ಧರ್ಮಸ್ಥಳ ಗ್ರಾಮದ ಅಪರಾಧ ಕೃತ್ಯಗಳ ಮಾಹಿತಿ ಬಗ್ಗೆ ಪತ್ರ ವೈರಲ್ ಪ್ರಕರಣ: ವ್ಯಕ್ತಿಯಿಂದ ದೂರು ಸಲ್ಲಿಕೆ
ಸೂಕ್ತ ಕಾನೂನು ಕ್ರಮ: ದ.ಕ. ಜಿಲ್ಲಾ ಎಸ್ಪಿ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ವ್ಯಕ್ತಿಯೊಬ್ಬ ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವು ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದ್ದು, ವಿಷಯಕ್ಕೆ ಸಂಬಂಧಿಸಿ ಗುರುವಾರ ವ್ಯಕ್ತಿಯಿಂದ ದೂರು ದಾಖಲಾಗಿದೆ ಎಂದು ದ.ಕ. ಜಿಲ್ಲಾ ಎಸ್ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವ್ಯಕ್ತಿಯಿಂದ ಪೊಲೀಸ್ ಅಧೀಕ್ಷಕರ ಕಚೇರಿಗೆ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ಸಲ್ಲಿಕೆಯಾಗಿರುತ್ತದೆ ಎಂದು ತಿಳಿದುಬಂದಿದೆ.
ದೂರನ್ನು ಸ್ವೀಕರಿಸಲಾಗಿದ್ದು, ದೂರಿನ ಬಗ್ಗೆ ವಿಚಾರಣೆ ನಡೆಸಿ, ಮುಂದಿನ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





