Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫ್ರಾನ್ಸ್‌ನ ಗಾಳಿಪಟ ಜಾತ್ರೆಗೆ ಕುಡ್ಲದ...

ಫ್ರಾನ್ಸ್‌ನ ಗಾಳಿಪಟ ಜಾತ್ರೆಗೆ ಕುಡ್ಲದ ರಥ ಯಾತ್ರೆ

ವಾರ್ತಾಭಾರತಿವಾರ್ತಾಭಾರತಿ4 Aug 2025 9:34 PM IST
share
ಫ್ರಾನ್ಸ್‌ನ ಗಾಳಿಪಟ ಜಾತ್ರೆಗೆ ಕುಡ್ಲದ ರಥ ಯಾತ್ರೆ

ಮಂಗಳೂರು, ಆ.4: ಫ್ರಾನ್ಸ್ ದೇಶದಲ್ಲಿ ಸೆಪ್ಟೆಂಬರ್ 13ರಿಂದ ಜರಗಲಿರುವ ಜಗತ್ತಿನ ಅತೀ ದೊಡ್ಡ ಅಂತರ್ ರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಭಾರತದ ಪ್ರತಿನಿಧಿ ತಂಡವಾಗಿ ಮಂಗಳೂರಿನ ಸರ್ವೇಶ್ ರಾವ್ ನೇತೃತ್ವದ ’ಟೀಮ್ ಮಂಗಳೂರು’ ಹವ್ಯಾಸಿ ಗಾಳಿಪಟ ತಂಡವು ಭಾಗವಹಿಸಲಿದೆ.

ಟೀಮ್ ಮಂಗಳೂರು ತಂಡವು ಈಗಾಗಲೇ ಜಾಗತಿಕ ಮಟ್ಟದಲ್ಲಿ 12 ದೇಶಗಳ ಗಾಳಿಪಟ ಉತ್ಸವಗಳಲ್ಲಿ ಭಾರತದ ಸಾಂಸ್ಕೃತಿಕ ವಿಷಯಗಳನ್ನು ಗಾಳಿಪಟ ವಿನ್ಯಾಸವನ್ನಾಗಿ ಬೃಹತ್ ಗಾಳಿಪಟಗಳನ್ನು ರಚಿಸಿ ಫ್ರಾನ್ಸ್, ಇಂಗ್ಲೆಂಡ್, ಕೆನಡಾ, ಇಟೆಲಿ, ಕೊರಿಯಾ, ಹಾಂಗ್‌ಕಾಂಗ್, ಇಂಡೋನೆಷ್ಯ, ಕತಾರ್, ದುಬೈ, ಶ್ರೀಲಂಕಾ ದೇಶಗಳಲ್ಲಿ ಭಾಗವಹಿಸಿವೆ.

ಈ ಸಲದ ಗಾಳಿಪಟ ಉತ್ಸವಕ್ಕೆ ರಥದ ವಿನ್ಯಾಸದ ಗಾಳಿಪಟ ತಯಾರಿಯಾಗುತ್ತಿದೆ. 18 ಅಡಿ ಎತ್ತರ ಮತ್ತು 10 ಅಡಿ ಅಗಲದ ಈ ಗಾಳಿಪಟದ ಕಲಾ ವಿನ್ಯಾಸವನ್ನು ದಿನೇಶ್ ಹೊಳ್ಳ ಮಾಡಿದ್ದಾರೆ. ಗಾಳಿಪಟ ರಚನೆಯಲ್ಲಿ ಪ್ರಾಣೇಶ್ ಕುದ್ರೋಳಿ, ಸತೀಶ್ ರಾವ್, ಅರುಣ್ ಸಹಕರಿಸುತ್ತಿದ್ದಾರೆ. ಗಾಳಿಪಟದ ಹೊಲಿಗೆಯನ್ನು ಸರ್ವೇಶ್ ರಾವ್ ಮಾಡುತ್ತಿದ್ದಾರೆ.

ಇಡೀ ಜಗತ್ತೇ ಇಂದು ನೀರಿನ ಬಗ್ಗೆ ಬರಗಾಲವನ್ನು ಅನುಭವಿಸುತ್ತಿದೆ. ನೀರು ಈ ಭುವಿಯ ಸಕಲ ಜೀವ ಸಂಕುಲಗಳ ಚೇತನಾ ಶಕ್ತಿ, ಪ್ರತೀ ನೀರಿನ ಹನಿಯೂ ತುಂಬಾ ಮಹತ್ವದ್ದು. ನೀರಿನ ಸಂರಕ್ಷಣೆಯ ಬಗ್ಗೆ ಪಲ್ಲಕ್ಕಿಯಲ್ಲಿ ನೀರಿನ ತಂಬಿಗೆಯನ್ನು ಇಟ್ಟು ನೀರು ಈ ಭುವಿಯ ಪ್ರತ್ಯಕ್ಷ ದೇವರು ಎಂಬಂತೆ ಇನ್ನೊಂದು ಗಾಳಿಪಟವನ್ನು ಮಾಡಲಾಗುತ್ತಿದೆ. ಇದರಲ್ಲಿ ಮೇಲೆ ಆಕಾಶ ಕೆಳಗೆ ಬೆಟ್ಟ ನಡುವೆ ನೀರಿನ ತಂಬಿಗೆ, ಬಾಲಂಗೋಚಿಯಲ್ಲಿ ಮರ, ಗಿಡಗಳ ಹಸಿರು ಹಂದರವನ್ನು ಕೆಳಗಡೆ ನೀರಿನ ಶೇಖರಣೆಯನ್ನು ಅಂದರೆ ಹಸಿರು ಪರಿಸರ ಇದ್ದರೆ ನೀರು ಸಹಜವಾಗಿಯೇ ಸಂಗ್ರಹವಾಗುತ್ತದೆ ಎಂಬ ಸಂದೇಶವನ್ನು ಸಾರಲಾಗಿದೆ.

ರಿಪ್ ಸ್ಟಾಪ್ ನೈಲಾನ್ ಬಟ್ಟೆಯಿಂದ ಅಪ್ಲಿಕ್ ಮಾದರಿಯಲ್ಲಿ ಈ ಗಾಳಿಪಟವನ್ನು ತಯಾರಿಸಲಾಗುತ್ತಿದೆ. ಮಂಗಳೂರಿನ ಅಶೋಕ ನಗರದ ಸರ್ವೇಶ್ ರಾವ್‌ರ ಮನೆಯಲ್ಲಿ ಈ ಗಾಳಿಪಟದ ತಯಾರಿಯಾಗುತ್ತಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X