Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು...

ದ.ಕ. ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಅಭಾವ ಸೃಷ್ಟಿಗೆ ಹಿಂದಿನ ಬಿಜೆಪಿ ಸರಕಾರ ಕಾರಣ: ರಮಾನಾಥ ರೈ ಆರೋಪ

ವಾರ್ತಾಭಾರತಿವಾರ್ತಾಭಾರತಿ16 July 2025 1:12 PM IST
share
ದ.ಕ. ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಅಭಾವ ಸೃಷ್ಟಿಗೆ ಹಿಂದಿನ ಬಿಜೆಪಿ ಸರಕಾರ ಕಾರಣ: ರಮಾನಾಥ ರೈ ಆರೋಪ

ಮಂಗಳೂರು, ಜು.16: ದ.ಕ. ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಅಭಾವ ಸೃಷ್ಟಿಗೆ ಹಿಂದಿನ ಬಿಜೆಪಿ ಸರಕಾರ ಕಾರಣ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಆರೋಪಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಂಪು ಕಲ್ಲು, ಮರಳು ಸಿಗುತ್ತಿಲ್ಲವೆಂದು ರಸ್ತೆಯಲ್ಲಿ ನಿಂತು ಮಾತನಾಡುವುದು ಜನಪ್ರತಿನಿಧಿಗಳ ಜವಾಬ್ದಾರಿಯಲ್ಲ. ಆದರೆ ದ.ಕ. ಜಿಲ್ಲೆಯ ಬಿಜೆಪಿ ಶಾಸಕರು ಅದನ್ನೇ ಮಾಡುತ್ತಿದ್ದಾರೆ. ಅವರು ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಿ ಎಂದು ಹೇಳಿದರು.

ಕೆಂಪು ಕಲ್ಲು, ಮರಳು ಕಲ್ಲು ವಿಚಾರದಲ್ಲಿ ಕಾನೂನು ಏನು ಹೊಸತು ಅಲ್ಲ, ಈಗಿನ ವ್ಯವಸ್ಥೆಯಿಂದಾಗಿ ಸ್ವಲ್ಪ ಸಮಸ್ಯೆಯಾಗಿದೆ. ಈ ಸಮಸ್ಯೆಯ ಬಗ್ಗೆ ತಾನು ಮುಖ್ಯ ಮಂತ್ರಿಯ ಗಮನ ಸೆಳೆದಿರುವುದಾಗಿ ತಿಳಿಸಿದರು.

ತಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗ ಸಿಆರ್ ಝಡ್ ವ್ಯಾಪ್ತಿಯಲ್ಲೂ ರಾಜ್ಯ ಮತ್ತು ಕೇಂದ್ರದ ಅನುಮತಿ ಪಡೆದು ಮರಳುಗಾರಿಕೆಗೆ ಅವಕಾಶ ಕಲ್ಪಿಸಿದ್ದೆ. ನಂತರ ಪರಿಸರ ಇಲಾಖೆ ಅನುಮತಿ ಸಿಗದೆ ಸಿಆರ್ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಿಂತಿತು. ಆಗ ನಾನ್ಸಿಆರ್ ಝಡ್ನಲ್ಲಿ ಮರಳು ತೆಗೆಯಲು ಮರಳು ಬ್ಲಾಕ್ಗಳನ್ನು ಗುರುತಿಸಿ, ಪರ್ಮಿಟ್ಗಳನ್ನು ನೀಡಲಾಗಿತ್ತು. ನಂತರ ಬಂದ ಬಿಜೆಪಿ ಸರಕಾರ ನಾನ್ ಸಿಆರ್ಝಡ್ನಲ್ಲೂ ಪರ್ಮಿಟ್ ನೀಡಲು ಆಸಕ್ತಿ ವಹಿಸಲಿಲ್ಲ. ಬಿಜೆಪಿ ಸರಕಾರ ಒಂದು ರೀತಿಯಲ್ಲಿ ಅಕ್ರಮ ಮರಳುಗಾರಿಕೆಗೆ ಪೋತ್ಸಾಹ ನೀಡಿತ್ತು ರಮಾನಾಥ ರೈ ಆರೋಪಿಸಿದರು.

ಮರಳು, ಕೆಂಪುಕಲ್ಲು ಸಿಗದ ಕಾರಣದಿಂದಾಗಿ ಜನ ಸಾಮಾನ್ಯರಿಗೆ, ಕಟ್ಟಡ ಕಾರ್ಮಿಕರಿಗೆ ಸಮಸ್ಯೆ ಆಗಿದೆ. ಕೆಂಪು ಕಲ್ಲಿಗೆ ಕೇರಳದಲ್ಲಿ ರಾಯಲ್ಟಿ ಕಡಿಮೆ ಇದೆ. ನಮ್ಮಲ್ಲಿ ರಾಯಲ್ಟಿ ಜಾಸ್ತಿ ಇದೆ. ಕೆಂಪು ಕಲ್ಲು ರಾಯಲ್ಟಿ ಕೇರಳದಲ್ಲಿ 32 ರೂ., ಇದ್ದರೆ ರಾಜ್ಯದಲ್ಲಿ 280 ರೂ. ಇದೆ. ಇದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸಂಬಂಧಿಸಿದ ಸಚಿವರು, ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇನೆ. ಪರ್ಮಿಟ್ ನೀಡುವ ಕಾರ್ಯ ಆರಂಭಗೊಂಡರೆ ಸಮಸ್ಯೆ ನಿವಾರಣೆಯಾಗಲಿದೆ. ಬಿಜೆಪಿ ಶಾಸಕರಿಗೆ ಜನರ ಕಾಳಜಿ ಇದ್ದರೆ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಿ ಎಂದರು.

ಬಿಜೆಪಿ ಜನಪ್ರತಿನಿಧಿಗಳು ಎಲ್ಲಿ ಮಾತನಾಡಬೇಕೊ ಅಲ್ಲಿ ಮಾತನಾಡದೆ ತಮ್ಮ ಜವಾಬ್ದಾರಿಯನ್ನು ಮರೆತು ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ನಡೆಸುತ್ತಿರುವುದು ಸರಿಯಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮನಪಾ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಬ್ಲಾಕ್ ಅಧ್ಯಕ್ಷರಾದ ಜೆ.ಅಬ್ದುಲ್ ಸಲೀಮ್, ಪ್ರಕಾಶ್ ಸಾಲ್ಯಾನ್, ಶುಭೋದಯ ಆಳ್ವ, ಜಾರ್ಜ್, ನಝೀರ್ ಬಜಾಲ್ ಉಪಸ್ಥಿತರಿದ್ದರು.

Tags

Ramanath RaiPressmeet
share
ವಾರ್ತಾಭಾರತಿ
ವಾರ್ತಾಭಾರತಿ
Next Story
X