Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಕ್ರಮ ಕೆಂಪುಕಲ್ಲು, ಮರಳುಗಾರಿಕೆಯನ್ನು...

ಅಕ್ರಮ ಕೆಂಪುಕಲ್ಲು, ಮರಳುಗಾರಿಕೆಯನ್ನು ಬಿಜೆಪಿ ಬೆಂಬಲಿಸುವುದಿಲ್ಲ: ಸತೀಶ್ ಕುಂಪಲ

ವಾರ್ತಾಭಾರತಿವಾರ್ತಾಭಾರತಿ9 July 2025 6:39 PM IST
share
ಅಕ್ರಮ ಕೆಂಪುಕಲ್ಲು, ಮರಳುಗಾರಿಕೆಯನ್ನು ಬಿಜೆಪಿ ಬೆಂಬಲಿಸುವುದಿಲ್ಲ: ಸತೀಶ್ ಕುಂಪಲ

ಮಂಗಳೂ: ಅಕ್ರಮವಾಗಿ ಕೆಂಪುಕಲ್ಲು ಕೋರೆ, ಮರಳು ಗಣಿಗಾರಿಕೆಗೆ ಬಿಜೆಪಿ ಬೆಂಬಲ ನೀಡುವುದಿಲ್ಲ. ಆದರೆ ಕರ್ನಾಟಕ ಸರಕಾರ ಅಧಿಕೃತ ಪರವಾನಗಿ ನೀಡುವಲ್ಲಿ ಎಡವಿದ್ದು, ಅರ್ಜಿ ಸಲ್ಲಿಸಿದ 21 ದಿನಗಳ ಒಳಗಾಗಿ ಅನುಮತಿ ನೀಡುವಂತೆ ಎಂದು ದ.ಕ. ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಆಗ್ರಹಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಈಗ ಆರು ತಿಂಗಳಾದರೂ ಪರವಾನಗಿ ಸಿಗುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎದುರಾಗಿರುವ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ ಬಗೆಹರಿಸಲು ವಿಫಲವಾಗಿರುವ ಸರಕಾರದ ವಿರುದ್ಧ ಬಿಜೆಪಿ ವತಿಯಿಂದ ಜಿಲ್ಲೆಯ ಎಲ್ಲ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಜುಲೈ 14ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಸತೀಶ್ ಕುಂಪಲ ಹೇಳಿದರು.

ಕೆಂಪುಕಲ್ಲು, ಮರಳು ಕೊರತೆಯಿಂದಾಗಿ ಜಿಲ್ಲೆಯಲ್ಲಿ ಮನೆ ನಿರ್ಮಾಣ, ಕಟ್ಟಡ ನಿರ್ಮಾಣ ಕಾಮಗಾರಿ ಗಳು ಅರ್ಧಕ್ಕೆ ನಿಂತಿವೆ, ಕಾರ್ಮಿಕರು ಕೈಗೆ ಕೆಲಸ ಇಲ್ಲದೆ ತೊಂದರೆಗೆ ಸಿಲುಕಿದ್ದಾರೆ. ನಿಯಮ ಸರಳೀಕರಣ ಮಾಡುವುದಾಗಿ ಹೇಳಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ, ಭರವಸೆ ಈಡೇರಿಸುವಲ್ಲಿ ವಿಫಲವಾಗಿದೆ ಎಂದರು.

ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಸಿಆರ್‌ಝೆಡ್‌ನಲ್ಲಿ ಎರಡು ವರ್ಷಗಳಿಂದ ಮರಳು ತೆಗೆ ಯಲು ಮರಳು ನೀತಿ ಜಾರಿಗೊಳಿಸಿಲ್ಲ. ಈ ಸಂಬಂಧ ಸಭೆಯೂ ನಡೆದಿಲ್ಲ ಎಂದರು.

ಶಾಸಕ ಡಾ. ಭರತ್ ಶೆಟ್ಟಿ ಅವರು , ಮರಳು ವ್ಯವಹಾರದಲ್ಲಿ ರಾಜಕೀಯ ಧುರೀಣರು , ಅಧಿಕಾರಿಗಳು ಶಾಮೀಲಾಗಿದ್ದಾರೆ. ಕೇರಳ ಮಾದರಿಯಲ್ಲಿ ಇಲ್ಲಿಯೂ ಕೆಂಪುಕಲ್ಲು ಅಧಿಕೃತ ಪೂರೈಕೆಗೆ ಅವಕಾಶ ನೀಡಲಿ ಎಂದರು.

ಶಾಸಕ ರಾಜೇಶ್ ನಾಯ್ಕ್ ಮಾತನಾಡಿ, ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಉಪನಿರ್ದೇಶ ಕರ ಹುದ್ದೆ ಖಾಲಿ ಇದ್ದು, ಹಿರಿಯ ಭೂ ವಿಜ್ಞಾನಿ ಪ್ರಭಾರಿಯಾಗಿದ್ದಾರೆ. ಮರಳು ಹಾಗೂ ಕೆಂಪುಕಲ್ಲು ಸಮಸ್ಯೆ ಬಗ್ಗೆ ಹೇಳಿದರೆ ಸ್ಪಂದನೆ ಇಲ್ಲ ಎಂದು ತಿಳಿಸಿದರು.

ಮದುವೆಯಾಗುವುದಾಗಿ ನಂಬಿಸಿ, ಯುವತಿಯನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ, ಪುತ್ತೂರಿನ ಸಂತ್ರಸ್ತೆಯ ಮನೆಗೆ ಬಿಜೆಪಿ ನಿಯೋಗ ತೆರಳಿ ಬೆಂಬಲ ನೀಡಿದೆ. ಯುವತಿ ಹಾಗೂ ಆಕೆಯ ಮಗುವಿಗೆ ನ್ಯಾಯ ಸಿಗಬೇಕು. ಆರೋಪಿ ಕೃಷ್ಣ ರಾವ್ ತಂದೆ ಜಗನ್ನಿವಾಸ ರಾವ್ ಅವರಿಗೆ ಬಿಜೆಪಿ ವತಿಯಿಂದ ನೋಟಿಸ್ ಜಾರಿಗೊಳಿಸಲಾಗಿದೆ. ನೋಟಸ್‌ಗೆ ಅವರು ನೀಡುವ ಉತ್ತರ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸತೀಶ್ ಹೇಳಿದರು.

ಶಾಸಕರಾದ ಹರೀಶ್ ಪೂಂಜ, ಭಾಗೀರಥಿ ಮುರುಳ್ಯ, ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಮಂಜುಳಾ ರಾವ್, ಸಂಜಯ ಪ್ರಭು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X