Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರಿನಿಂದ ಮೊಂಟೆಪದವು ಮಾರ್ಗವಾಗಿ...

ಮಂಗಳೂರಿನಿಂದ ಮೊಂಟೆಪದವು ಮಾರ್ಗವಾಗಿ ಮುಡಿಪುವಿಗೆ ಹೆಚ್ಚುವರಿ ಸರ್ಕಾರಿ ಬಸ್ ಬೇಡಿಕೆ: ಸಾರಿಗೆ ಸಚಿವರಿಗೆ ಡಿವೈಎಫ್‌ಐ ಮನವಿ

ವಾರ್ತಾಭಾರತಿವಾರ್ತಾಭಾರತಿ13 July 2025 9:52 PM IST
share
ಮಂಗಳೂರಿನಿಂದ ಮೊಂಟೆಪದವು ಮಾರ್ಗವಾಗಿ ಮುಡಿಪುವಿಗೆ ಹೆಚ್ಚುವರಿ ಸರ್ಕಾರಿ ಬಸ್ ಬೇಡಿಕೆ: ಸಾರಿಗೆ ಸಚಿವರಿಗೆ ಡಿವೈಎಫ್‌ಐ ಮನವಿ

ಮೊಂಟೆಪದವು: ದ. ಕ. ಜಿಲ್ಲೆಯ ಉಳ್ಳಾಲ ತಾಲ್ಲೂಕಿನ ಮಂಜನಾಡಿ, ನರಿಂಗಾನ, ಬಾಳೆಪುಣಿ ಗ್ರಾಮಗಳು ಸೇರಿದಂತೆ ಮೊಂಟೆಪದವು, ಮೋಂಟುಗೋಳಿ, ವಿದ್ಯಾನಗರ, ಕೈರಂಗಳ ಹಾಗೂ ಇನ್ನಿತರ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಸರಕಾರೀ ಬಸ್ಸುಗಳ ಕೊರತೆ ಇದ್ದು, ಖಾಸಗಿ ಬಸ್ಸುಗಳ ಅಸಮರ್ಪಕ ವ್ಯವಸ್ಥೆಯಿಂದ ಸಮಸ್ಯೆಗಳನ್ನು ಎದುರಿಸುತ್ತಿರುವುದರಿಂದ, ಮಂಗಳೂರಿನಿಂದ ತೊಕ್ಕೊಟ್ಟು - ದೇರಳಕಟ್ಟೆ - ನಾಟೆಕಲ್‌ - ಮೊಂಟೆಪದವು ಮಾರ್ಗವಾಗಿ ಮುಡಿಪು ತನಕ ಹೆಚ್ಚುವರಿ ಸರಕಾರಿ ಬಸ್ ವ್ಯವಸ್ಥೆ ಒದಗಿಸಲು ಒತ್ತಾಯಿಸಿ ಇಂದು ಡಿವೈಎಫ್‌ಐ ಮೊಂಟೆಪದವು ಘಟಕದ ವತಿಯಿಂದ ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಸಲ್ಲಿಸಲಾಯಿತು.

ಮಂಜನಾಡಿ, ಮೊಂಟೆಪದವು, ಕೈರಂಗಳ ಸೇರಿದಂತ ಗ್ರಾಮೀಣ ಪ್ರದೇಶದ ಸಾರ್ವಜನಿಕರು ತಮ್ಮ ದೈನಂದಿನ ಕೆಲಸ ಕಾರ್ಯಗಳಿಗಾಗಿ ಹೆಚ್ಚಾಗಿ ನಗರ ಪ್ರದೇಶಗಳನ್ನೇ ಅವಲಂಬಿತರಾಗಿದ್ದಾರೆ. ಅಲ್ಲದೇ ಈ ಪ್ರದೇಶಗಳಿಂದ ನೂರಾರು ವಿದ್ಯಾರ್ಥಿಗಳು ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ಶಿಕ್ಷಣಕ್ಕಾಗಿ ದೇರಳಕಟ್ಟೆ, ಉಳ್ಳಾಲ ಹಾಗೂ ಮಂಗಳೂರು ನಗರಕ್ಕೆ ದಿನಂಪ್ರತಿ ತೆರಳುತ್ತಾರೆ. ಆದರೆ ಈ ಭಾಗದಲ್ಲಿ ಸಾರಿಗೆ ವ್ಯವಸ್ಥೆ ಮಾತ್ರ ಅಸ್ತವ್ಸಸ್ಥವಾಗಿರುತ್ತದೆ. ಅಲ್ಲದೇ ಖಾಸಗೀ ಬಸ್ಸುಗಳಲ್ಲೇ ಸಂಚರಿಸಬೇಕಾದ ಅನಿವಾರ್ಯತೆ ಇರುತ್ತದೆ.

ಹೀಗಿರುವಾಗ ಮಂಗಳೂರು ನಗರದಿಂದ ತೊಕ್ಕೊಟ್ಟು – ದೇರಳಕಟ್ಟೆ – ನಾಟೆಕಲ್ – ಮೊಂಟೆಪದವು ಮಾರ್ಗವಾಗಿ ಮುಡಿಪು ವಿಗೆ ಸರಕಾರೀ ಬಸ್ ಕಲ್ಪಿಸುವಂತೆ ಈ ಪ್ರದೇಶಗಳ ಸಾರ್ವಜನಿಕರು ನಿರಂತರ 13 ವರ್ಷಗಳಿಂದ ಬೇಡಿಕೆಯನ್ನಿಟ್ಟು ಹಲವು ಅಧಿಕಾರಿಗಳಲ್ಲಿ ಒತ್ತಾಯಿಸುತ್ತಾ ಮನವಿಯನ್ನು ಸಲ್ಲಿಸಿರು ತ್ತಾರೆ. ಅದರ ಭಾಗವಾಗಿ 2022 ರಲ್ಲಿ ಈ ಮಾರ್ಗದಲ್ಲಿ ಒಂದು ಸರಕಾರೀ ಬಸ್ಸನ್ನು ಒದಗಿಸಿದ್ದು ನಿರಂತರ ಈ ಮಾರ್ಗದಲ್ಲಿ ಓಡಾಡುತ್ತಿವೆ. ಅಲ್ಲದೇ ದಿನಂಪ್ರತಿ ಈ ಬಸ್ಸು ತುಂಬಿ ತುಳುಕುವುದರಿಂದಲೇ ಉತ್ತಮ ಕಲೆಕ್ಷನ್ ಕೂಡಾ ಇರುತ್ತವೆ. ಅಲ್ಲದೇ ಸಾರ್ವಜನಿಕರು ಕೂಡಾ ಈ ಸರಕಾರೀ ಬಸ್ಸಿಗಾಗಿಯೇ ಗಂಟೆಗಟ್ಟಲೆ ಕಾದು ಸದರಿ ಬಸ್ಸಿನ ಪ್ರಯೋಜನವನ್ನು ಉತ್ತಮವಾಗಿ ಉಪಯೋಗಿಸಿಕೊಂಡು ಬಂದಿರುತ್ತಾರೆ.

ಸದರಿ ಸರಕಾರೀ ಬಸ್ಸು ಹೊರತುಪಡಿಸಿದರೆ ಈ ಮಾರ್ಗದಲ್ಲಿ ಖಾಸಗೀ ಬಸ್ಸುಗಳೇ ಇದ್ದು, ಈ ಖಾಸಗೀ ಬಸ್ಸುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸಂಚರಿಸುವುದರಿಂದ ಲೆಕ್ಕಕ್ಕಿಂತ ಹೆಚ್ಚು ಸಾರ್ವಜನಿ ಕರನ್ನು ಬಸ್ಸುಗಳಲ್ಲಿ ತುಂಬಿಸಲಾಗುತ್ತದೆ, ಮತ್ತು ಈ ಸಂದರ್ಭ ಶಾಲಾ ಕಾಲೇಜು, ಹಾಗೂ ಇತರ ವ್ಯವಹಾರಗಳಿಗೆ ಸಮಯಕ್ಕೆ ಸರಿಯಾಗಿ ತಲುಪುವ ಉದ್ದೇಶದಿಂದ ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು ಎಂದಿಲ್ಲದೇ ಹಲವರನ್ನು ಬಸ್ಸಿನ ಫುಟ್ ಬೋರ್ಡ್ ಗಳಲ್ಲಿ ನೇತಾಡಿಸಿ ಕರೆದುಕೊಂಡು ಹೋಗಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ವೃದ್ಧರಿಗೆ ಖಾಸಗೀ ಬಸ್ಸುಗಳಲ್ಲಿ ಸಂಚರಿಸುವುದು ಅಪಾಯಕಾರಿಯಾಗುತ್ತದೆ. ಈ ಕುರಿತಂತೆ ಈ ಹಿಂದೆಯೂ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗೀಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿಯನ್ನೂ ಸಲ್ಲಿಸಲಾಗಿರುತ್ತದೆ. ಹಾಗಿದ್ದರೂ ಯಾವುದೇ ಸಮರ್ಪಕ ಹೆಚ್ಚುವರಿ ಬಸ್ ವ್ಯವಸ್ಥೆ ಒದಗಿಸದೇ ಇರುವುದರಿಂದ ಇಂದು ರಾಜ್ಯ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಸಲ್ಲಿಸಲಾಯಿತು ಎಂದು ತಿಳಿಸಿದರು.

ಡಿವೈಎಫ್‌ಐ ನಿಯೋಗದಲ್ಲಿ ಡಿವೈಎಫ್‌ಐ ಮುಖಂಡರಾದ ರಝಾಕ್ ಮೊಂಟೆಪದವು, ಮೊಹಮ್ಮದ್ ಜೀಲಾನಿ ಮೊಂಟೆಪದವು, ಸಾಮಾಜಿಕ ಹೋರಾಟಗಾರರಾದ ಅಬೂಬಕ್ಕರ್ ಜಲ್ಲಿ, Dyfi ಮೊಂಟೆಪದವು ಘಟಕ ಅಧ್ಯಕ್ಷರಾದ ಶರೀಫ್ KA, ಕಾರ್ಯದರ್ಶಿ ಶಾಫಿ ಚಾಂದ್ , ಶಾಫಿ ಮುಡಿಪು ಮುಂತಾದವರಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X