ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾಗಿ ನೋಟರಿ ಸುರೇಶ್ ಪೂಜಾರಿ ಆಯ್ಕೆ

ಬಂಟ್ವಾಳ : ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾಗಿ ಬಂಟ್ವಾಳ ಬಾರ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ, ನೋಟರಿ, ನ್ಯಾಯವಾದಿ ಸುರೇಶ್ ಪೂಜಾರಿ ಆಯ್ಕೆಯಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕುಗಳ ವಿಭಾಗದ ರಾಜ್ಯಾಧ್ಯಕ್ಷ ಸಿ.ಎಂ.ಧನುಂಜಯ ಅವರ ಆದೇಶದ ಮೇರೆಗೆ ದ.ಕ.ಜಿಲ್ಲಾದ್ಯಕ್ಷ ಮನೋಜ್ ರಾಜ್ ರಾಜೀವ ನೇಮಕಾತಿಗೊಳಿಸಿ ಆದೇಶ ಪತ್ರ ಹೊರಡಿಸಿದ್ದಾರೆ.
ಉಪಾಧ್ಯಕ್ಷರಾಗಿ ಉಮಾಕರ ನೆಕ್ಕರಾಜೆ, ಪ್ರಧಾನ ಕಾರ್ಯದರ್ಶಿ ಯಾಗಿ ಮುಹಮ್ಮದ್ ಗಝ್ಝಾಲಿ ಕೊಳ್ನಾಡು, ಕಾರ್ಯದರ್ಶಿಯಾಗಿ ವಿನ್ಸ್ ಲೆಟ್ ಪಿಂಟೋ ಅಲ್ಲಿಪಾದೆ, ಜೊತೆ ಕಾರ್ಯದರ್ಶಿಯಾಗಿ ನಿರ್ಮಲ ಮೊಡಂಕಾಪು, ಕೋಶಾಧಿಕಾರಿಯಾಗಿ ಮೋಹನ್ ಕುಮಾರ್ ನೆತ್ತರಕೆರೆ ಇವರನ್ನು ಆಯ್ಕೆಗೊಳಿಸಿ ಆದೇಶಿಸಲಾಗಿದೆ.
ಮಾಜಿ ಸಚಿವ ಬಿ.ರಮಾನಾಥ ರೈ , ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ ಅವರ ಶಿಫಾರಸ್ಸಿನ ಮೇರೆಗೆ ಈ ನೇಮಕಾತಿ ಆದೇಶ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.







