ್ಥಿಯು ನೇರವಾಗಿ ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ಅಡ್ಮಿಶನ್ ಲಿಂಕ್ (https://minority.ksouportal.com) ಮೂಲಕ ಅರ್ಜಿ ಸಲ್ಲಿಸಬಹುದು.
ಮಾಹಿತಿಗೆ ಇಲಾಖೆಯ ವೆಬ್‌ಸೈಟ್ ಅಥವಾ ಸಹಾಯವಾಣಿ: 9900667916, 9113512565, 9611418726, 9900509959, 9035395137, 9900509959 ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ದ.ಕ.ಜಿಲ್ಲಾ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





