ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

ಮಂಗಳೂರು, ಜು.9: 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ., ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ರಾಜ್ಯ ವಿದ್ಯಾರ್ಥಿವೇತನ (ಖಖ) ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ್ಟ ಜಾತಿಯ ವಿದ್ಯಾರ್ಥಿಗಳು ವೆಬ್‌ಸೈಟ್ www.sw.kar.nic.in ಮೂಲಕ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ವೆಬ್‌ಸೈಟ್ www.twd.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಹತೆಗಳು:- ಮಾನ್ಯತೆ ಪಡೆದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ,ಪ.ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಯ ಪೋಷಕರ ಕುಟುಂಬದ ಆದಾಯ ಮಿತಿ ವಾರ್ಷಿಕ ರೂ.2.50 ಲಕ್ಷಗಳ ಮಿತಿಯೊಳಗೆ ಇರಬೇಕು. ವಿದ್ಯಾರ್ಥಿಯು ಮುಂದಿನ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಹೊಂದಿರಬೇಕು. ಅರ್ಜಿ ಸಲ್ಲಿಸುವ ವಿಧಾನಗಳು ಮತ್ತು ಸಲ್ಲಿಸಬೇಕಾಗಿರುವ ದಾಖಲೆಗಳು http://ssp.postmatric.karnataka.gov.in ನಲ್ಲಿ ಪೋಸ್ಟ್ ಮೆಟ್ರಿಕ್ ಸ್ಕಾಲರ್‌ಶಿಪ್ 2024-25 (POST METRIC SCHOLARSHIP) ರಲ್ಲಿ ಹೊಸ ವಿದ್ಯಾರ್ಥಿಗಳು ಖಾತೆಯನ್ನು ಸೃಜಿಸಿ ಅರ್ಜಿ ಸಲ್ಲಿಸಬೇಕು ಹಾಗೂ ನವೀಕರಣ ವಿದ್ಯಾರ್ಥಿಗಳು ವಿದ್ಯಾರ್ಥಿ ಲಾಗಿನ್ ನಲ್ಲಿ ಹಳೆಯ ನೋಂದಣಿ ಸಂಖ್ಯೆ ಹಾಗೂ ಪಾಸ್‌ವರ್ಡ್ ಬಳಸಿಕೊಂಡು ಅರ್ಜಿ ಸಲ್ಲಿಸಬೇಕು. 2025-26ನೇ ಸಾಲಿಗೆ ಪ್ರವೇಶಾತಿ ಪಡೆಯುವ ಮೊದಲು ಎಸ್‌ಎಸ್‌ಪಿ ಲಾಗಿನ್ ಆಗಿ ಮೊದಲನೇ ಹಂತದಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ವಿವರಗಳನ್ನು ನಮೂದಿಸಿ ‘ಫ್ರೀ ಶೀಪ್ ಕಾರ್ಡ್’ ಗೆ ಅರ್ಜಿ ಸಲ್ಲಿಸಿ ಕಾರ್ಡ್ ಡೌನ್‌ಲೋಡ್ ಮಾಡಿಕೊಳ್ಳಬಹುದು.
ವಿದ್ಯಾರ್ಥಿಗಳ ಅಥವಾ ಪೋಷಕರ ಆಧಾರ್ ಸಂಖ್ಯೆ ಮತ್ತು ಆಧಾರ್‌ನಲ್ಲಿರುವರ ಹಾಗೆ ಇರುವ ಹೆಸರು, ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆ, ವಿದ್ಯಾರ್ಥಿಗಳ ಇ-ಮೇಲ್ ಐಡಿ, ವಿದ್ಯಾರ್ಥಿಗಳ ಎಸ್‌ಎಸ್‌ಎಲ್‌ಸಿ ನೋಂದಣಿ ಸಂಖ್ಯೆ, ವಿದ್ಯಾರ್ಥಿಗಳ ಹೆಸರಿನಲ್ಲಿರುವ ಜಾತಿ/ಆದಾಯ ಪ್ರಮಾಣದ ಪತ್ರದ ಆರ್.ಡಿ ಸಂಖ್ಯೆ , ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ (ಯುಡಿಐಡಿ ಗುರುತಿನ ಚೀಟಿ), ವಿದ್ಯಾರ್ಥಿಯು ವಾಸವಿರುವ ಜಿಲ್ಲೆ ತಾಲೂಕು ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ, ವಿದ್ಯಾರ್ಥಿಯ ಕಾಲೇಜು ದಾಖಾಲಾತಿ/ನೊಂದಣಿ ಸಂಖ್ಯೆ, ಸಂಬಂಧಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ), ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ), ವಿದ್ಯಾರ್ಥಿಯು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಕುಟುಂಬ ತಂತ್ರಾಂಶದಲ್ಲಿ ನೋಂದಣಿಯಾಗಿ ಕುಟುಂಬ ಗುರುತಿನ ಸಂಖ್ಯೆಯನ್ನು ಕಡ್ಡಾಯವಾಗಿ ಹೊಂದಿರಬೇಕು.
ಹೆಚ್ಚಿನ ಮಾಹಿತಿಗೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ(ಗ್ರೇಡ್-1) ದೂ.ಸಂ:- 9480843114 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್-1) ಪ್ರಕಟನೆಯಲ್ಲಿ ತಿಳಿಸಿದ್ದಾರೆ.







