Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ: ಜಮೀಯ್ಯತುಲ್ ಫಲಾಹ್ ನ ನೂತನ...

ಬಂಟ್ವಾಳ: ಜಮೀಯ್ಯತುಲ್ ಫಲಾಹ್ ನ ನೂತನ ಕಚೇರಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ20 July 2025 10:08 AM IST
share
ಬಂಟ್ವಾಳ: ಜಮೀಯ್ಯತುಲ್ ಫಲಾಹ್ ನ ನೂತನ ಕಚೇರಿ ಉದ್ಘಾಟನೆ

ಬಂಟ್ವಾಳ: ಕರಾವಳಿಯ ಉಭಯ ಜಿಲ್ಲೆಗಳ ಸಮುದಾಯದ ಶೈಕ್ಷಣಿಕ ಸಬಲೀಕರಣದಲ್ಲಿ ಜಮೀಯ್ಯತುಲ್ ಫಲಾಹ್ ಸಂಸ್ಥೆಯ ಪಾತ್ರ ಮಹತ್ತರವಾದುದು. ಆದುದರಿಂದಲೇ ಇಂದು ಸಹಸ್ರಾರು ವಿದ್ಯಾರ್ಥಿಗಳು ಶಾಲಾ ಕಾಲೇಜು ಶಿಕ್ಷಣದ ಕಡೆಗೆ ಆಸಕ್ತರಾದುದು ಗಮನಾರ್ಹ ಬೆಳವಣಿಗೆ ಎಂದು ಜಮೀಯ್ಯತುಲ್ ಫಲಾಹ್ ದ.ಕ. ಮತ್ತು ಉಡುಪಿ ಜಿಲ್ಲಾಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್ ಅಭಿಪ್ರಾಯಪಟ್ಟರು.

ಅವರು ಸಂಸ್ಥೆಯ- ಮೆಲ್ಕಾರಿನ ಗೋಲ್ಡನ್ ಸಿಟಿ ಸಂಕೀರ್ಣದಲ್ಲಿ ಬಂಟ್ವಾಳ ಘಟಕದ ನೂತನ ಕಚೇರಿಯನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.

ಸಭಾಧ್ಯಕ್ಷತೆ ವಹಿಸಿದ್ದ ಬಂಟ್ವಾಳ ತಾಲೂಕು ಘಟಕಾಧ್ಯಕ್ಷ ರಶೀದ್ ವಿಟ್ಲ ಮಾತನಾಡಿ, 1988ರಲ್ಲಿ ಆರಂಭವಾದ ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕವು ಸ್ವಂತ ಕಚೇರಿ ಹೊಂದಬೇಕೆಂಬ ಅಭಿಲಾಷೆಯನ್ನು ಅನೇಕ ಸಮಯದಿಂದ ಹೊಂದಿತ್ತು. ಅದು ಈಗ ಈಡೇರಿದೆ. ಇದಕ್ಕೆ ಸಹಕರಿಸಿದ ದಾನಿಗಳ ನೆರವನ್ನು ಅವರು ಸ್ಮರಿಸಿದರು.

ಆಲಡ್ಕ ಮುಹಿಯುದ್ದೀನ್ ಜುಮಾ ಮಸೀದಿಯ ಮುದರ್ರಿಸ್ ಅಬೂ ಸ್ವಾಲಿಹ್ ಮುಸ್ಲಿಯಾರ್ ದುಆಗೈದರು. ಜಮೀಯ್ಯತುಲ್ ದ.ಕ .ಮತ್ತು ಉಡುಪಿ ಜಿಲ್ಲಾ ಕಾರ್ಯದರ್ಶಿ ಶೇಖ್ ಅಬ್ದುಲ್ ಗಫೂರ್, ನಾಮಫಲಕ ಅನಾವರಣಗೊಳಿಸಿದರು, ಜುಬೈಲ್ ಘಟಕದ ಅಧ್ಯಕ್ಷ, ಎನ್ನಾರ್ಸಿಸಿ ಮಾಜಿ ಅಮೀರ್ ಫಾರೂಕ್ ಪೋರ್ಟ್ ವೇ ಕಾನ್ಫರೆನ್ಸ್ ಕೊಠಡಿ ಉದ್ಘಾಟಿಸಿದರು, ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕ ಅರ್ಜುನ್ ಭಂಡಾರ್ಕರ್ 'ಚೈತನ್ಯ' ಸಂಚಿಕೆ ಬಿಡುಗಡೆಗೊಳಿಸುವರು.

ಆಜೀವ ಸದಸ್ಯ, ಪಿಡಬ್ಲ್ಯುಡಿ ಗುತ್ತಿಗೆದಾರ ಉಮರ್ ಹಾಜಿ ರಾಜ್ ಕಮಲ್, ಜೆದ್ದಾ ಘಟಕದ ಅಶ್ಫಾಕ್ ಅತಿಥಿಗಳಾಗಿ ಭಾಗವಹಿಸಿದ್ದರು

ಇದೇ ವೇಳೆ ಮೆಲ್ಕಾರಿನ ಗೋಲ್ಡನ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಸುಮಾರು 500 ಚದರ ಅಡಿ ವಿಸ್ತೀರ್ಣದ ಸ್ಥಳವನ್ನು ಸಂಸ್ಥೆಗೆ ದಾನ ನೀಡಿದ ಘಟಕದ ಪೂರ್ವಾಧ್ಯಕ್ಷರಾದ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು, ಮುಹಮ್ಮದ್ ರಫೀಕ್ ಹಾಜಿ ಆಲಡ್ಕ, ಘಟಕಕ್ಕೆ ಎರಡು ದಶಕಗಳಿಂದ ಕಚೇರಿಯನ್ನು ಉಚಿತವಾಗಿ ನೀಡಿ ಸಹಕರಿಸಿದ ಕೋಶಾಧಿಕಾರಿ ಎಂ.ಎಚ್.ಇಕ್ಬಾಲ್, 2023-25ನೇ ಸಾಲಿನಲ್ಲಿ ಸಂಸ್ಥೆಯ ವತಿಯಿಂದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಿದ ಘಟಕಾಧ್ಯಕ್ಷ ರಶೀದ್ ವಿಟ್ಲರನ್ನು ಸನ್ಮಾನಿಸಲಾಯಿತು.

ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ಉಪಾಧ್ಯಕ್ಷರಾದ ಲತೀಫ್ ನೇರಳಕಟ್ಟೆ, ಶೇಕ್ ರಹ್ಮತುಲ್ಲಾ ಕಾವಳಕಟ್ಟೆ, ಕಾರ್ಯಕಾರಿ ಸಮಿತಿಯ ಸದಸ್ಯರಾದ ನೋಟರಿ ಅಬೂಬಕರ್ ವಿಟ್ಲ , ಬಿ.ಎಂ. ಅಬ್ಬಾಸ್ ಅಲಿ ಬೋಳಂತೂರು, ಆಸಿಫ್ ಇಕ್ಬಾಲ್ ಫರಂಗಿಪೇಟೆ, ಪಿ.ಮುಹಮ್ಮದ್ ಪಾಣೆಮಂಗಳೂರು, ಮುಹಮ್ಮದ್ ನಾರಂಗೋಡಿ, ಅಬ್ದುಲ್ ಹಕೀಂ ಕಲಾಯಿ, ಬಿ.ಎಂ.ತುಂಬೆ ಉಪಸ್ಥಿತರಿದ್ದರು.

ಬಿ.ಎ.ಮುಹಮ್ಮದ್ ಬಂಟ್ವಾಳ ಕಿರಾಅತ್ ಪಠಿಸಿದರು, ಅಬ್ದುಲ್ ರಝಾಕ್ ಅನಂತಾಡಿ ಕಾರ್ಯಕ್ರಮ ನಿರೂಪಿಸಿದರು.

Tags

Jamiyyathul FalahBantwala:
share
ವಾರ್ತಾಭಾರತಿ
ವಾರ್ತಾಭಾರತಿ
Next Story
X