Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾರ್ಕಳ: ಬ್ಲಾಕ್ ಕಾಂಗ್ರೆಸ್ ವತಿಯಿಂದ...

ಕಾರ್ಕಳ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುಣ್ಯಸ್ಮರಣೆ

ವಾರ್ತಾಭಾರತಿವಾರ್ತಾಭಾರತಿ4 July 2025 7:08 PM IST
share
ಕಾರ್ಕಳ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುಣ್ಯಸ್ಮರಣೆ

ಕಾರ್ಕಳ: ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಸಾಧಕ. ಒಬ್ಬ ಶಾಸಕನಾಗಿ ಸಾಂವಿಧಾನಿಕ ಮೌಲ್ಯದಡಿಯಲ್ಲಿ ಕಾರ್ಯ ನಿರ್ವಹಿಸಿ ಸರಕಾರದ ಸೌಲಭ್ಯಗಳನ್ನು ಜನರಿಗೆ ತಲಪಿಸುವಲ್ಲಿ ಯಶಸ್ವಿಯಾದವರು. ಭೂ ಸುಧಾರಣಾ ಮಸೂದೆ ಯನ್ನು ಯಶಸ್ವಿಯಾಗಿ ಜಾರಿ ಮಾಡುವಲ್ಲಿ ಗೇಣಿದಾರರ ಪರವಾಗಿ ಅಹರ್ನಿಷಿ ದುಡಿದವರು. ಅವರ ರಾಜಕೀಯ ಮತ್ತು ಸಾಮಾಜಿಕ ಬದುಕು ನಮಗೆಲ್ಲರಿಗೂ ಆದರ್ಶವಾಗಿದೆ ಎಂದು ಕಾಂಗ್ರೆಸ್ ನಾಯಕ ಉದಯ ಕುಮಾರ್ ಶೆಟ್ಟಿ ಮುನಿಯಾಲು ಹೇಳಿದರು.

ಅವರು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಯೋಜಿಸಿದ್ದ ದಿ. ಗೋಪಾಲ ಭಂಡಾರಿಯವರ 6ನೇ ಪುಣ್ಯಸ್ಮರಣೆ ಕಾರ್ಯಕ್ರಮದ ನಿಮಿತ್ತ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಕಾರ್ಕಳ ದೇವಾಡಿಗ ಸುಧಾರಕ ಸಂಘದ ಸಭಾಂಗಣದಲ್ಲಿ ನಡೆದ ನುಡಿ ನಮನ ಹಾಗು ರಕ್ತದಾನ ಶಿಬಿರದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾಡುತ್ತಿದ್ದರು.

ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಮಾತನಾಡಿ ದಿವಂಗತ ಗೋಪಾಲ ಭಂಡಾರಿ ಯವರು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿಯವರ ಜನಪರ ಕಾರ್ಯಸಾಧನೆಗಳನ್ನು ಜನ ಮಾನಸಕ್ಕೆ ತಲಪಿಸಿದವರು. ಎರಡು ಅವಧಿಗೆ ಕ್ಷೇತ್ರದ ಶಾಸಕರಾಗಿ ವಿಧಾನ ಸಭೆಯಲ್ಲಿ ಹೆಬ್ರಿ ತಾಲೂಕು ಘೋಷಣೆಯ ಬಗ್ಗೆ ಧ್ವನಿ ಎತ್ತಿ ಅದನ್ನು ಸಾಧಿಸಿ ತೋರಿಸಿದವರು. ಕ್ಷೇತ್ರದ ಯುವ ರಾಜಕಾರಿಣಿಗಳು ಅವರ ಆದರ್ಶವನ್ನು ಮೈಗೂಡಿಸಿಕೊಳ್ಳ ಬೇಕು ಎಂದು ಕರೆ ನೀಡಿದರು.

ಹಿರಿಯ ನ್ಯಾಯವಾದಿ ಶೇಖರ ಮಡಿವಾಳ ಮಾತನಾಡಿ ಕಾರ್ಕಳದ ವಿಧಾನ ಸಭಾ ಕ್ಷೇತ್ರಕ್ಕೆ ಭಂಡಾರಿ ಯವರ ಋಣವಿದೆ. ಆಶ್ರಯ ಯೋಜನೆ, ಅಕ್ರಮ ಸಕ್ರಮ, 94ಸಿ ಮತ್ತು ಸಿಸಿ ಯಶಸ್ವೀ ಅನುಷ್ಠಾನ , ಶಿಕ್ಷಣ ಹಾಗು ಆರೋಗ್ಯ ಕ್ಷೇತ್ರದಲ್ಲಿ ಅವರ ಸಾಧನೆ ಅಪಾರ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ ದಿ. ಗೋಪಾಲ ಭಂಡಾರಿ ಯವರು ಯುವ ಜನಾಂಗದ ಪ್ರಾತಃ ಸ್ಮರಣೀಯ ರಾಜಕಾರಣಿ. ಅವರ ಬದುಕು ಮತ್ತು ರಾಜಧರ್ಮದ ನಡೆ ನಮಗೆಲ್ಲ ಅದರ್ಶ, ನನ್ನ ರಾಜಕೀಯ ಬದುಕಿಗೆ ಅವರ ಆದರ್ಶವೇ ಪ್ರೇರಣೆಯಾಗಿದೆ ಎಂದರು.

ಕೆಪಿಸಿಸಿ ಸದಸ್ಯರಾದ ನೀರೆ ಕೃಷ್ಣ ಶೆಟ್ಟಿ, ಸುರೇಂದ್ರ ಶೆಟ್ಟಿ ಸಂದರ್ಭೋಚಿತವಾಗಿ ಮಾತುಗಳನ್ನಾಡಿ ನುಡಿನಮನ ಸಲ್ಲಿಸಿದರು.

82 ಯುನಿಟ್ ರಕ್ತದಾನಗೈದ ದಾನಿಗಳಿಗೆ ಸಸಿ ಮತ್ತು ಸರ್ಟಿಫಿಕೇಟ್ ನೀಡಿ ಗೌರವಿಸಲಾಯಿತು ಹಾಗೂ ಜರಿಗುಡ್ಡೆ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗೆ ಆರ್ಥಿಕ ಸಹಾಯವನ್ನು ವಿತರಿಸಲಾಯಿತು.

ಈ ಸಂದರ್ಭ ಹಿರಿಯ ಕಾಂಗ್ರೆಸ್ ನಾಯಕರಾದ ಮಂಜುನಾಥ ಪೂಜಾರಿ ಮುದ್ರಾಡಿ, ಜಿಲ್ಲಾ ಉಪಾದ್ಯಕ್ಷ ರಾದ ಸುಧಾಕರ ಕೋಟ್ಯಾನ್, ಜಾರ್ಜ್ ಕ್ಯಾಸ್ಟಲಿನೋ, ಹೆಬ್ರಿ ಬ್ಲಾಕ್ ಅಧ್ಯಕ್ಷರಾದ ಗೋಪಿನಾಥ ಭಟ್, ನವೀನ್ ಅಡ್ಯಂತಾಯ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಭಾನು ಭಾಸ್ಕರ ಪೂಜಾರಿ, ವಿವೇಕಾನಂದ ಶೆಣೈ, ಕಿರಣ್ ಹೆಗ್ಡೆ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರುಗಳಾದ ರೀನಾ ಡಿಸೋಜ, ಮಾಜಿ ಪುರಸಭಾ ಅಧ್ಯಕ್ಷ ಸುಭಿತ್ ಎನ್.ಆರ್, ಕೆ.ಎಮ್.ಎಪ್ ನಿರ್ದೇಶಕರಾದ ಸುಧಾಕರ ಶೆಟ್ಟಿ ಮುಡಾರು, ಉಮೇಶ್ ರಾವ್ ಬಜಗೋಳಿ, ಸಿರಿಯಣ್ಣ ಶೆಟ್ಟಿ ಹಿರ್ಗಾನ, ಉದಯ ಶೆಟ್ಟಿ ಕುಕ್ಕುಂದೂರು, ಅನಿಲ್ ಪೂಜಾರಿ ಕುಕ್ಕುಂದೂರು, ಚೇತನ್ ಶೆಟ್ಟಿ ಕೊರಳ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ, ಸೂರಜ್ ಶೆಟ್ಟಿ ನಕ್ರೆ, ಮಲಿಕ್ ಅತ್ತೂರು, ಮಂಜುನಾಥ ಜೋಗಿ ಹಾಗೂ ವಿವಿಧ ಘಟಕಗಳ ಅಧ್ಯಕ್ಷರುಗಳು, ನಾಮ ನಿರ್ದೇಶಿತ ಸದಸ್ಯರುಗಳು, ಪುರಸಭಾ ಸದಸ್ಯರು, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರುಗಳು, ಪಂಚಾಯತ್ ಸದಸ್ಯರುಗಳು, ಚುನಾಯಿತ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಗ್ಯಾರಂಟಿ ಸಮಿತಿಯ ತಾಲೂಕು ಅಧ್ಯಕ್ಷರಾದ ಅಜಿತ್ ಹೆಗ್ಡೆ ಸ್ವಾಗತಿಸಿ ನಗರ ಅಧ್ಯಕ್ಷ ರಾಜೇಂದ್ರ ದೇವಾಡಿಗ ಧನ್ಯವಾದವಿತ್ತು ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ನಿರೂಪಿಸಿದರು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X