ಮಾಸ್ಟರ್ಸ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್: ವಿನೋದ್ ಕುಮಾರ್‌ಗೆ ಕಂಚಿನ ಪದಕ

ಮಂಗಳೂರು, ಜು.14: ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ತೀರ್ಪುಗಾರ ವಿನೋದ್ ಕುಮಾರ್ ಎಂ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ (ಮಾಸ್ಟರ್ 3) 74 ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿದ್ದಾರೆ.
ಜೀವ ವಿಮಾ ನಿಗಮದ ನಿವೃತ್ತ ಅಭಿವೃದ್ಧಿ ಅಧಿಕಾರಿಯಾಗಿದ್ದ ವಿನೋದ್ ಕುಮಾರ್ ಪವರ್‌ಲಿಫ್ಟಿಂಗ್ ಇಂಡಿಯಾದ ಅಧ್ಯಕ್ಷ ಸತೀಶ್ ಕುಮಾರ್ ಕುದ್ರೋಳಿಯ ಶಿಷ್ಯ.
Next Story





