Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪತ್ರಿಕೆ ಓದುವುದು ದೃಷ್ಟಿಕೋನ...

ಪತ್ರಿಕೆ ಓದುವುದು ದೃಷ್ಟಿಕೋನ ವಿಸ್ತಾರಕ್ಕೆ ದಾರಿ: ಡಾ.ಮಹಾಬಲೇಶ್ವರ ರಾವ್

ವಾರ್ತಾಭಾರತಿವಾರ್ತಾಭಾರತಿ23 July 2025 11:10 PM IST
share
ಪತ್ರಿಕೆ ಓದುವುದು ದೃಷ್ಟಿಕೋನ ವಿಸ್ತಾರಕ್ಕೆ ದಾರಿ: ಡಾ.ಮಹಾಬಲೇಶ್ವರ ರಾವ್

ಕಾರ್ಕಳ: ಪತ್ರಿಕೆ ಓದುವುದರಿಂದ ವಿವಿಧ ದೃಷ್ಟಿಕೋಗಳನ್ನು ಅರಿತುಕೊಳ್ಳಲು ಸಾಧ್ಯವಿದೆ. ಪ್ರತಿದಿನ ಒಂದೇ ಪತ್ರಿಕೆಗೆ ಸೀಮಿತವಾಗದೇ, ಐದಕ್ಕಿಂತ ಹೆಚ್ಚು ಭಿನ್ನ ಪ್ರಕಾರದ ಪತ್ರಿಕೆಗಳನ್ನು ಓದುವ ಅಗತ್ಯವಿದೆ. ಸ್ಥಳೀಯ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಸುದ್ದಿಗಳ ಆಳವಾದ ಅಧ್ಯಯನ, ಹಾಗೂ ಕ್ರೀಡೆ, ರಾಜಕೀಯ, ವಿಜ್ಞಾನ, ತಂತ್ರಜ್ಞಾನ, ಕಲೆ-ಸಾಹಿತ್ಯ, ಪರಿಸರ ಹಾಗೂ ಆರ್ಥಿಕ ವಿಭಾಗಗಳ ವರದಿಗಳನ್ನು ವಿಶ್ಲೇಷಿಸುವ ಅಭ್ಯಾಸ ವಿದ್ಯಾರ್ಥಿಗಳಲ್ಲಿ ಬೆಳೆಬೇಕು ಎಂದು ಉಡುಪಿ ಟಿ.ಎಂ.ಎ. ಪೈ ಮಹಾವಿದ್ಯಾಲಯದ ಸಮನ್ವಯಾಧಿಕಾರಿ ಡಾ. ಮಹಾಬಲೇಶ್ವರ ರಾವ್ ಹೇಳಿದರು.

ಅವರು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು, ಇದರ ಸಹಯೋಗದಲ್ಲಿ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ನಡೆದ ಪತ್ರಿಕಾ ದಿನಾಚರಣೆ - 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

"ಭಾವೋದ್ವೇಗಾತ್ಮಕ ಅಥವಾ ಸೆನ್ಸೇಷನಲ್ ಸುದ್ದಿಗಳಿಗೆ ಕಡಿಮೆ ಪ್ರಾಮುಖ್ಯತೆ ನೀಡಬೇಕು. ಮೌಲ್ಯಾಧಾರಿತ, ವಿಶ್ಲೇಷಣಾತ್ಮಕ ಹಾಗೂ ನೈಜ ಮಾಹಿತಿಗೆ ಹೆಚ್ಚು ಒತ್ತು ನೀಡುವುದು ಬುದ್ಧಿವಿಕಾಸಕ್ಕೆ ಅಗತ್ಯ," ಎಂದು ಹೇಳಿದರು.

ಕ್ರಿಯೇಟಿವ್ ಕಾಲೇಜಿನ ಸಂಸ್ಥಾಪಕ ಅಶ್ವಥ್ ಎಸ್.ಎಲ್. ಮಾಧ್ಯಮದ ನೈತಿಕ ಬದ್ಧತೆಯ ಕುರಿತು ಮಾತನಾಡಿ, "ಮಾಧ್ಯಮಗಳು ನೈತಿಕತೆ ಮತ್ತು ಸಾಮಾಜಿಕ ಬದ್ಧತೆ ಹೊಂದಿದಾಗ ಮಾತ್ರ ನ್ಯಾಯ, ಸತ್ಯ ಮತ್ತು ಸಮಾನತೆಯ ಪ್ರಬಲ ಸಾಧನಗಳಾಗಿ ಪರಿಣಮಿಸಬಹುದು. ಮಾಧ್ಯಮಗಳು ಲೋಕಜಾಗೃತಿಗೆ ಶಕ್ತಿಯಾಗಬೇಕು; ವೆಬ್ ಮಾಧ್ಯಮಗಳು ಜಾಗೃತಿ ಮೂಡಿಸಬೇಕು ಹೊರತು ಭಯ ಹುಟ್ಟಿಸುವ ಕಾರ್ಯ ಮಾಡಬಾರದು," ಎಂದರು.

ಕಾರ್ಕಳ ಗ್ರಾಮಾಂತರ ಠಾಣೆಯ ಠಾಣಾಧಿಕಾರಿ ಪ್ರಸನ್ನ ಎಂ.ಎಸ್. ಮಾತನಾಡಿ, "ಪತ್ರಿಕೆ ಓದುವುದರಿಂದ ಕನ್ನಡ ಭಾಷೆಯ ಬಳಕೆ ಹಾಗೂ ಬರವಣಿಗೆಯು ಉತ್ತಮಗೊಳ್ಳುತ್ತದೆ. ಸಾಮಾಜಿಕ ಮಾಧ್ಯಮದಲ್ಲಿ ಬರುವ ಜಾಹಿರಾತುಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನಂಬಿಕೆ ಇಡುವ ಹಿನ್ನೆಲೆಯಲ್ಲಿ ಅಪರಾಧಗಳು ಹೆಚ್ಚುತ್ತಿವೆ. ವಿದ್ಯಾರ್ಥಿಗಳ ಬದುಕು ರೂಪಿಸುವಲ್ಲಿ ಪತ್ರಿಕೆಗೆ ಮಹತ್ವದ ಪಾತ್ರವಿದೆ," ಹೇಳಿದರು.

ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಷರೀಫ್ ಪತ್ರಿಕೆಗಳು ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವ ಕೆಲಸ ಮಾಡುತ್ತಿವೆ ಎಂದರು.

ಈ ಸಂದರ್ಭದಲ್ಲಿ ಪತ್ರಿಕಾ ವಿತರಕ ಸದಾನಂದ ಪಾಟ್ಕರ್ ತೆಳ್ಳಾರು ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಹರೀಶ್ ಆಚಾರ್ಯ, ಕೋಶಾಧಿಕಾರಿ ಕೆ.ಎಂ. ಖಲೀಲ್, ಜಿಲ್ಲಾ ಪ್ರತಿನಿಧಿ ಉದಯ್ ಕುಮಾರ್ ಮುಂಡ್ಕೂರು, ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಉಮೇಶ್ ಮಾರ್ಪಳ್ಳಿ ಉಪಸ್ಥಿತರಿದ್ದರು.

ಹಿರಿಯ ಪತ್ರಕರ್ತ ವಾಸುದೇವ ಭಟ್ ಸ್ವಾಗತಿಸಿದರು. ಉಪನ್ಯಾಸಕಿ ಪ್ರಿಯಾಂಕ ಕಾರ್ಯಕ್ರಮ ನಿರೂಪಿಸಿದರು ಹಾಗೂ ಅವಿನ್ ಶೆಟ್ಟಿ ಧನ್ಯವಾದ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X