Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೈಕಂಬ: ಅಶ್ರಫ್ - ರಹ್ಮಾನ್ ಹತ್ಯೆ...

ಕೈಕಂಬ: ಅಶ್ರಫ್ - ರಹ್ಮಾನ್ ಹತ್ಯೆ ಪ್ರಕರಣ ಉನ್ನತ ತನಿಖೆಗೆ ವಹಿಸಲು ಒತ್ತಾಯಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ8 July 2025 11:11 PM IST
share
ಕೈಕಂಬ: ಅಶ್ರಫ್ - ರಹ್ಮಾನ್ ಹತ್ಯೆ ಪ್ರಕರಣ ಉನ್ನತ ತನಿಖೆಗೆ ವಹಿಸಲು ಒತ್ತಾಯಿಸಿ ಪ್ರತಿಭಟನೆ

ಬಂಟ್ವಾಳ, ಜು 8: ಇತ್ತೀಚೆಗೆ ನಡೆದ ಅಶ್ರಫ್ ವಯನಾಡು ಗುಂಪು ಹತ್ಯೆ ಹಾಗೂ ಅಬ್ದುಲ್ ರಹ್ಮಾನ್‌ ಅವರ ವ್ಯವಸ್ಥಿತ ಹತ್ಯಾ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಬೇಕು, ಸರ್ಕಾರದಿಂದ ಪರಿಹಾರ ನೀಡಬೇಕು ಹಾಗೂ ಹತ್ಯಾ ಸಂಚುಕೋರರ ಬಂಧಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಬಿಸಿರೋಡ್ ಕೈಕಂಬ ಜಂಕ್ಷನ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಮಾತನಾಡಿ 'ವೈಯಕ್ತಿಕ ನೆಲೆಯಲ್ಲಿ ಯಾರೆಲ್ಲಾ ಮೃತರ ಕುಟುಂಬಗಳಿಗೆ ಪರಿಹಾರ ನೀಡಿದ್ದಾರೋ ಅದು ಸ್ವಾಗತಾರ್ಹ. ಆದರೆ ಆ ವೈಯಕ್ತಿಕ ನೆಲೆಯ ಆರ್ಥಿಕ ಸಹಾಯದಿಂದ ಅಮಾಯಕರ ಹತ್ಯೆಗೆ ನ್ಯಾಯ ಸಿಗಲಿಲ್ಲ. ಎರಡೂ ಹತ್ಯೆ ಪ್ರಕರಣಗಳನ್ನೂ ಎಸ್‌ಐಟಿ ತನಿಖೆಗೆ ವಹಿಸ ಬೇಕು. ಹತ್ಯೆಗೆ ಸಂಚು ರೂಪಿಸಿದವರು, ಮಾರಕಾಸ್ತ್ರಗಳನ್ನು ಪೂರೈಕೆ ಮಾಡಿದವರು, ಹಂತಕರಿಗೆ ತರಬೇತಿ ನೀಡಿದವರು ಹೀಗೆ ಎಲ್ಲರನ್ನೂ ಕಠಿಣ ಸೆಕ್ಷನ್‌ನಡಿಯಲ್ಲಿ ಬಂಧಿಸಬೇಕು. ಆ ಮೂಲಕ ಹತ್ಯೆಗೊಳಗಾದವರಿಗೆ ನ್ಯಾಯ ಒದಗಿಸಬೇಕು' ಎಂದು ಹೇಳಿದರು.

ಎಸ್ಡಿಪಿಐ ರಾಜ್ಯ ನಾಯಕ ಅಥಾವುಲ್ಲಾ ಜೋಕಟ್ಟೆಯವರು ಮಾತನಾಡಿ 'ಸರ್ಕಾರ ಇಲ್ಲಿ ಪ್ರಶ್ನೆ ಮಾಡಿದ ವರಿಗೆ ನೋಟಿಸ್ ಜಾರಿಗೊಳಿಸಿ ಭಯಪಡಿಸುತ್ತಿದೆ. ಪ್ರಶ್ನೆ ಮಾಡಿದವರಿಗೆ ನೀವು ಎಸ್ಡಿಪಿಐ ಆಗಿ ಪ್ರಶ್ನೆ ಮಾಡುತ್ತೀರಿ ಎಂದು ದಬ್ಬಾಳಿಕೆ ಮಾಡುತ್ತಿದ್ದೀರಿ. ಆದರೆ ವಾಸ್ತವದಲ್ಲಿ ಎಸ್‌ಡಿಪಿಐ ಎಂಬ ಚಳುವಳಿಯು ಜನಸಾಮಾನ್ಯರ ಆಗ್ರಹಗಳಿಗೆ ಧ್ವನಿಯಾಗುತ್ತಿದೆ. ಜನರು ಪ್ರಜ್ಞಾವಂತರಾಗಿದ್ದಾರೆ.‌ ಹಾಗಾಗಿ ತಕ್ಷಣ ಎಸ್‌ಐಟಿ ತನಿಖೆಗೆ ವಹಿಸಿ ಸರ್ಕಾರದಿಂದ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಎಸ್‌ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ ಮಾತನಾಡಿ ' ದಮನಿತರ, ಮರ್ದಿತರ ಪರ ನಾವು ಸದಾ ಧ್ವನಿಯೆತ್ತುತ್ತಿರುತ್ತೇವೆ. ಅಮಾಯಕ ಅಶ್ರಫ್ , ರಹೀಂ ಕೊಲೆಯನ್ನು ಅಷ್ಟು ಸುಲಭವಾಗಿ ನಾವು ಮರೆಯುವುದಿಲ್ಲ. ಮುಸ್ಲಿಮ್ ಬಾಹುಳ್ಯದ ಕ್ಷೇತ್ರದಲ್ಲಿ ನಿಂತು, ಮುಸ್ಲಿಮರ ಮತ ಪಡೆದು ಗೆದ್ದ ಕಾಂಗ್ರೆಸ್ ಮುಸ್ಲಿಂ ಅಭ್ಯರ್ಥಿಗಳು ಅದೇ ಮುಸ್ಲಿಮರ ಸಮಸ್ಯೆಯ ಬಗ್ಗೆ ಮಾತನಾಡುವುದಿಲ್ಲ ಎಂದಾದರೆ ಏಕೆ ಅಂತವರನ್ನು ಗೆಲ್ಲಿಸಬೇಕೆಂದು ಮುಸ್ಲಿಮರು ಚಿಂತಿಸಬೇಕಿದೆ ' ಎಂದು ವಾಗ್ದಾಳಿ ನಡೆಸಿದರು.

ಪ್ರತಿಭಟನಾಕಾರರಿಂದ ತನಿಖೆಯಲ್ಲಿ ವಿಳಂಬ ನೀತಿ ತೋರುತ್ತಿರುವ ಸರ್ಕಾರದ ವಿರುದ್ಧ ಆಕ್ರೋಶ ಭರಿತ ಘೋಷಣೆಗಳು ಮೊಳಗಿತು.

ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ಮಂಗಳೂರು ನಗರ ಜಿಲ್ಲಾಧ್ಯಕ್ಷರಾದ ಅಬ್ದುಲ್ ಜಲೀಲ್ ಕೆ, ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರಾದ ಮುನಿಶ್ ಆಲಿ, ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರು, ಮಂಗಳೂರು ನಗರ ಉಪಾಧ್ಯಕ್ಷ ಅಶ್ರಫ್ ಅಡ್ಡೂರು, ಎಸ್‌ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಶಾಹುಲ್ ಹಮೀದ್ ಎಸ್ ಎಚ್, ಸಹಿತ ಪಕ್ಷದ ನಾಯಕರು, ಕಾರ್ಯಕರ್ತರು, ಹಿತೈಷಿಗಳು ಭಾಗವಹಿಸಿದ್ದರು.

ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಕಾರ್ಯಕ್ರಮವನ್ನು ನಿರೂಪಿಸಿ, ಧನ್ಯವಾದಗೈದರು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X