Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಇನ್ನಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ...

ಇನ್ನಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗ್ಯಾರಂಟಿ ಅದಾಲತ್

ವಾರ್ತಾಭಾರತಿವಾರ್ತಾಭಾರತಿ3 July 2025 11:09 PM IST
share
ಇನ್ನಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗ್ಯಾರಂಟಿ ಅದಾಲತ್

ಕಾರ್ಕಳ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಥಮ "ಗ್ಯಾರಂಟಿ ಅದಾಲತ್" ಕಾರ್ಯಕ್ರಮವು ಇನ್ನಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯಿತು.

ಇನ್ನಾ ಗ್ರಾಮದ ಮುದ್ದಾಣು ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಪದಾಧಿಕಾರಿಗಳ, ತಾಲೂಕು ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿ ಗಳು ಗ್ಯಾರಂಟಿ ಫಲಾನುಭವಿಗಳ ಕುಂದು ಕೊರತೆಗಳನ್ನು ಆಲಿಸಿದರು ಹಾಗೂ ಸಮಸ್ಯೆಗಳಿಗೆ ಸ್ಥಳ ದಲ್ಲಿಯೇ ಪರಿಹಾರವನ್ನು ಸೂಚಿಸಿದರು.

ಅದಾಲತ್,ನ್ನು ಉದ್ಘಾಟಿಸಿ ಮಾತನಾಡಿದ ಗ್ಯಾರಂಟಿ ಸಮಿತಿಯ ಜಿಲ್ಲಾಧ್ಯಕ್ಷರಾದ ಅಶೋಕ್ ಕೊಡವೂರು ಅವರು ಗ್ಯಾರಂಟಿ ಅದಾಲತ್ ನಡೆಸುವುದರಿಂದ ಯೋಜನೆಯ ಅನುಷ್ಠಾನಕ್ಕೆ ಇನ್ನಷ್ಟು ವೇಗ ದೊರಕಿದಂತಾಗುತ್ತದೆ ಎಂದರು.

ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾದ್ಯಕ್ಷರಾದ ಉದಯ ಶೆಟ್ಟಿ ಮುನಿಯಾಲು ಅವರು ಮಾತ ನಾಡಿ ಅಭಿವೃದ್ಧಿ ಎಂದರೆ ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳ ನಿರ್ಮಾಣ ಮುಂತಾದ ಬೌಗೋಳಿಕ ಅಭಿವೃದ್ಧಿ ಮಾತ್ರವಲ್ಲ, ಬೌಗೋಳಿಕ ಅಭಿವೃದ್ಧಿಯ ಜೊತೆಜೊತೆಗೆ ಜನರ ಜೀವನಮಟ್ಟ ಸುಧಾರಣೆಯೂ ಅಭಿವೃದ್ಧಿಯೇ ಆಗಿದೆ, ಈ ಹಿನ್ನೆಲೆಯಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯ ಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ಐತಿಹಾಸಿಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ನಡೆಯಿತು, ಈ ಯೋಜನೆಯಲ್ಲಿ ಪ್ರತೀ ವಿಧಾನಸಭಾ ಕ್ಷೇತ್ರಕ್ಕೂ 250 ಕೋಟಿ ಅನುದಾನವು ಹರಿದು ಬರುತ್ತಿದ್ದು ಇದು ನೇರವಾಗಿ ಜನರ ಕೈ ಸೇರುತ್ತಿದೆ ಎಂದರು.

ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಅಜಿತ್ ಹೆಗ್ಡೆ ಮಾಳ ಅವರು ಮಾತನಾಡಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕಾರ್ಕಳ ತಾಲೂಕಿನಲ್ಲಿ ಅತ್ಯಂತ ಯಶಸ್ವಿಯಾಗಿ ಅನುಷ್ಠಾನವಾಗಿದ್ದು 96 % ಶೇಕಡಾ ಫಲಾನುಭವಿಗಳಿಗೆ ಇದರ ಪ್ರಯೋಜನ ದೊರೆಯುತ್ತಿದೆ ಎಂದರು, ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಅಂಕಿ ಅಂಶಗಳನ್ನು ದಾಖಲೆ ಸಮೇತವಾಗಿ ಸಭೆಯ ಮುಂದೆ ವಾಚಿಸಿದರು.

ಇನ್ನಾ ಗ್ರಾಮ ಪಂಚಾಯತ್ ಸದಸ್ಯ ಮತ್ತು ಉಡುಪಿ ಜಿಲ್ಲಾ ಗ್ಯಾರಂಟಿ ಸಮಿತಿಯ ಸದಸ್ಯರಾದ ದೀಪಕ್ ಕೋಟ್ಯಾನ್ ಇನ್ನಾರವರು ಸಭೆಯನ್ನುದ್ದೇಶಿಸಿ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ಮಾತೃ ಹೃದಯ, ತಾಯಿ ತನಗೆ ಎಷ್ಟೇ ಕಷ್ಟವಾದರೂ ಮಕ್ಕಳ ಹೊಟ್ಟೆ ತುಂಬಿಸುವ ಕೆಲಸ ಮಾಡು ತ್ತಾಳೆ, ಅದೇ ರೀರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಬಡಜನರ ಹೊಟ್ಟೆ ಹಸಿವನ್ನು ನೀಗಿಸುವ ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಗಳನ್ನು ನೀಡುವ ಮೂಲಕ ತಾನು ತಾಯಿ ಹೃದಯದ ಮುಖ್ಯಮಂತ್ರಿ ಎಂದು ನಿರೂಪಿಸಿದ್ದಾರೆ ಎಂದರು.

ತಾಲೂಕು ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಪ್ರಶಾಂತ್ ರಾವ್ ಮಾತನಾಡಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಇಲಾಖಾ ಮಟ್ಟದಲ್ಲಿ ಶಕ್ತಿಮೀರಿ ಪ್ರಯತ್ನಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿದ್ಯುತ್ ಇಲಾಖೆ, ಸಾರಿಗೆ ಇಲಾಖೆ, ಯುವನಿಧಿಗೆ ಸಂಬಂದಿಸಿದ ಇಲಾಖೆ ಮತ್ತು ಆಹಾರ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯಲ್ಲಿ ಗ್ಯಾರಂಟಿ ಅನುಷ್ಠಾನದ ವರದಿಗಳನ್ನು ವಾಚಿಸಿದರು.

ಈ ಸಂದರ್ಭ ಇನ್ನಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸರಿತಾ ಶೆಟ್ಟಿ, ಇನ್ನಾ ಮುದ್ದಾಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ದಿವಾಕರ ಶೆಟ್ಟಿ, ಹಾಗೂ ಗ್ರಾಮ ಪಂಚಾಯತ್ ಆಡಳಿತ ಅಧಿ ಕಾರಿ, ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು, ಗ್ಯಾರಂಟಿ ಫಲಾನುಭವಿಗಳು, ಮಹಿಳೆಯರು ಉಪಸ್ಥಿತರಿದ್ದರು.

ಇನ್ನಾ ಗ್ರಾಮ ಪಂಚಾಯತ್ ಸದಸ್ಯರಾದ ಕುಶ.ಆರ್.ಮೂಲ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X