ಕನ್ಯಾನ: ಕಾಂಗ್ರೆಸ್ ಜನಜಾಗೃತಿ ಅಭಿಯಾನ ಕಾರ್ಯಕ್ರಮ

ವಿಟ್ಲ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಇದರ ಆಶ್ರಯದಲ್ಲಿ ಕನ್ಯಾನ ವಲಯ ಕಾಂಗ್ರೆಸ್ ಸಮಿತಿ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ಸಹಭಾಗೀತ್ವದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಯವರ ನೇತೃತ್ವದಲ್ಲಿ ಕನ್ಯಾನ ಜಂಕ್ಷನ್ ನಲ್ಲಿ ಜನಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು.
ಈ ಸಭೆಯಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ಮಾತನಾಡಿ ಕಾಂಗ್ರೆಸ್ ಸರಕಾರ ಬಡವರ ಏಳಿಗೆಗಾಗಿ ನಿರಂತರವಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಇದರಿಂದ ಪ್ರತಿಯೊಬ್ಬ ಬಡವ ಸ್ವಾಭಿಮಾನ ದಿಂದ ಬದುಕುವಂತಾಗಿದೆ ಎಂದರು.
ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಭಂಡಾರಿ, ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ , ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್, ಎನ್ ಎಸ್ ಯುಐ ಅಧ್ಯಕ್ಷ ಸಫ್ವಾನ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರುಗಳಾದ ಅಬ್ಬಾಸ್ ಅಲಿ, ಸುದೀಪ್ ಕುಮಾರ್ ಶೆಟ್ಟಿ, ಕನ್ಯಾನ ಪಂಚಾಯತ್ ಉಪಾಧ್ಯಕ್ಷ ಅಬ್ದುಲ್ ರಹಿಮಾನ್, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಐಡಾ ಸುರೇಶ್, ಪ್ರಮುಖರಾದ ಗಣೇಶ ಭಟ್, ಮೊಯಿದು ಕುಂಞ್ಞ , ಸುರೇಶ್ ಭಟ್, ಕೃಷ್ಣ ನಾಯ್ಕ್, ಮೊಯಿದಿನ್ ಹಾಜಿ, ಇಬ್ರಾಹಿಂ, ಬಿ ಕೆ ಹಸೈನಾರ್, ಹಾಜಿ ಅಬ್ದುಲ್ ಮಜೀದ್, ಪಂಚಾಯತ್ ಸದಸ್ಯರುಗಳು ಬೂತ್ ಅಧ್ಯಕ್ಷರುಗಳು ಯುವ ಕಾಂಗ್ರೆಸ್ ನಾಯಕರುಗಳು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಮಾಜಿ ಪಂಚಾಯತ್ ಸದಸ್ಯ ಈಶ್ವರ ನಾಯ್ಕ ಅವರ ಪತ್ನಿಗೆ ಧನಸಹಾಯ ವಿತರಿಸಲಾಯಿತು.







