ಸೌಹಾರ್ದ ಸಂಗಮ ದೇಶಕ್ಕೆ ಅತ್ಯಗತ್ಯ: ಮಾಜಿ ಸಚಿವ ರಮಾನಾಥ ರೈ

ಮಂಗಳೂರು: ನಮ್ಮ ಜಿಲ್ಲೆ ಅಭಿವೃದ್ಧಿಯಲ್ಲಿ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದು ಕೊರತೆಯಿರುವುದು ಸೌಹಾರ್ದತೆಯಲ್ಲಿ ಎಂದರು. ಇಂತಹ ಕೊರತೆಯನ್ನು ಸೌಹಾರ್ದ ಸಂಗಮದಂತಹ ಜನಪರ ಕಾರ್ಯಕ್ರಮಗಳು ನೀಗಿಸಬಲ್ಲದು ಎಂದು ಕರ್ನಾಟಕ ಸರಕಾರದ ಮಾಜಿ ಸಚಿವ ಬಿ. ರಮಾನಾಥ ರೈಯವರು ಮೆಚ್ಚುಗೆ ವ್ಯಕ್ತಪಡಿಸಿದರು.
ಅವರು ಮಂಗಳೂರು ಕುದ್ಮುಲ್ ರಂಗರಾವ್ ಪುರಭವನ (ಟೌನ್‍ಹಾಲ್)ದಲ್ಲಿ ಮಂಗಳವಾರ ಹಮ್ಮಿಕೊಂಡ ಎಂಪಿ ಎಂಎಲ್ ಎ ನ್ಯೂಸ್ 13ನೇ ಸೌಹಾರ್ದ ಸಂಗಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು.
ಸೌಹಾರ್ದ ಸಂಗಮವನ್ನು ಕನ್ನಡ ಸಾಹಿತ್ಯ ಪರಿಷತ್, ಬೆಂಗಳೂರು, ಇದರ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರುರವರು ಉದ್ಘಾಟಿಸಿ, ನಮ್ಮ ಜಿಲ್ಲೆಗೆ ಸೌಹಾರ್ದತೆಯ ಕೊರತೆ ಇದ್ದು, ಇಂತಹ ಸೌಹಾರ್ದ ಸಂಗಮಗಳು ಹೆಚ್ಚು ಮಹತ್ವಪೂರ್ಣ ಮತ್ತು ಅರ್ಥಪೂರ್ಣವಾಗಿ ಸಮಾಜವನ್ನು ತಲುಪುತ್ತದೆ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡಾ. ಅಣ್ಣಯ್ಯ ಕುಲಾಲ್ , ಮಂಗಳೂರು ಪ್ರೆಸ್‍ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್, ನಿವೃತ್ತ ಸರಕಾರಿ ವೈದ್ಯಾಧಿಕಾರಿ ಡಾ. ಜೂಲಿಯಾನ ಸಲ್ಡಾನ, ನ್ಯಾಯವಾದಿ ಕೆ. ದಯಾನಂದ ರೈ,ವಾರ್ತಾ ಇಲಾಖೆಯ ಕಚೇರಿ ಸಹಾಯಕ, ದಿವ್ಯ ಆರ್. ಶೆಟ್ಟಿ, ಯುವವಾಹಿನಿ (ರಿ) ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ರಾಜೇಶ್ ಬಿ., ಎಂ.ಸಿ.ಸಿ. ಬ್ಯಾಂಕ್‍ನ ಅಧ್ಯಕ್ಷ ಅನಿಲ್ ಲೋಬೊ, ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ, ಯುವವಾಹಿನಿ (ರಿ) ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್, ಮಹಿಳಾ ಮಂಡಲ ಒಕ್ಕೂಟದ ಅಧ್ಯಕ್ಷೆ ಚಂಚಲಾಕ್ಷಿ ತೇಜೋಮಯ ಮೊದಲಾ ದವರು ಉಪಸ್ಥಿತರಿದ್ದರು.
ನರೇಶ್‍ಕುಮಾರ್ ಸಸಿಹಿತ್ಲು ಇವರು ಸ್ವಾಗತಿಸಿ, ಎಸ್.ಆರ್. ಪ್ರದೀಪ್ ವಂದಿಸಿದರು, ಮಲ್ಲಿಕಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಡಾ. ಅಶೋಕ್ ಶೆಟ್ಟಿ ಬಿ.ಎನ್.ರವರು ಪ್ರಸ್ತಾವನೆಗೈದರು. ದಿನಕರ ಡಿ. ಬಂಗೇರ, ಸನ್ಮಾನ ಪತ್ರ ವಾಚಿಸಿದರು. ಕನ್ನಡ-ತುಳು ಚಲನಚಿತ್ರ ಹಿನ್ನಲೆ ಗಾಯಕ ರವೀಂದ್ರ ಪ್ರಭು ಬಳಗದವರಿಂದ ರಾಗ್ ರಂಗ್ ಸೌಹಾರ್ದ ಸುಗಮ ಸಂಗೀತ ರಸಮಂಜರಿ ಮತ್ತು ದಿನೇಶ್ ಅತ್ತಾವರ ನಿರ್ದೇಶನದಲ್ಲಿ ರಂಗ ಚಲನ ಕಲಾವಿದರು ಮಂಗಳೂರು ಇವರಿಂದ ಯುವಜಾಗೃತಿ ಹಾಡುಗಳ ಮಿಶ್ರಣ ನಾಟಕ ವಿನೂತನ ಕಾರ್ಯಕ್ರಮ ನಡೆಯಿತು.
ಈ ಸೌಹಾರ್ದ ಸಂಗಮದಲ್ಲಿ ಸಹಕಾರ ರತ್ನ ಡಾ. ಅಗರಿ ನವೀನ್ ಭಂಡಾರಿಯವರಿಗೆ ಸೌಹಾರ್ದ ರತ್ನ ಪ್ರಶಸ್ತಿ, ಪುಣೆಯ ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ ಶೆಟ್ಟಿಯವರಿಗೆ ‘ಸಮಾಜ ರತ್ನ’ ಪ್ರಶಸ್ತಿ, ಡಾ. ರೋಹನ್ ಮೊಂತೆರೋ ಅವರಿಗೆ ‘ಉದ್ಯಮ ರತ್ನ ಪ್ರಶಸ್ತಿ,ಡಾ.ಶ್ರೀರಾಮ್ ಭಟ್ ಅವರಿಗೆ ವೈದ್ಯರತ್ನ ಪ್ರಶಸ್ತಿ, ಡಾ. ಅನುರಾಗ್ ಜೆ. ಶೆಟ್ಟಿಯವರಿಗೆ ಬೆಸ್ಟ್ ಡಾಕ್ಟರ್ಸ್ ಅವಾರ್ಡ್, ಬಂಟ್ವಾಳ ಅನಂತಾಡಿಯ ವೈದ್ಯರತ್ನ ನಾಟಿ ವೈದ್ಯ ಗಂಗಾಧರ ಕರಿಯ ಪಂಡಿತ್ ಅವರಿಗೆ ‘ಸೇವಾ ರತ್ನ’ ಪ್ರಶಸ್ತಿ ಸೇರಿದಂತೆ ಆರು ಮಂದಿ ಸಾಧಕರಿಗೆ ಪ್ರಶಸ್ತಿ ನೀಡಿ ಗಣ್ಯರ ಸಮ್ಮುಖ ದಲ್ಲಿ ಸನ್ಮಾನಿಸಲಾಯಿತು.







