Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೌಜನ್ಯಗೆ ನ್ಯಾಯಕ್ಕಾಗಿ ಬಂದ...

ಸೌಜನ್ಯಗೆ ನ್ಯಾಯಕ್ಕಾಗಿ ಬಂದ ಪಾದಯಾತ್ರಿಗಳನ್ನು ತಡೆದ ಧರ್ಮಸ್ಥಳ ಗ್ರಾಮಸ್ಥರು

►ಮಹಾದ್ವಾರದ ಬಳಿ ಪಾದಯಾತ್ರಿಗಳು ಮತ್ತು ಗ್ರಾಮಸ್ಥರ ನಡುವೆ ಜಟಾಪಟಿ

ವಾರ್ತಾಭಾರತಿವಾರ್ತಾಭಾರತಿ21 July 2025 8:18 PM IST
share
ಸೌಜನ್ಯಗೆ ನ್ಯಾಯಕ್ಕಾಗಿ ಬಂದ ಪಾದಯಾತ್ರಿಗಳನ್ನು ತಡೆದ ಧರ್ಮಸ್ಥಳ ಗ್ರಾಮಸ್ಥರು

ಬೆಳ್ತಂಗಡಿ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೌಜನ್ಯಳಿಗೆ ನ್ಯಾಯಕೊಡಿಸಬೇಕು ಎಂದು ಒತ್ತಾಯಿಸಿ ಪಾದಯಾತ್ರೆ ಮಾಡಿ ಬಂದಿದ್ದ ಬೆಂಗಳೂರು ಯಲಹಂಕದ ಶರಣಬಸಪ್ಪ ಕಬ್ಜ ಮತ್ತು ತಂಡದವರನ್ನು ಸೋಮವಾರ ಧರ್ಮಸ್ಥಳದ ವ್ಯಾಪಾರಿಗಳು ಹಾಗೂ ಸ್ಥಳೀಯರು ಸೇರಿ ಧರ್ಮಸ್ಥಳದ ಮಹಾದ್ವಾರದ ಬಳಿ ತಡೆದ ಹಿನ್ನಲೆಯಲ್ಲಿ ಎರಡು ಗುಂಪಿನ ನಡುವೆ ಮಾತಿನ ಚಕಮಕಿ, ಗಲಾಟೆ ನಡೆದು ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಪೊಲೀಸರು ಮಧ್ಯಪ್ರವೇಶಿ ಪಾದಯಾತ್ರೆ ಬಂದವರನ್ನು ಸುರಕ್ಷಿತವಾಗಿ ಠಾಣೆಗೆ ಕರೆದೊಯ್ದು ಪರಿಸ್ಥಿತಿ ಶಾಂತಗೊಳಿಸಿದ್ದು ಬಳಿಕ ಪಾದಯಾತ್ರಿಕರು ಹಿಂತಿರುಗಿದರು.

ಸೋಮವಾರ ಮಧ್ಯಾಹ್ನದ ವೇಳೆಗೆ ಪಾದಯಾತ್ರೆಯಲ್ಲಿ ಬಂದ ಶರಣಬಸಪ್ಪ ಕಬ್ಜ ಹಾಗೂ ಇತರ ಹತ್ತು ಮಂದಿ ಧರ್ಮಸ್ಥಳಕ್ಕೆ ಬಂದರು. ಉಜಿರೆಯಿಂದ ಇವರು ಪಾದಯಾತ್ರಯಲ್ಲಿ ಬರುತ್ತಿರುವುದನ್ನೇ ಕಾಯುತ್ತಿದ್ದ ಧರ್ಮಸ್ಥಳದ ಸ್ಥಳೀಯರ ಸುಮಾರು 50ಕ್ಕೂ ಹೆಚ್ಚು ಮಂದಿಯ ತಂಡ ಅವರನ್ನು ಧರ್ಮಸ್ಥಳ ಮುಖ್ಯ ದ್ವಾರದ ಬಳಿ ತಡೆದರು. ಧರ್ಮಸ್ಥಳಕ್ಕೆ ಪ್ರವೇಶಿಸಲು ಅವಕಾಶ ನೀಡುವುದಿಲ್ಲ ಎಂದು ತಡೆದಾಗ ಅಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಪಾದಯಾತ್ರೆ ಬಂದವರು ಎರಡು ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳದ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಬಗ್ಗೆ ಆಕ್ಷೇಪಾರ್ಹವಾದ ಹೇಳಿಕೆಗಳನ್ನು ನೀಡಿದ್ದರು ಎಂದು ಆರೋಪಿಸಿ ಸ್ಥಳೀಯರು ಪಾದಾಯತ್ರೆಯ ತಂಡದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಕ್ಷಮೆ ಕೇಳಬೇಕು ಎಂದು ಒತ್ತಾ ಯಿಸಿದರು.

ಈ ಸಂದರ್ಭ ಸ್ಥಳೀಯರು ಹಾಗೂ ಪಾದಯಾತ್ರಿಕರ ನಡುವೆ ಮಾತನ ಚಕಮಕಿ ನಡೆಯಿತು. ನೂಕು ನುಗ್ಗಲು ನಡೆಯಿತು. ಸುಮಾರು ಅರ್ಥ ಗಂಟೆಕಾಲ ನಡೆದ ಮಾತಿನ ಚಕಮಕಿ, ಗೊಂದಲಗಳ ಬಳಿಕ ಅಲ್ಲೇ ಇದ್ದ ಪೊಲೀಸರು ಮಧ್ಯಪ್ರವೇಶಿಸಿ ಪಾದಯಾತ್ರಿಕರನ್ನು ಅಲ್ಲಿಂದ ಧರ್ಮಸ್ಥಳ ಠಾಣೆಗೆ ಕರೆ ದೊಯ್ದರು. ಈ ವೇಳೆ ನೂರಾರು ಸಂಖ್ಯೆಯಲ್ಲಿ ಸ್ಥಳೀಯರು ಠಾಣೆಯ ಮುಂದೆ ಜಮಾಯಿಸಿ ಪಾದ ಯಾತ್ರಿಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಪೊಲೀಸರ ಸೂಚನೆಯಂತೆ ಅವರು ಠಾಣೆಯಿಂದಲೇ ಹಿಂತಿರುಗಿದ್ದಾರೆ.

"ನಾವು ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬ ಬೇಡಿಕೆಯೊಂದಿಗೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಮಾಡಿದ್ದೇವೆ. ನಾವು ಯಾರನ್ನೂ ಆರೋಪಿಯೆಂದು ಹೇಳಿಲ್ಲ. ಆದರೆ ಇಲ್ಲಿ ನಮ್ಮ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಇಲ್ಲಿ ನಡೆದಿರುವ ಅತ್ಯಾಚಾರ, ಕೊಲೆ ಪ್ರಕರಣಗಳ ಬಗ್ಗೆ ತನಿಖೆ ನಡೆದು ನ್ಯಾಯ ಸಿಗಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ನಾವು ಪಾದಯಾತ್ರೆಯಲ್ಲಿ ಬಂದರೂ ನಮಗೆ ದೇವರ ದರ್ಶನಕ್ಕೆ ಅವಕಾಶ ನೀಡಲಿಲ್ಲ. ಇಡೀ ಭಾರತಕ್ಕೆ ಇರುವುದು ಒಂದು ಸಂವಿಧಾನ, ಧರ್ಮಸ್ಥಳಕ್ಕೆ ಬೇರೆ ಸಂವಿಧಾನ ಇದೆಯೇ ? ಇಲ್ಲಿ ನಮ್ಮ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ".

-ಶರಣಬಸಪ್ಪ ಕಬ್ಜ, ಪಾದಯಾತ್ರಿಗಳ ಮುಖಂಡ

"ಇವರು ಸೌಜನ್ಯ ಹೆಸರಿನಲ್ಲಿ ಪಾದದಯಾತ್ರೆ ನಡೆಸಿ ಪ್ರಚಾರ ಗಿಟ್ಟಿಸುವ ಕಾರ್ಯ ಮಾಡುತ್ತಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ, ಧರ್ಮಾಧಿಕಾರಿ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ. ಇವರ ಈ ವರ್ತನೆಯಿಂದಾಗಿ ಧರ್ಮಸ್ಥಳದಲ್ಲಿ ಅನಗತ್ಯ ಗೊಂದಲಕ್ಕೆ ಕಾರಣವಾಗಿದೆ. ಇಂತಹ ವರ್ತನೆಗಳನ್ನು ಸಹಿಸಲು ಸಾಧ್ಯವಿಲ್ಲ".

-ಚಂದ್ರ ಧರ್ಮಸ್ಥಳ ನಿವಾಸಿ





share
ವಾರ್ತಾಭಾರತಿ
ವಾರ್ತಾಭಾರತಿ
Next Story
X