Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಜಿಲ್ಲಾ ಕಾಂಗ್ರೆಸ್ ಅಧಿಕಾರ ವಿಭಜನೆ...

ದ.ಕ. ಜಿಲ್ಲಾ ಕಾಂಗ್ರೆಸ್ ಅಧಿಕಾರ ವಿಭಜನೆ ಬಗ್ಗೆ ಚಿಂತನೆ: ಎಂ.ಸಿ.ವೇಣುಗೋಪಾಲ್

ವಾರ್ತಾಭಾರತಿವಾರ್ತಾಭಾರತಿ26 July 2025 2:50 PM IST
share
ದ.ಕ. ಜಿಲ್ಲಾ ಕಾಂಗ್ರೆಸ್ ಅಧಿಕಾರ ವಿಭಜನೆ ಬಗ್ಗೆ ಚಿಂತನೆ: ಎಂ.ಸಿ.ವೇಣುಗೋಪಾಲ್

ಮಂಗಳೂರು, ಜು. 26: ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕವನ್ನು ಎಐಸಿಸಿ ನಿರ್ದೇಶನದ ಮೇರೆಗೆ ಮಂಗಳೂರು ನಗರ ಹಾಗೂ ಮಂಗಳೂರು ಗ್ರಾಮಾಂತರವಾಗಿ ಎರಡು ಘಟಕಗಳಾಗಿ ವಿಭಜಿಸಲಾಗಿದ್ದು, ಅದರಂತೆ ಜಿಲ್ಲಾ ಕಾಂಗ್ರೆಸ್ ನ ಅಧಿಕಾರ ವಿಭಜನೆಯೂ ಚಿಂತನೆಯಲ್ಲಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಸ್ತುವಾರಿ ಎಂ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಈ ಬಗ್ಗೆ ಕೆಪಿಸಿಸಿ ಹಾಗೂ ಎಐಐಸಿಯಿಂದ ತೀರ್ಮಾನ ಇನ್ನಷ್ಟೇ ಆಗಬೇಕಾಗಿದೆ ಎಂದರು.

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸುವ ಬಿಜೆಪಿಗರಿಗೆ ಈ ಯೋಜನೆಗಳು ಯಾರಿಗೂ ತಲುಪಿಲ್ಲ ಅಥವಾ ಯೋಜನೆಗಳು ಸುಳ್ಳು ಎಂದು ಹೇಳಲು ಸಾಧ್ಯ ಇಲ್ಲ. ಪಕ್ಷ, ಜಾತಿ, ಸಮುದಾಯ ಭೇದವಿಲ್ಲದೆ ಎಲ್ಲರಿಗೂ ಈ ಯೋಜನೆಗಳು ತಲುಪಿವೆ. ಇದಕ್ಕೆ ಯೋಜನೆಗಳನ್ನು ಪಡೆದ ಫಲಾನುಭವಿಗಳು ಖರ್ಚು ಮಾಡಿದ ಮೊತ್ತವೂ ಸಾಕ್ಷಿಯಾಗಿದೆ ಎಂದವರು ಹೇಳಿದರು.

ಕಡಬ ಪಟ್ಟಣ ಪಂಚಾಯತ್ ಚುನಾವಣೆಗೆ ಸಂಬಂಧಿಸಿ ನಾಮಪತ್ರ ಸಲ್ಲಿಕೆ ಆಗಸ್ಟ್ 5ರಂದು ನಡೆಯಲಿದೆ. 13 ವಾರ್ಡ್ ಗಳ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಪೂರ್ವಭಾವಿ ಸಭೆ, ಚರ್ಚೆ ನಡೆಸಲಾಗಿದೆ. ಈ ಗೆಲುವಿನ ಮೂಲಕ ಮುಂದಿನ ತಾಪಂ., ಜಿಪಂ ಹಾಗೂ ಮನಪಾ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಯಾವ ರೀತಿಯ ಕಾರ್ಯಕ್ರಮ ರೂಪಿಸಬೇಕೆಂಬ ಬಗ್ಗೆ ಚರ್ಚೆ ನಡೆಯಲಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ನಿರಂತರವಾಗಿ ಅಧಿಕಾರಿಗಳ, ಜಿಲ್ಲಾ ನಾಯಕರ ಜತೆ ಸಂಪರ್ಕ ಇರಿಸಿ ಅಗತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ. ಖುದ್ದು ಆರೋಗ್ಯ ಸಚಿವರೂ ಆಗಿರುವ ಅವರು, ಮಳೆಗಾಲದಲ್ಲಿ ಜಿಲ್ಲೆಯನ್ನು ಕಾಡುವ ರೋಗಗಳ ಬಗ್ಗೆ ಕಾರ್ಯಕ್ರಮ ರೂಪಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಧರ್ಮಗಳ ನಡುವೆ ಭಿನ್ನಾಭಿಪ್ರಾಯ ಮೂಡಿಸಿ ಅಶಾಂತಿಗೆ ಕಾರಣವಾಗಿದ್ದ ಪರಿಸ್ಥಿತಿಯನ್ನು ನಿಯಂತ್ರಿಸಲು ಸೌಹಾರ್ದ ಸಭೆ ನಡೆಸಲಾಗಿದೆ. ಕೋಮುಗಲಭೆಗೆ ಪ್ರಯತ್ನಿಸುವ ಯಾವುದೇ ಪಕ್ಷ ಅಥವಾ ಯಾರೇ ಆಗಲಿ ಕಠಿಣ ಕ್ರಮಕ್ಕೆ ಜಿಲ್ಲೆಗೆ ನೂತನವಾಗಿ ಅಧಿಕಾರ ಸ್ವೀಕರಿಸಿರುವ ಅಧಿಕಾರಿಗಳು ಕ್ರಮ ವಹಿಸಿದ್ದಾರೆ. ಅವರ ಕ್ರಮಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಅವರು ಹೇಳಿದರು.

ಪಕ್ಷದ ಎಸ್ಸಿ ಎಸ್ಟಿ ಘಟಕದ ಸಭೆ ಇಂದು ನಡೆಸಲಾಗಿದೆ. ಈ ಮೂಲಕ ವಿವಿಧ ವಿಭಾಗಗಳ ಸಭೆ ನಡೆಸಿ ಪಕ್ಷ ಸಂಘಟನೆಗೆ ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಹಿಳಾ ಘಟಕ ನಗರ ವಿಭಾಗದ ಅಧ್ಯಕ್ಷೆ ಅಪ್ಪಿ, ಗ್ರಾಮಾಂತರ ವಿಭಾಗದ ಅಧ್ಯಕ್ಷೆ ಉಷಾ ಅಂಚನ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಮುಖಂಡರಾದ ನವೀನ್ ಡಿಸೋಜ, ಮನುರಾಜ್, ದಿನೇಶ್, ಪ್ರೇಮ್ ಬಳ್ಳಾಲ್ಬಾಗ್, ಜಗನ್ನಾಥ್ ಮೊದಲಾದವರು ಉಪಸ್ಥಿತರಿದ್ದರು.

ಸಿದ್ದರಾಮಯ್ಯ, ಡಿಕೆಶಿ ಒಂದೇ ನಾಣ್ಯದ ಎರಡು ಮುಖಗಳು

ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಒಂದೇ ನಾಣ್ಯದ ಎರಡು ಮುಖಗಳು. ಇವರಿಬ್ಬರೂ ಜನಸಾಮಾನ್ಯರ ಜೊತೆ ಒಡನಾಟ ಇರಿಸಿಕೊಂಡು ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ. ರಾಜಕೀಯದಲ್ಲಿ ಅವಕಾಶಕ್ಕಾಗಿ ಎಲ್ಲರಿಗೂ ಆಸೆ ಇರುತ್ತದೆ. ರಾಜಣ್ಣ ಅವರಾಗಲಿ, ಸತೀಶ್ ಜಾರಕಿಹೊಳೆಯವರಾಗಲಿ ಸಿಎಂ ಬದಲಾವಣೆ ಎಂಬ ಹೇಳಿಕೆ ನೀಡಿಲ್ಲ. ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಾ ಐದು ವರ್ಷಗಳ ಕಾಲ ನಾನು ಮುಖ್ಯಮಂತ್ರಿಯಾಗಿರಲಿದ್ದೇನೆ. ಆದರೆ ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದಿದ್ದಾರೆ. ಹಾಗಾಗಿ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಬಿಜೆಪಿಯವರು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಎಂ.ಸಿ. ವೇಣುಗೋಪಾಲ್ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X