ಇಳಂತಿಲ ಗ್ರಾ.ಪಂ. ಅಧ್ಯಕ್ಷ ವಸಂತ ಶೆಟ್ಟಿ ನಿಧನ

ಉಪ್ಪಿನಂಗಡಿ: ಇಳಂತಿಲ ಗ್ರಾ.ಪಂ. ಅಧ್ಯಕ್ಷ, ಎನ್ಮಾಡಿ ನಿವಾಸಿ ವಸಂತ ಕುಮಾರ್ ಶೆಟ್ಟಿ (49) ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜು.16ರ ರಾತ್ರಿ ನಿಧನರಾಗಿದ್ದಾರೆ.
ಕಳೆದ ಎರಡೂವರೆ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಚಿಕಿತ್ಸೆಗೆಂದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಬಿಜೆಪಿ ಕಾರ್ಯಕರ್ತರಾಗಿದ್ದ ವಸಂತಕುಮಾರ್ ಶೆಟ್ಟಿಯವರು ಎರಡನೇ ಅವಧಿಗೆ ಇಳಂತಿಲ ಗ್ರಾ.ಪಂ.ಗೆ ಬಿಜೆಪಿ ಬೆಂಬಲಿತ ಸದಸ್ಯರಾಗಿ ಆಯ್ಕೆಯಾಗಿದ್ದರು. ಕಳೆದ ಎ.16ರಂದು ಗ್ರಾ.ಪಂ. ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ತನ್ನದೇ ಸಹಸ್ತ್ರ ಸೌಂಡ್ಸ್ ಮತ್ತು ಲೈಟಿಂಗ್ಸ್ ಹೊಂದಿದ್ದ ಇವರು ಉದ್ಯಮಿಯಾಗಿಯೂ ಗುರುತಿಸಿಕೊಂಡಿದ್ದರು.
ಮೃತರು ತಾಯಿ, ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
Next Story





