ಮಂಗಳೂರು: ನಿವೃತ್ತ ಪ್ರಾಂಶುಪಾಲ ವಿಶ್ವನಾಥ್ ನಿಧನ

ಮಂಗಳೂರು: ಶಿಕ್ಷಣ ರಂಗದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಗುರುಪುರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದ ವಿಶ್ವನಾಥ ಜೋಗಿ ಕದ್ರಿ (72) ಮಂಗಳವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಶಿಕ್ಷಕಿಯಾಗಿದ್ದ ಪತ್ನಿ ಹಾಗೂ ಏಕೈಕ ಪುತ್ರಿ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಕಳೆದ ಮೂರು ದಶಕಗಳಿಂದ ಬಲ್ಮಠ, ಕಾವೂರು, ಮೊಂಟೆಪದವು ಗುರುಪುರ ಮತ್ತಿತರ ಕಡೆ ಕಾರ್ಯ ನಿರ್ವಹಿಸಿದ್ದ ಅವರು 2014ರಲ್ಲಿ ಪ್ರಾಚಾರ್ಯರಾಗಿ ನಿವೃತ್ತರಾದರು. ಬಳಿಕ ನಗರದ ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದರು.
ಸಂತಾಪ: ಪ್ರೊ. ವಿಶ್ವನಾಥ್ ಕೆ. ನಿಧನಕ್ಕೆ ಲೇಖಕ ಭಾಸ್ಕರ ರೈ ಕುಕ್ಕುವಳ್ಳಿ, ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ಶೆಣೈ, ಕಾಟಿಪಳ್ಳ ಪ.ಪೂ. ಕಾಲೇಜು ಪ್ರಾಚಾರ್ಯೆ ಅನುಸೂಯ ಕೆ.ಪಿ., ನಿವೃತ್ತ ಪ್ರಾಂಶುಪಾಲರಾದ ಶ್ಯಾಮ ಮೊಯಿಲಿ, ಪದ್ಮನಾಭ ರೈ ಸಿದ್ಧಕಟ್ಟೆ ಸಂತಾಪ ಸೂಚಿಸಿದ್ದಾರೆ.
Next Story





