ಅಖಿಲ ಭಾರತ ಬ್ಯಾರಿ ಪರಿಷತ್‌ನಿಂದ ವಿದೇಶಿ ವ್ಯಾಸಂಗಕ್ಕೆ ವಿದ್ಯಾರ್ಥಿ ವೇತನ ಮಾಹಿತಿ ಶಿಬಿರ

ಮಂಗಳೂರು, ಜು.17: ವಿದೇಶಗಳಲ್ಲಿರುವ ಪ್ರತಿಷ್ಠಿತ ವಿಶ್ವ ವಿದ್ಯಾನಿಲಯಗಳಲ್ಲಿ ಉನ್ನತ ಶಿಕ್ಷಣ ಪಡೆಯಲಿಚಿಸುವ ಬ್ಯಾರಿ ಸಮುದಾಯದ ಪದವೀಧರ ಅಭ್ಯರ್ಥಿಗಳಿಗೆ ಸರಕಾರಿ ಇಲಾಖೆಗಳಿಂದ ವಿದ್ಯಾರ್ಥಿವೇತನ ಹಾಗೂ ಸಾಲ ಸೌಲಭ್ಯವನ್ನು ಒದಗಿಸಿಕೊಡಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಬ್ಯಾರಿ ಪರಿಷತ್ ಕೇಂದ್ರೀಯ ಸಮಿತಿಯ ಅಧ್ಯಕ್ಷ ಯು. ಎಚ್. ಖಾಲಿದ್ ಉಜಿರೆ ತಿಳಿಸಿರುತ್ತಾರೆ.
ಈ ನಿಟ್ಟಿನಲ್ಲಿ ಜು.26ರಂದು ಮಧ್ಯಾಹ್ನ 2:30ಕ್ಕೆ ನಗರದ ನ್ಯಾಷನಲ್ ಟ್ಯುಟೋರಿಯಲ್ ಸಭಾಂಗಣದಲ್ಲಿ ಮಾಹಿತಿ ಶಿಬಿರವನ್ನು ಆಯೋಜಿಸಲಾಗಿದೆ. ಆಸಕ್ತರು ಪರಿಷತ್ತಿನ ಗೌರವಾಧ್ಯಕ್ಷ ಯೂಸುಫ್ ವಕ್ತಾರ್ (9008503993) ಅಥವಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ನಡುಪದವು (9448620793) ಅವರನ್ನು ಸಂಪರ್ಕಿಸಿ ಜುಲೈ 22ರೊಳಗೆ ಹೆಸರು ನೋಂದಾಯಿಸುವಂತೆ ತಿಳಿಸಿದ್ದಾರೆ.
Next Story





