ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಪ್ರಶಸ್ತಿ: ಅರ್ಜಿ ಆಹ್ವಾನ

ಮಂಗಳೂರು: ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಸಂಸ್ಥೆಗಳಿಗೆ, ವಿಶೇಷ ಶಿಕ್ಷಕರಿಗೆ ಮತ್ತು ವೈಯಕ್ತಿಕ ಪ್ರಶಸ್ತಿಗಳನ್ನು ರಾಜ್ಯ ಮಟ್ಟದಲ್ಲಿ ಆಯ್ಕೆ ಮಾಡಿ ಡಿ.3ರಂದು ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನವಾಗಿದೆ. ಅರ್ಹ ಅಭ್ಯರ್ಥಿಗಳು ಕೊಟ್ಟಾರದಲ್ಲಿರುವ ಜಿಪಂ ಕಟ್ಟಡದಲ್ಲಿರುವ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಕಚೇರಿಯ ದೂ.ಸಂ: 0824-2458173/2455999ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





