Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜ್ಯ ಸರ್ಕಾರದಿಂದ ಪ್ರಕೃತಿ ವಿಕೋಪ...

ರಾಜ್ಯ ಸರ್ಕಾರದಿಂದ ಪ್ರಕೃತಿ ವಿಕೋಪ ಪರಿಹಾರವೇ ಬಂದಿಲ್ಲ: ಶಾಸಕ ಕಾಮತ್

ವಾರ್ತಾಭಾರತಿವಾರ್ತಾಭಾರತಿ5 July 2025 7:43 PM IST
share
ರಾಜ್ಯ ಸರ್ಕಾರದಿಂದ ಪ್ರಕೃತಿ ವಿಕೋಪ ಪರಿಹಾರವೇ ಬಂದಿಲ್ಲ: ಶಾಸಕ ಕಾಮತ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪದಿಂದಾಗಿರುವ ಹಾನಿ, ಕೈಗೊಂಡ ಪರಿಹಾರ ಕ್ರಮ ಸಹಿತ ಸಹಿತ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಪಾಲಿಕೆ ವ್ಯಾಪ್ತಿಯ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದರು.

ಈ ಬಾರಿಯ ಪ್ರಕೃತಿ ವಿಕೋಪದಿಂದಾಗಿ ನಗರದ ಹಲವೆಡೆ ರಸ್ತೆ, ಚರಂಡಿ, ರಾಜ ಕಾಲುವೆ, ತಡೆಗೋಡೆ ಗಳಿಗೆ ವಿಪರೀತ ಹಾನಿಯಾಗಿದೆ. ಕಾನೂನಾತ್ಮಕವಾಗಿ ತಡೆಗೋಡೆಗೆ ಪರಿಹಾರ ಒದಗಿಸಲು ಸಾಧ್ಯವಿಲ್ಲ ದಿದ್ದರೂ ಈ ಹಿಂದೆ ಬಿಜೆಪಿ ಸರಕಾರದ ಅವಧಿಯಲ್ಲಿ 25ರಿಂದ 50 ಕೋ.ರೂ.ವರೆಗೂ ಅನುದಾನವನ್ನು ತಂದು ನಗರದಲ್ಲಿ ಪರಿಹಾರ ಕಾರ್ಯ ನಡೆಸಲಾಗಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಮಂಗಳೂರು ಮಹಾನಗರ ಪಾಲಿಕೆಗೆ ವಿಶೇಷ ಅನುದಾನವನ್ನೇ ನೀಡಿಲ್ಲ. ಈ ಹಿಂದಿನ ಮಳೆ ಹಾನಿಯ ಪರಿಹಾರ ಧನವೂ ಬಂದಿಲ್ಲ. ಈ ಬಾರಿಯ ಪರಿಹಾರದ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಲಿದೆ. ಅದೂ ಬಾಕಿಯಾದರೆ ಕ್ಷೇತ್ರದ ಜನತೆ ತೀವ್ರ ಸಮಸ್ಯೆ ಎದುರಿಸಬೇಕಾ ಗುತ್ತದೆ ಎಂದರು.

ಇದೀಗ ರಾಜ್ಯ ಸರಕಾರ ಮನೆಗಳಿಗೆ ಅಲ್ಪಮೊತ್ತದ ಪರಿಹಾರ ನೀಡುತ್ತಿದ್ದರೂ ರಸ್ತೆ, ಚರಂಡಿ, ರಾಜ ಕಾಲುವೆ, ತಡೆಗೋಡೆಗಳಿಗೆ ಉಂಟಾಗಿರುವ ತೀವ್ರ ಹಾನಿಯ ಬಗ್ಗೆ ಯಾವುದೇ ಕ್ರಮವಹಿಸಿಲ್ಲ ಎಂದ ಶಾಸಕ ಕಾಮತ್, ಎರಡು ವರ್ಷಗಳಲ್ಲಿ ಆಗಿರುವ ಹಾನಿ ಹಾಗೂ ಮುಂದೆ ಅದನ್ನು ತಡೆಗಟ್ಟುವ ಬಗ್ಗೆ ಪಾಲಿಕೆ ಮತ್ತು ಕಂದಾಯ ಅಧಿಕಾರಿಗಳು ವಾರದೊಳಗೆ ಜಂಟಿಯಾಗಿ ವರದಿ ಸಿದ್ದಪಡಿಸಲು ಸೂಚಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮಳೆಗಾಲ ಮುಗಿಯುತ್ತಿದ್ದಂತೆ ಸರಕಾರದ ಅನುದಾನ ಹೊಂದಿಸಿಕೊಂಡು ಎಲ್ಲಾ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಲಾಗುವುದು ಎಂದರು. ಈ ಸಂದರ್ಭ ಮನಪಾ ಕಾರ್ಯಪಾಲಕ ಇಂಜಿನಿಯರ್ ನರೇಶ್ ಶೆಣೈ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X