Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ ಜಿಲ್ಲೆಯ ಹೆಸರು ಬದಲಾವಣೆ ವಿರೋಧಿಸಿ...

ದ.ಕ ಜಿಲ್ಲೆಯ ಹೆಸರು ಬದಲಾವಣೆ ವಿರೋಧಿಸಿ ಸಿಪಿಐಎಂಎಲ್ ಲಿಬರೇಶನ್‌ನಿಂದ ಮನವಿ

ವಾರ್ತಾಭಾರತಿವಾರ್ತಾಭಾರತಿ16 July 2025 8:02 PM IST
share
ದ.ಕ ಜಿಲ್ಲೆಯ ಹೆಸರು ಬದಲಾವಣೆ ವಿರೋಧಿಸಿ ಸಿಪಿಐಎಂಎಲ್ ಲಿಬರೇಶನ್‌ನಿಂದ ಮನವಿ

ಮಂಗಳೂರು: ದ.ಕ.ಜಿಲ್ಲೆಯ ಹೆಸರನ್ನು ’ಮಂಗಳೂರು’ ಎಂದು ಬದಲಾವಣೆ ಮಾಡುವ ಪ್ರಸ್ತಾಪದ ವಿರುದ್ಧ ಸಿಪಿಐಎಂಎಲ್ ಲಿಬರೇಶನ್ ವತಿಯಿಂದ ಜಿಲ್ಲಾಧಿಕಾರಿಯ ಮೂಲಕ ಮುಖ್ಯಮಂತ್ರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

ಹೆಸರು ಬದಲಾವಣೆ ಮಾಡುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಬೆಳ್ತಂಗಡಿ, ಕಡಬ,ಬಂಟ್ವಾಳ, ಪುತ್ತೂರು, ಉಳ್ಳಾಲ, ಮೂಲ್ಕಿ ಮೂಡುಬಿದಿರೆ ತಾಲೂಕುಗಳ ಅಭಿವೃದ್ಧಿಯ ಮೇಲೆ ನೇರ ಪರಿಣಾಮ ಬೀಳಲಿದೆ. ಈಗಾಗಲೇ ಈ ತಾಲೂಕುಗಳು ರಾಜಕೀಯವಾಗಿ, ಆರ್ಥಿಕವಾಗಿ ಅವಕಾಶದಿಂದ ವಂಚಿತ ವಾಗಿದೆ. ಈ ತಾಲೂಕುಗಳು ಜಿಲ್ಲಾ ಕೇಂದ್ರದಿಂದ ದೂರವಿರುವ ಕಾರಣ ಮಂಗಳೂರು ಜಿಲ್ಲೆ ಎಂದು ನಾಮಕರಣವಾದರೆ ಮತ್ತಷ್ಟು ಅವಕಾಶಗಳಿಂದ ವಂಚಿತವಾಗುವ ಸಂಭವವಿದೆ. ದ.ಕ. ಜಿಲ್ಲೆಯು ಬಹುಸಂಸ್ಕೃತಿಯ ನಾಡಾಗಿದೆ. ಮಂಗಳೂರಿನ ತುಳು ಭಾಷೆ, ಸಂಸ್ಕೃತಿಗೂ ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ, ಬಂಟ್ಬಾಳದ ತುಳು ಭಾಷೆ ಮತ್ತು ಸಂಸ್ಕೃತಿ ಇನ್ನಿತರ ಆಚರಣೆಗಳಿಗೂ ವ್ಯತ್ಯಾಸ ಗಳಿವೆ. ಈ ಬಹು ಸಂಸ್ಕೃತಿಯ ಮೇಲೆ ಏಕಮುಖ ಸಂಸ್ಕೃತಿಯು ಪರಿಣಾಮ ಬೀರಲಿದೆ. ತುಳುನಾಡು ಎನ್ನುವುದನ್ನು ಮುಂದಿಟ್ಟು ನಡೆಯುತ್ತಿರುವ ಮಂಗಳೂರು ಜಿಲ್ಲಾ ಅಭಿಯಾನವು ತುಳುನಾಡಿನ ಬಹು ಸಂಸ್ಕೃತಿಗೆ ವಿರೋಧ ವಾಗಿರುವ ಅಭಿಯಾನವಾಗಿದೆ. ಜಿಲ್ಲೆಯು ಬ್ಯಾರಿ, ಕೊಂಕಣಿ, ಕನ್ನಡ ಸಹಿತ ಬಹುಭಾಷೆಗಳಿಂದ ರೂಪಿತವಾದ ಪ್ರದೇಶವಾಗಿದೆ. ಇದನ್ನು ಬದಿಗಿಟ್ಟು ಕೇವಲ ತುಳುವನ್ನು ಕೇಂದ್ರೀ ಕರಿಸಿ ಅಭಿಯಾನ ನಡೆಯುತ್ತಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ ಲೆನಿವಾದಿ) ಲಿಬರೇಶನ್ ದ.ಕ.ಜಿಲ್ಲಾ ಸಮಿತಿಯು ಅಪರ ಜಿಲ್ಲಾಧಿಕಾರಿಯ ಮೂಲಕ ನೀಡಿದ ಮನವಿಯಲ್ಲಿ ತಿಳಿಸಲಾಗಿದೆ.

ಸಿಪಿಐಎಂಎಲ್ ಲಿಬರೇಶನ್‌ನ ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ, ರಾಜ್ಯ ಸಮಿತಿ ಸದಸ್ಯ ಮೋಹನ್ ಕೆ.ಇ, ಜಿಲ್ಲಾ ಸಮಿತಿ ಸದಸ್ಯರಾದ ರಾಜಾ ಚೆಂಡ್ತಿಮಾರ್, ಸಜೇಶ್ ವಿಟ್ಲ, ಬಂಟ್ವಾಳ ತಾಲೂಕು ಸಮಿತಿಯ ಮುಖಂಡರಾದ ಅಚ್ಯುತ ಕಟ್ಟೆ, ಲಿಯಕತ್ ಖಾನ್, ಮಂಗಳೂರು ತಾಲೂಕು ಮುಖಂಡರಾದ ಮುಹಮ್ಮದ್ ಝಿಲಾನಿ ನಿಯೋಗದಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X