Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾಂಗ್ರೆಸ್‌ನ ಲಿಂಗರಾಜ್ ಕಣ್ಣಿ ಡ್ರಗ್ಸ್...

ಕಾಂಗ್ರೆಸ್‌ನ ಲಿಂಗರಾಜ್ ಕಣ್ಣಿ ಡ್ರಗ್ಸ್ ಪ್ರಕರಣ; ಸಚಿವ ಪ್ರಿಯಾಂಕ ಖರ್ಗೆ ಮೌನ ಮುರಿಯಲಿ: ಶಾಸಕ ಭರತ್ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ17 July 2025 8:36 PM IST
share
ಕಾಂಗ್ರೆಸ್‌ನ ಲಿಂಗರಾಜ್ ಕಣ್ಣಿ ಡ್ರಗ್ಸ್ ಪ್ರಕರಣ; ಸಚಿವ ಪ್ರಿಯಾಂಕ ಖರ್ಗೆ ಮೌನ ಮುರಿಯಲಿ: ಶಾಸಕ ಭರತ್ ಶೆಟ್ಟಿ

ಮಂಗಳೂರು: ಮಾದಕ ವಸ್ತು ಕಳ್ಳ ಸಾಗಾಟ ಪ್ರಕರಣದಲ್ಲಿ ತನ್ನ ಆಪ್ತರಾಗಿರುವ ಲಿಂಗರಾಜ್ ಕಣ್ಣಿ ಸಿಕ್ಕಿಬಿದ್ದಿದ್ದರೂ ಸಚಿವ ಪ್ರಿಯಾಂಕ ಖರ್ಗೆ ಈ ವಿಚಾರದಲ್ಲಿ ಯಾಕೆ ಮೌನ ಮುರಿದಿಲ್ಲ. ತಮಗೂ ಕಣ್ಣಿಗೂ ಯಾವುದೇ ಸಂಬಂಧ ಇಲ್ಲ ಎಂದು ಅವರು ಬಹಿರಂಗ ಹೇಳಿಕೆ ನೀಡಲಿ ಅಥವಾ ತಮ್ಮ ಸ್ಥಾನಕ್ಕೆ ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ನೀಡಲಿ ಎಂದು ಶಾಸಕ ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.

ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿಪಕ್ಷದವರು ವಿಧಾನ ಸಭೆಯಲ್ಲಿ ಕೇಳುವ ಪ್ರತಿಯೊಂದು ಪ್ರಶ್ನೆಗಳಿಗೂ ಮಧ್ಯೆ ಪ್ರವೇಶಿಸಿ ಉತ್ತರ ನೀಡಲು ಆತುರ ತೋರುವ ಸಚಿವ ಖರ್ಗೆ ಅವರಿಗೆ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಡ್ರಗ್ಸ್ ದಂಧೆಯಲ್ಲಿ ತೊಡಗಿರುವುದು ಗೊತ್ತಿಲ್ಲವೇ ? ಅವರು ಇವರಿಗೆ ರಕ್ಷಣೆ ನೀಡಿದ್ದಾರೆಯೇ ? ಎಂದು ಪ್ರಶ್ನಿಸಿದರು.

ಕಲಬುರಗಿಯಲ್ಲಿ ಪ್ರಿಯಾಂಕ ಖರ್ಗೆ ಹುಕುಂ ಇಲ್ಲದೆ ಏನು ನಡೆಯುವುದಿಲ್ಲ. ಅಂತಹ ಕಲಬುರಗಿಯಲ್ಲಿ ನಡೆಯುತ್ತಿದ್ದ ಲಿಂಗರಾಜ್ ಕಣ್ಣಿಯ ಅಕ್ರಮ ಡ್ರಗ್ಸ್ ಸಾಗಾಟ ದಂಧೆಯ ಬಗ್ಗೆ ಪೊಲೀಸರಿಗೆ ಗೊತ್ತಿದ್ದರೂ, ಆತನನ್ನು ಬಂಧಿಸಿ ಡ್ರಗ್ಸ್ ಸಾಗಾಟ ದಂಧೆಗೆ ಕಡಿವಾಣ ಹಾಕದಂತೆ ಪೊಲೀಸರನ್ನು ತಡೆದವರು ಯಾರೆಂದು ಬಹಿರಂಗವಾಗಲಿ ಎಂದು ಆಗ್ರಹಿಸಿದರು.

ಲಿಂಗರಾಜ್ ಕಣ್ಣಿ ಅವರು ಶಾಸಕ ಅಲ್ಲಮಪ್ರಭು ಪಾಟೀಲ್ ಅವರಿಗೂ ಆಪ್ತರಾಗಿದ್ದಾರೆ. ಅವರೂ ಕೂಡಾ ಈ ವಿಚಾರದಲ್ಲಿ ಮೌನ ವಹಿಸಿದ್ದಾರೆ ಎಂದು ಭರತ್ ಶೆಟ್ಟಿ ಆಪಾದಿಸಿದರು.

ಡ್ರಗ್ಸ್‌ನಲ್ಲಿ ರಾಜ್ಯವನ್ನು ಉಡ್ತಾ ಪಂಜಾಬ್ ಮಾಡಲು ಸರಕಾರ ಬಿಡುವುದಿಲ್ಲ ಎಂದು ಇತ್ತೀಚೆಗೆ ಮಂಗಳೂರಿ ನಲ್ಲಿ ಹೇಳಿಕೆ ನೀಡಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಕಲಬುರಗಿಯ ಡ್ರಗ್ಸ್ ಹಾವಳಿಯ ಬಗ್ಗೆ ಗೊತ್ತಿರಲಿಲ್ಲವೇ ? ಎರಡು ತಿಂಗಳ ಹಿಂದೆ ಕಲಬುರಗಿಯಲ್ಲಿ ಡ್ರಗ್ಸ್ ಸಾಗಾಟ ಪ್ರಕರಣ ವೊಂದು ಪತ್ತೆಯಾಗಿತ್ತು. ಆ ಬಳಿಕ ಅದರ ಬಗ್ಗೆ ಹೆಚ್ಚಿನ ತನಿಖೆ ನಡೆಯಲಿಲ್ಲ. ಅದು ಅಲ್ಲಿಗೆ ಮುಚ್ಚಿ ಹೋಗಿತ್ತು ಎಂದರು.

ಸಚಿವ ಪ್ರಿಯಾಂಕ ಖರ್ಗೆ ಅವರು ಮಂಗಳೂರಿನಲ್ಲಿ ಐಟಿ ಕ್ಷೇತ್ರದ ಅಭಿವೃದ್ಧಿಗೆ ಮೂಲಸೌರ್ಕಯ ಒದಗಿಸುವ ವಿಚಾರದಲ್ಲೂ ಗಮನ ಹರಿಸಿಲ್ಲ. ಸರಕಾರ ಮಂಗಳೂರಿನಲ್ಲಿ ಐಟಿ ಕಂಪನಿಗಳ ವಿಚಾರದಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸಿಲ್ಲ. ಹಿಂದೆ ಬಿಜೆಪಿ ಸರಕಾರ ಇದ್ದಾಗ ಆರಂಭಗೊಂಡಿದ್ದ ಐಟಿ ಕೆಲಸ ಅರ್ಧದಲ್ಲಿ ನಿಂತಿದ್ದು, ಕಿಯೊನಿಕ್ಸ್ ಮೂಲಕ ಪೂರ್ಣ ಗೊಳಿಸುವ ಬಗ್ಗೆ ನೀಡಿದ ವಾಗ್ದಾನವನ್ನು ಸರಕಾರ ಪೂರ್ಣಗೊಳಿಸಿಲ್ಲ. ಕಿಯೊನಿಕ್ಸ್ ಆಡಳಿತ ನಿರ್ದೇಶಕರು ಎರಡು ಬಾರಿ ಮಂಗಳೂರಿಗೆ ಬಂದು ಹೋಗಿ ದ್ದರೂ ಏನು ಆಗಿಲ್ಲ ಎಂದು ಭರತ್ ಶೆಟ್ಟಿ ದೂರಿದರು.

ಕಾಂಗ್ರೆಸ್ ಶಾಸಕರು ಸಮಸ್ಯೆ ಬಗೆಹರಿಸಲಿ: ದ.ಕ. ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳಿನ ಕೊರತೆಯ ವಿಚಾರದಲ್ಲಿ ಬಿಜೆಪಿ ಶಾಸಕರು ಬೀದಿಯಲ್ಲಿ ನಿಂತು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ವೈ. ಭರತ್ ಶೆಟ್ಟಿ ಅವರು ‘ ರೈಗಳ ಹೇಳಿಕೆ ಒಂದು ಜೋಕ್‌ನಂತೆ ನನಗೆ ಭಾಸವಾಗುತ್ತದೆ. ಆಡಳಿತ ಪಕ್ಷದ ಶಾಸಕ ಅಶೋಕ್ ರೈ, ವಿಧಾನ ಪರಿಷತ್ ಸದಸ್ಯರಾದ ಡಾ.ಮಂಜುನಾಥ ಭಂಡಾರಿ ಮತ್ತು ಐವನ್ ಡಿ ಸೋಜ ಅವರಂತಹ ಘಟಾನು ಘಟಿಗಳು ಇದ್ದಾರಲ್ಲ. ಅವರು ಯಾಕೆ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿಲ್ಲ ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ನ ಕೆಲವು ಮಂದಿ ಇತ್ತೀಚೆಗೆ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅವರಿಗೂ ಬಿಸಿ ತಟ್ಟಿದೆ. ಬಿಜೆಪಿ ಸರಕಾರ ಇದ್ದಾಗ ಒಂದು ವಾರದೊಳಗೆ 272 ಮರಳು ಬ್ಲಾಕ್ ಗುತ್ತಿಗೆಯನ್ನು ನೀಡಲಾಗಿತ್ತು. ಈಗ ಯಾಕೆ ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಬಿಜೆಪಿ ಧುರೀಣ ವಿಕಾಸ್ ಪುತ್ತೂರು, ಜಿಲ್ಲಾ ಬಿಜೆಪಿ ವಕ್ತಾರ ರಾಜಗೋಪಾಲ್ ರೈ, ಕಾರ್ಯಾಲಯ ಕಾರ್ಯದರ್ಶಿ ಗುರುಚರಣ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X