Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ‘ಡ್ರಗ್ಸ್ ವಿರೋಧಿ ಸಮಿತಿ, ಸ್ಕ್ರೀನಿಂಗ್...

‘ಡ್ರಗ್ಸ್ ವಿರೋಧಿ ಸಮಿತಿ, ಸ್ಕ್ರೀನಿಂಗ್ ಕಡ್ಡಾಯಗೊಳಿಸಿ’ ಶಿಕ್ಷಣ ಸಂಸ್ಥೆಗಳಿಗೆ ಪೊಲೀಸ್ ಅಧಿಕಾರಿಗಳ ಸೂಚನೆ

ವಾರ್ತಾಭಾರತಿವಾರ್ತಾಭಾರತಿ14 July 2025 8:55 PM IST
share
‘ಡ್ರಗ್ಸ್ ವಿರೋಧಿ ಸಮಿತಿ, ಸ್ಕ್ರೀನಿಂಗ್ ಕಡ್ಡಾಯಗೊಳಿಸಿ’ ಶಿಕ್ಷಣ ಸಂಸ್ಥೆಗಳಿಗೆ ಪೊಲೀಸ್ ಅಧಿಕಾರಿಗಳ ಸೂಚನೆ

ಮಂಗಳೂರು: ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಡ್ರಗ್ಸ್ ವಿರೋಧಿ ಸಮಿತಿ ರಚನೆ ಮಾಡುವು ದನ್ನು ಕಡ್ಡಾಯಗೊಳಿಸಲಾಗಿದೆ. ಕೆಲ ಶಿಕ್ಷಣ ಸಂಸ್ಥೆಗಳು ಈಗಾಗಲೇ ಸಮಿತಿ ರಚಿಸಿರುವ ಬಗ್ಗೆ ವರದಿ ನೀಡಿವೆ. ಜತೆಗೆ ಸಂಸ್ಥೆಗಳಲ್ಲಿ ಡ್ರಗ್ಸ್ ಸೇವನೆ ಬಗ್ಗೆ ಸ್ಕ್ರೀನಿಂಗ್ ವ್ಯವಸ್ಥೆಯನ್ನೂ ಮಾಡುವ ಮೂಲಕ ಜಿಲ್ಲೆ ಡ್ರಗ್ಸ್ ಮುಕ್ತವನ್ನಾಗಿಸಲು ಸಹಕರಿಸಬೇಕು ಎಂದು ಜಿಲ್ಲಾ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಶಿಕ್ಷಣ ಸಂಸ್ಥೆಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.

ಮಂಗಳೂರು ನಗರ ಪೊಲೀಸರ ನೇತೃತ್ವದಲ್ಲಿ ರಾಷ್ಟ್ರೀಯ ಸೇವಾ ಯೋಜೆ, ಮಂಗಳೂರು ರೋಟರಿ ಕ್ಲಬ್, ನಿಟ್ಟೆ ಇನ್‌ಸ್ಟ್ಯಿೂಟ್ ಆಫ್ ಆರ್ಕಿಟೆಕ್ಚರ್ ಸಹಭಾಗಿತ್ವದಲ್ಲಿ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಮಾದಕ ದ್ರವ್ಯಗಳ ಬಳಕೆ ವಿರುದ್ಧ ಜಾಗೃತಿ ಹಾಗೂ ಕಾಲೇಜುಗಳ ಡ್ರಗ್ಸ್ ವಿರೋಧಿ ಸಮಿತಿಗಳಿಗೆ ಪ್ರೇರಣಾ ಕಾರ್ಯಕ್ರಮದಲ್ಲಿ ಈ ಸೂಚನೆ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಮಾತನಾಡಿ, ಡ್ರಗ್ಸ್ ಸೇವನೆಗೆ ಸಂಬಂಧಿಸಿ 500 ಜನ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಾಗಿದೆ. ಕೆಲ ಸಮಯದ ಹಿಂದೆ ನಡೆದ ಡ್ರಗ್ಸ್ ನಿಯಂತ್ರಣ ಕಾರ್ಯಕ್ರಮದ ಬಳಿಕ 150 ವಿದ್ಯಾರ್ಥಿಗಳು ಡ್ರಗ್ಸ್ ಸೇವನೆಗೆ ಒಳಗಾಗಿರುವುದು ಪತ್ತೆಯಾಗಿದೆ ಎಂದರು.

ಈಗಾಗಲೇ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಡ್ರಗ್ಸ್ ವಿರೋಧಿ ಸಮಿತಿಗಳನ್ನು ರಚಿಸಲು ತಿಳಿಸಲಾಗಿದೆ. ಒಂದು ತಿಂಗಳಲ್ಲಿ 100 ಕಾಲೇಜುಗಳವರು ಸಮಿತಿ ಮಾಡಿರುವುದಾಗಿ ಹೇಳಿದ್ದಾರೆ. ಇನ್ನೂ ಸುಮಾರು 40 ಕಾಲೇಜುಗಳು ಬಾಕಿ ಇವೆ. ಡ್ರಗ್ಸ್ ಸೇವನೆ ಕುರಿತು ವಿದ್ಯಾರ್ಥಿಗಳನ್ನು ನಿಯಮಿತವಾಗಿ ಸ್ಕ್ರೀನಿಂಗ್‌ಗೆ ಒಳಪಡಿಸಲು ನಿರ್ದೇಶನ ನೀಡಲಾಗಿದೆ. ಪೊಲೀಸರು ಕಾಲೇಜಿಗೆ ಬಂದು ಈ ರೀತಿಯ ತಪಾಸಣೆಗಳನ್ನು ಮಾಡುವುದು ನಮಗೆ ಇಷ್ಟ ಇಲ್ಲ. ಹಾಗಾಗಿ ಶಿಕ್ಷಣ ಸಂಸ್ಥೆಗಳೇ ಇದನ್ನು ಜವಾಬ್ಧಾರಿಯುತವಾಗಿ ಮಾಡ ಬೇಕು. ಶಿಕ್ಷಣ ಸಂಸ್ಥೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿಲ್ಲ ಎಂದಾದರೆ ನಾವು ಮಾಡುವುದು ಅನಿವಾರ್ಯವಾಗಲಿದೆ. ಅದಕ್ಕೆ ಅವಕಾಶ ನೀಡಬಾರದು ಎಂದು ಅವರು ಹೇಳಿದರು.

ಡ್ರಗ್ಸ್ ಮುಕ್ತಗೊಳಿಸುವಲ್ಲಿ ಪೋಷಕರ ಪಾತ್ರವೂ ಮಹತ್ವದ್ದಾಗಿದ್ದು, ಸಮಸ್ಯೆ ಕಂಡುಬಂದಾಗ ನೇರವಾಗಿ ಪೊಲೀಸರ ಗಮನಕ್ಕೆ ತನ್ನಿ. ವಿದ್ಯಾರ್ಥಿಗಳು ಕೂಡಾ ತಮ್ಮ ಸುತ್ತಮುತ್ತಲಲ್ಲಿ ಸಹಪಾಠಿಗಳು ಡ್ರಗ್ಸ್ ಸೇವನೆಗೆ ಒಳಗಾದಾಗ ಪೊಲೀಸ್ ಇಲಾಖೆಯಿಂದ ನೀಡಲಾಗಿರುವ ಕ್ಯೂಆರ್ ಕೋಡ್ ಮೂಲಕ ಮಾಹಿತಿ ನೀಡಿ. ಇಲ್ಲಿ ಮಾಹಿತಿ ನೀಡಿದವರ ಅಥವಾ ಸಂತ್ರಸ್ತರ ಹೆಸರು ಕೂಡಾ ಗೌಪ್ಯವಾಗಿರುತ್ತದೆ. ಆ್ಯಪ್ ಮೂಲಕ ಈಗಾಗಲೇ 40 ಮಂದಿ ದೂರು ನೀಡಿದ್ದಾರೆ. ಬೇರೆ ಜಿಲ್ಲೆಗಳಿಂದ ನಮ್ಮಲ್ಲಿಗೆ ಡ್ರಗ್ಸ್ ಪೂರೈಕೆ ಮಾಡುವ ಬಗ್ಗೆ ಮಾಹಿತಿ ನೀಡಿದ್ದು, ಮಾದಕ ದ್ರವ್ಯ ಪತ್ತೆ ವಿಭಾಗದ ತಂಡ ಈಗಾಗಲೇ ಕಾರ್ಯಾಚರಣೆ ನಡೆಸುತ್ತಿದೆ. ಪೂರೈಕೆ ನಿಲ್ಲಬೇಕಾದರೆ ಬೇಡಿಕೆ ನಿಲ್ಲಬೇಕಿದೆ. ಅದಕ್ಕಾಗಿ ಎಲ್ಲರೂ ಜತೆಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಎಸ್ಪಿ ಡಾ. ಅರುಣ್ ಕುಮಾರ್, ಡ್ರಗ್ಸ್ ನಿಯಂತ್ರಣದಲ್ಲಿ ಸಮಾಜದ ಎಲ್ಲರ ಜವಾಬ್ಧಾರಿ ಇದೆ. ಕಾಲೇಜುಗಳಲ್ಲಿ ಡ್ರಗ್ಸ್ ವಿರೋಧಿ ಸಮಿತಿಗಳನ್ನು ಕಡ್ಡಾಯಗೊಳಿಸಲಾಗಿದೆ. ಹಾಗಿದ್ದರೂ ಸಮಸ್ಯೆ ಕಡಿಮೆ ಆಗುವ ಬದಲು ಹೆಚ್ಚಾಗಿದೆ ಎಂದರೆ, ವ್ಯವಸ್ಥೆಯಲ್ಲೇ ಲೋಪ ಇರುವುದನ್ನು ಒಪ್ಪಿಕೊಂಡು ಅದನ್ನು ಸರಿಪಡಿಸುವತ್ತ ನಾವು ಗಮನ ಹರಿಸಬೇಕಾಗಿದೆ. ಶಿಕ್ಷಣ ಸಂಸ್ಥೆಗಳು ತಮ್ಮ ಕ್ಯಾಂಪಸ್‌ನಲ್ಲಿ ಮಾದಕ ದ್ರವ್ಯ ಸೇವನೆ ಕುರಿತಂತೆ ಅಂಜಿಕೆ ವಹಿಸದೆ, ಪರಿಹಾರಕ್ಕೆ ಮುಂದಾಗಬೇಕು ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಮಾನಸಿಕ ರೋಗ ವಿಭಾಗದ ಮುಖ್ಯಸ್ಥ ಹಾಗೂ ಪ್ರಾಧ್ಯಾಪಕ ಡಾ. ಶ್ರೀನಿವಾಸ್ ಭಟ್ ಮಾತನಾಡಿ, ಮಕ್ಕಳ ಹಾವಭಾವಗಳಲ್ಲಿ ವ್ಯತ್ಯಾಸ ಕಂಡು ಬಂದಾಗ ಪೋಷಕರ ಜತೆ ಶಿಕ್ಷಣ ಸಂಸ್ಥೆಗಳವರೂ ಗಮನ ಹರಿಸುವುದು ಮುಖ್ಯ ಎಂದರು.

ಬಾರ್ಕ್ ಡಿ ಎಡಿಕ್ಷನ್ ಸಂಸ್ಥೆಯ ಸಂಸ್ಥಾಪಕ ಗುರುಪ್ರಸಾದ್ ಮಾತನಾಡಿ, ಡ್ರಗ್ಸ್‌ನಿಂದ ತಾನು 17 ವರ್ಷಗಳ ಕಾಲ ಅನುಭವಿಸಿದ ನರಕಯಾತನೆಯನ್ನು ವಿವರಿಸಿದರು.

ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಆರ್ಕಿಟೆಕ್ಚರ್‌ನ ಮುಖ್ಯಸ್ಥ ವಿನೋದ್ ಅರಾನ್ಹ, ಮಾದಕ ದ್ರವ್ಯ ವಿರೋಧಿ ಘಟಕ (ನಾರ್ಕೋಡ್)ದ ಪ್ರಮುಖರಾದ ಹೇಮಲತಾ, ರಾಜೇಶ್ವರಿ, ಸುಜಿತ್, ಗೋವಿಂದ ಮಡಿವಾಳ ಉಪಸ್ಥಿತರಿದ್ದರು.

ಎಸಿಪಿ ಗೀತಾ ಕುಲಕರ್ಣಿ ಸ್ವಾಗತಿಸಿದರು. ಅಕ್ಷತಾ ಶೆಣೈ ಕಾರ್ಯಕ್ರಮ ನಿರೂಪಿಸಿದರು. ಸಲೀಂ ಅಬ್ಬಾಸ್ ವಂದಿಸಿದರು. ವಿವಿಧ ಕಾಲೇಜುಗಳ ಮುಖ್ಯಸ್ಥರು, ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

‘ಡ್ರಗ್ಸ್ ವಿರೋಧಿ ಸಮಿತಿ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಕಡ್ಡಾಯಗೊಳಿಸಲಾಗಿದ್ದು, ಕಟ್ಟುನಿಟ್ಟಾಗಿ ರಚನೆ ಮಾಡಬೇಕು. ಈಗಾಗಲೇ ಎಲ್ಲಾ ಸಂಸ್ಥೆಗಳಿಗೆ ಈ ಬಗ್ಗೆ ಸೂಚನೆ ನೀಡಲಾಗಿದೆ. ಇನ್ನೂ ಕೆಲವು ಸಂಸ್ಥೆಗಳಲ್ಲಿ ಆಗಿಲ್ಲ. ಒಂದು ತಿಂಗಳಲ್ಲಿ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಅಂಗಸಂಸ್ಥೆಗಳು ಈ ಬಗ್ಗೆ ಗಮನ ಹರಿಸಬೇಕು. ಸ್ಕ್ರೀನಿಂಗ್ ಯಾವ ರೀತಿಯಲ್ಲಿ ಮಾಡಬೇಕು ಎಂಬ ಬಗ್ಗೆ ಕಾಲೇಜು ಆಡಳಿತ ಮಂಡಳಿ ಗಮನ ಹರಿಸಬೇಕು. ಡ್ರಗ್ಸ್ ಸೇವನೆ ಮಾಡುವ ಮಾಹಿತಿ ಒದಗಿಸುವ ಅಂಜಿ ಇಲ್ಲದೆ, ಅದರ ದುಷ್ಪರಿಣಾಮಗಳ ಬಗ್ಗೆ ಅರ್ಥ ಮಾಡಿಕೊಂಡು ಜಿಲ್ಲೆಯನ್ನು ಡ್ರಗ್ಸ್ ಮುಕ್ತಗೊಳಿಸಲು ಸಮಾಜ ಸಹಕರಿಸಬೇಕು.’

-ದರ್ಶನ್ ಎಚ್.ವಿ., ಜಿಲ್ಲಾಧಿಕಾರಿ, ದ.ಕ.

‘ಶಿಕ್ಷಣ ಸಂಸ್ಥೆಗಳು ಡ್ರಗ್ಸ್ ಮುಕ್ತ ಕ್ಯಾಂಪಸ್ ಘೋಷಣೆ ಮಾಡುವ ನಿಟ್ಟಿನಲ್ಲಿ ನಿರಂತರ ಸ್ಕ್ರೀನಿಂಗ್ ವ್ಯವಸ್ಥೆ ಮಾಡಬೇಕು. ಈ ರೀತಿಯಾಗಿ ಸ್ಕ್ರೀನಿಂಗ್ ಮಾಡಿಸಿ ತಮ್ಮ ಕಾಲೇಜು ಡ್ರಗ್ಸ್ ಮುಕ್ತ ಎಂದು ಹೇಳುವ ಕಾಲೇಜಿಗೆ ಬಂದು ಕಾಲೇಜು ಪರ ಜಾಹೀರಾತು ನೀಡುತ್ತೇನೆ. ಸ್ಕ್ರೀನಿಂಗ್ ವೇಳೆ ವಿದ್ಯಾರ್ಥಿಗಳಲ್ಲಿ ಡ್ರಗ್ಸ್ ಸೇವನೆ ಪತ್ತೆಯಾದರೆ ಚಿಂತೆ ಬೇಡ. ಅದಕ್ಕೆ ಅಗತ್ಯ ಕೌನ್ಸೆಲಿಂಗ್ ವ್ಯವಸ್ಥೆ ಮಾಡಿಸಿ ಮುಕ್ತ ಮಾಡಲು ಅವಕಾಶ ದೊರೆಯಲಿದೆ. ಈ ಕುರಿತಂತೆ ವೈಯಕ್ತಿಕವಾಗಿ ನಾನೇ ಮೇಲ್ವಿಚಾರಣೆ ಮಾಡುತ್ತೇನೆ.’

-ಸುಧೀರ್ ರೆಡ್ಡಿ, ಪೊಲೀಸ್ ಆಯುಕ್ತರು, ಮಂಗಳೂರು.

‘ಕಾಲೇಜು ಪ್ರವೇಶದ ಸಂದರ್ಭ ಈಗಾಗಲೇ ರ್ಯಾಗಿಂಗ್ ವಿರುದ್ಧ ಅನುಸರಿಸುವ ಕ್ರಮದಂತೆ, ಡ್ರಗ್ಸ್ ವ್ಯಸನದ ಬಗ್ಗೆ ಸ್ಕ್ರೀನಿಂಗ್‌ಗೆ ಒಳಪಡುವ ನಿಟ್ಟಿನಲ್ಲಿ ಯಾವುದೇ ಆಕ್ಷೇಪ ಇಲ್ಲ ಎಂಬ ಪತ್ರವನ್ನು ಮಕ್ಕಳು ಮತ್ತು ಪೋಷಕರಿಂದ ಪಡೆಯಬೇಕು. ಶಿಕ್ಷಣ ಸಂಸ್ಥೆಗಳು ತಮ್ಮಲ್ಲಿನ ಡ್ರಗ್ಸ್ ವಿರೋಧಿ ಸಮಿತಿ ಹಾಗೂ ಸ್ಕ್ರೀನಿಂಗ್ ವ್ಯವಸ್ಥೆ ಬಗ್ಗೆ ತಿಂಗಳಿಗೊಮ್ಮೆ ಇಲಾಖೆಗೆ ಪ್ರತಿಕ್ರಿಯೆ ನೀಡಿದರೆ, ಸಮಸ್ಯೆ ಬಗೆಹಿಸುವಲ್ಲಿ ಪೊಲೀಸರ ಕಾರ್ಯಾಚರಣೆಗೆ ಸಹಾರಿಯಾಗಲಿದೆ.’

ಡಾ. ಅರುಣ್ ಕುಮಾರ್, ಎಸ್ಪಿ, ದ.ಕ.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X