Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಂಕನಾಡಿ: ರಸ್ತೆ ದುರಸ್ಥಿಗೆ ಒತ್ತಾಯಿಸಿ...

ಕಂಕನಾಡಿ: ರಸ್ತೆ ದುರಸ್ಥಿಗೆ ಒತ್ತಾಯಿಸಿ ಡಿವೈಎಫ್‌ಐ ಭಿತ್ತಿಪತ್ರ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ21 July 2025 10:31 PM IST
share
ಕಂಕನಾಡಿ: ರಸ್ತೆ ದುರಸ್ಥಿಗೆ ಒತ್ತಾಯಿಸಿ ಡಿವೈಎಫ್‌ಐ ಭಿತ್ತಿಪತ್ರ ಪ್ರದರ್ಶನ

ಮಂಗಳೂರು: ಬೃಹತ್ ಗುಂಡಿಗಳಿಂದ ವಾಹನ ಸಂಚಾರಕ್ಕೆ ಅಯೋಗ್ಯವಾಗಿರುವ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಕಂಕನಾಡಿ ಬೆಂದೂರ್‌ವೆಲ್ ವರೆಗಿನ ಮುಖ್ಯ ರಸ್ತೆ ದುರಸ್ಥಿಗೆ ಒತ್ತಾಯಿಸಿ ಡಿವೈಎಫ್‌ಐ ಮಂಗಳೂರು ನಗರ ಸಮಿತಿ ನೇತೃತ್ವದಲ್ಲಿ ಸೋಮವಾರ ಕಂಕನಾಡಿ ಕರಾವಳಿ ವೃತ್ತದ ಬಳಿ ಭಿತ್ತಿಪತ್ರ ಪ್ರದರ್ಶನ ನಡೆಯಿತು.

ರಸ್ತೆ ದುರಸ್ಥಿ ಮಾಡದಿರುವುದಕ್ಕೆ ತೀವ್ರ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಅವರು ಸ್ಮಾರ್ಟ್ ಸಿಟಿ ಯೋಜನೆ ಹೆಸರಿನಲ್ಲಿ ಬಂದಿರುವ ಸಾವಿರಾರು ಕೋಟಿ ಹಣ ವ್ಯರ್ಥವಾಗಿದೆ ನಗರ ಪ್ರವೇಶ ಮಾಡುವ ಮುಖ್ಯ ರಸ್ತೆಯನ್ನೇ ನಿರ್ಲಕ್ಷ್ಯ ಮಾಡಲಾಗಿದೆ. ದಿನನಿತ್ಯ ರಸ್ತೆ ಗುಂಡಿಗಳಿಗೆ ಬಿದ್ದು ಸಾವು ನೋವುಗಳು ಸಂಭವಿಸುತ್ತಿದೆ ರಸ್ತೆ ಗುಂಡಿಗಳಿಂದಾಗಿ ಅಪಘಾತ ಸಂಭವಿಸಿದರೆ ಪಾಲಿಕೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜನಪ್ರತಿನಿದಿಗಳು ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ ಅಧಿಕಾರಿಗಳು ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿದರು.

ಡಿವೈಎಫ್‌ಐ ಜಿಲ್ಲಾ ಸಹ ಕಾರ್ಯದರ್ಶಿ ಮಾಧುರಿ ಬೋಳಾರ ಅವರು ಮಾತನಾಡಿ ರಸ್ತೆ ಗುಂಡಿಗ ಳಿಂದಾಗಿ ನಗರದಲ್ಲಿ ದಿನನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದೆ ನಗರದಿಂದ ಹೆದ್ದಾರಿ ತಲುಪ ಬೇಕಾದರೆ ಒಂದು ಗಂಟೆ ವಿಳಂಬ ಆಗುತ್ತಿದೆ ಇದರಿಂದ ನಗರಕ್ಕೆ ಕೆಲಸಕ್ಕೆ ಬರುವ ಯುವತಿಯರು ಮತ್ತು ಮಹಿಳೆ ಯರು ಮನೆಗೆ ತಲುಪಬೇಕಾದರೆ ರಾತ್ರಿಯಾಗುತ್ತಿದೆ. ಗಂಟೆಗಟ್ಟಲೆ ಟ್ರಾಫಿಕ್ ಜಾಮ್‌ನಲ್ಲಿ ವ್ಯರ್ಥ ಆಗುವ ಸಮಯಕ್ಕೆ ಹೊಣೆ ಯಾರು ಎಂದು ಅವರು ಪ್ರಶ್ನಿಸಿದರು.

ಸಿಪಿಎಂ ನಗರ ದಕ್ಷಿಣ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು,ಡಿವೈಎಫ್‌ಐ ನಗರಾಧ್ಯಕ್ಷ ಜಗದೀಶ್ ನಾರಾಯಣ್ ಬಜಾಲ್, ಜಿಲ್ಲಾ ಮುಖಂಡರಾದ ತಯ್ಯುಬ್ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು.

ಡಿವೈಎಫ್‌ಐ ಮುಖಂಡರಾದ ರಿಝ್ವಾನ್ ಖಂಡಿಗ,ಪುನೀತ್ ಊರ್ವಸ್ಟೋರ್, ವರ ಪ್ರಸಾದ್ ಬಜಾಲ್, ಕೃಷ್ಣ ಬಜಾಲ್, ಪ್ರವೀಣ್ ಕೊಂಚಾಡಿ, ಆನಂದ ಏನೇಲ್ಮಾರ್,ಕಟ್ಟಡ ಕಾರ್ಮಿಕರ ಸಂಘಟನೆ ಮುಖಂಡ ರಾದ ಮನೋಜ್ ಕುಲಾಲ್, ಲೋಕೇಶ್ ಎಂ,, ರಿಕ್ಷಾ ಚಾಲಕರ ಸಂಘದ ಮುಖಂಡರಾದ ಅನ್ಸರ್ ಬಜಾಲ್, ಇಕ್ಬಾಲ್ ಉರ್ವಸ್ಟೋರ್, ಜನವಾದಿ ಮಹಿಳಾ ಸಂಘದ ಮುಖಂಡರಾದ ಅಸುಂತ ಡಿಸೋಜ, ಯೋಗೀತಾ ಸುವರ್ಣ ಮುಂತಾದವರು ಉಪಸ್ಥಿತರಿದ್ದರು.

ನಗರ ಕಾರ್ಯದರ್ಶಿ ನವೀನ್ ಕೊಂಚಾಡಿ ಸ್ವಾಗತಿಸಿ, ವಂದಿಸಿದರು.

ಜಿಲ್ಲೆಯಾದ್ಯಂತ ಪ್ರತಿಭಟನೆಗೆ ನಿರ್ಧಾರ

ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಿ ರಸ್ತೆ ದುರಸ್ಥಿ ಮಾಡದಿರುವುದನ್ನು ವಿರೋಧಿಸಿ ಸರಣಿ ಪ್ರತಿಭಟನೆ ನಡೆಸಲು ಡಿವೈಎಫ್‌ಐ ನಿರ್ಧಾರ ಕೈಗೊಂಡಿದೆ ಎಂದು ಬಿಕೆ ಇಮ್ತಿಯಾಜ್ ತಿಳಿಸಿದ್ದಾರೆ.

ಜಿಲ್ಲೆಯ ಹಲವೆಡೆ ರಸ್ತೆ ಗುಂಡಿಗೆ ಬಿದ್ದು ದಿನನಿತ್ಯ ಯುವಜನರು ಸಾವಿಗೀಡಾಗುತ್ತಿದ್ದಾರೆ, ರಾಷ್ಟ್ರೀಯ ಹೆದ್ದಾರಿ ಸಹಿತ ಒಳ ರಸ್ತೆಗಳು ಹದಗೆಟ್ಟು ಸಂಚಾರಕ್ಕೆ ಅಯೋಗ್ಯವಾದ ಸ್ಥಿತಿಯಲ್ಲಿದ್ದು ಕೂಡಲೇ ದುರಸ್ಥಿಗೆ ಒತ್ತಾಯಿಸಿ ಜಿಲ್ಲೆಯಲ್ಲಿ ಸರಣಿ ಹೋರಾಟ ಸಂಘಟಿಸಲು ಡಿ ವೈಎಫ್‌ಐ ನಿರ್ಧರಿಸಿದೆ ಎಂದು ಬಿ.ಕೆ ಇಮ್ತಿಯಾಝ್ ತಿಳಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X