ಮುಲ್ಕಿ: ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ, ದಂಡ

ಮುಲ್ಕಿ: ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದ್ದರೂ ಶರಣಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋಯನ್ನು ಮುಲ್ಕಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೆ ಜೈಲು ಶಿಕ್ಷೆ, ದಂಡ ವಿಧಿಸಿ ತೀರ್ಪು ನೀಡಿದೆ.
ಮುಲ್ಕಿ ಗೇರುಕಟ್ಟೆ ಕಿಲ್ಪಾಡಿ ನಿವಾಸಿ ಇರ್ಫಾನ್ (35) ಶಿಕ್ಷೆಗೊಳಗಾದ ಆರೋಪಿ ಎಂದು ತಿಳಿದು ಬಂದಿದೆ.
ನ್ಯಾಯಾಲಯವು ಆತನಿಗೆ ಮೂರು ತಿಂಗಳ ಸರಳ ಕಾರಾಗೃಹ ಶಿಕ್ಷೆ ಹಾಗೂ 80 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಪ್ರಕರಣವೊಂದರಲ್ಲಿ ಆರೋಪಿ ಇರ್ಫಾನ್ ಗೆ ನ್ಯಾಯಾಲಯದಿಂದ ನೋಟಿಸ್ ಜಾರಿ ಮಾಡಲಾಗಿತ್ತು. ಈತ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ನ್ಯಾಯಾಲಯವು ಬಂಧನದ ವಾರೆಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮುಲ್ಕಿ ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
Next Story





