Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಗೆ...

ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಗೆ ಯಕ್ಷಮಂಗಳ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ7 July 2025 4:37 PM IST
share
ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಗೆ ಯಕ್ಷಮಂಗಳ ಪ್ರಶಸ್ತಿ ಪ್ರದಾನ

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ವತಿಯಿಂದ ಇತ್ತೀಚೆಗೆ ನಡೆದಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅನಾರೋಗ್ಯದ ಕಾರಣದಿಂದ ಗೈರು ಹಾಜರಾಗಿದ್ದ ತೆಂಕು ತಿಟ್ಟಿನ ಖ್ಯಾತ ಬಣ್ಣದ ವೇಷಧಾರಿ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರಿಗೆ ಸೋಮವಾರ ಮಂಗಳೂರು ವಿವಿಯಲ್ಲಿ ಯಕ್ಷಮಂಗಳ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿನಂದನಾ ಭಾಷಣ ಮಾಡಿದ ಜಾನಪದ ವಿದ್ವಾಂಸರಾದ ಡಾ.ಕೆ. ಚಿನ್ನಪ್ಪ ಗೌಡ ಅವರು, ಸದಾಶಿವ ಶೆಟ್ಟಿಗಾರ್ ಬಣ್ಣದ ಮಾಲಿಂಗರ ಶಿಷ್ಯರಾಗಿ ತೆಂಕುತಿಟ್ಟು ಯಕ್ಷಗಾನ ರಂಗದಲ್ಲಿ ಓರ್ವ ಪರಂಪರೆಯ ಸಮರ್ಥ ಹಿರಿಯ ಕಲಾವಿದರಾಗಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ ಸುಮಾರು 42 ವರ್ಷಗಳ‌ ಸುದೀರ್ಘವಾಗಿ ದುಡಿದು ಕಲಾಕ್ಷೇತ್ರಕ್ಕೆ ತಮ್ಮದೇ ಕೊಡುಗೆ ನೀಡಿದ್ದಾರೆ. ಅವರ ಆರೋಗ್ಯವು ಸುಧಾರಿಸಿ ಇನ್ನಷ್ಟು ಕಾಲ ಯಕ್ಷಗಾನ ಸೇವೆಯಲ್ಲಿ ದುಡಿಯುವಂತಾಗಲಿ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್. ಧರ್ಮ ಅವರು, ಮಂಗಳೂರು ವಿವಿಯ ಯಕ್ಷಗಾನ ಅಧ್ಯಯನ ಕೇಂದ್ರವು ಹಿರಿಯ ಯಕ್ಷಗಾನ ಕಲಾವಿದರ ಅನುಭವ ಕಥನದ ದಾಖಲೀಕರಣದೊಂದಿಗೆ ಮಹತ್ವದ ಕಾರ್ಯ ಮಾಡುತ್ತಿದೆ. ಜೊತೆಗೆ ಯಕ್ಷಮಂಗಳ ಪ್ರಶಸ್ತಿಯ ಮೂಲಕ ಹಿರಿಯ ಅರ್ಹ ಕಲಾವಿದರನ್ನು ಗುರುತಿಸಿ ಗೌರವಿಸುತ್ತಿರುವುದು ಶ್ಲಾಘನೀಯವಾ ಗಿದೆ. ಹಿರಿಯ ಕಲಾವಿದ ಸದಾಶಿವ ಶೆಟ್ಟಿಗಾರ್ ಅವರಿಗೆ ಅರ್ಹವಾಗಿಯೇ ಈ ಪ್ರಶಸ್ತಿ ಸಂದಿವೆ ಎಂದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸದಾಶಿವ ಶೆಟ್ಟಿಗಾರ್ ಅವರು, ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಇತ್ತೀಚಿಗೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಾಗಿಲ್ಲ ಎಂಬ ಕೊರಗು ಕಾಡು ತ್ತಿತ್ತು. ಇದೀಗ ಇಂದು ಆ ಕನಸು ನನಸಾಗಿದೆ.ಅರ್ಜಿ ಹಾಕದೇ ಗುರುತಿಸಿದ ವಿಶ್ವವಿದ್ಯಾನಿಲಯದ ಪ್ರತಿಷ್ಟಿತ ಪ್ರಶಸ್ತಿಯನ್ನು ಸ್ವೀಕರಿಸಿ ಧನ್ಯನಾಗಿದ್ದೇನೆ ಎಂದರು.

ಕಾರ್ಯಕ್ರಮದಲ್ಲಿ ಮಂಗಳೂರು ವಿವಿ ಕುಲಸಚಿವರಾದ ಕೆ.ರಾಜು ಮೊಗವೀರ, ಹಣಕಾಸು ಅಧಿಕಾರಿ ಪ್ರೊ.ವೈ ಸಂಗಪ್ಪ, ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಡಾ.ನಾಗಪ್ಪ ಗೌಡ, ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಧನಂಜಯ ಕುಂಬ್ಳೆ, ಕಾರ್ಯಾಕಾರಿ ಅಭಿಯಂತರರಾದ ಲವ ಮಹಾದೇವಪ್ಪ, ವಿವಿಯ ಉಪ ಕುಲಸಚಿವರುಗಳಾದ ರೋಶನಿ,‌ ಲಲಿತಾ, ಕುಲಪತಿಗಳ ಆಪ್ತ ಸಹಾಯಕರಾದ ಲತಾ,ಸಹಾಯಕ ಗೌತಂ,ಕೇಂದ್ರದ ಸಂಶೋಧನಾಧಿಕಾರಿ ಡಾ.ಸತೀಶ್ ಕೊಣಾಜೆ, ಸಿಬ್ಬಂದಿ ಸ್ವಾತಿ, ವಿವಿಧ ಪೀಠಗಳ ಸಂಶೋಧನ ಸಹಾಯಕರು ಸಿಬ್ಬಂದಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X