ನ.28: ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಮಂಗಳೂರು, ನ.26: ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನ.28ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಅಂದು ಬೆಳಗ್ಗೆ 9:55ಕ್ಕೆ ಮಂಗಳೂರಿಗೆ ಆಗಮಿಸುವರು. 11:05ಕ್ಕೆ ವಿಮಾನ ನಿಲ್ದಾಣದಲ್ಲಿ ಪ್ರಧಾನ ಮಂತ್ರಿ ಅವರನ್ನು ಸ್ವಾಗತಿಸಲಿರುವರು. ಮಂಗಳೂರು ವಿಮಾನ ನಿಲ್ದಾಣ ಸಭಾಂಗಣದಲ್ಲಿ 11:30ಕ್ಕೆ ಕರಾವಳಿ ಉತ್ಸವದ ಬಗ್ಗೆ ಪೂರ್ವಭಾವಿ ಸಭೆ, 12:30ಕ್ಕೆ ನಂದಿನಿ ನದಿಗೆ ತ್ಯಾಜ್ಯ ನೀರು ಸೇರಿ ಕಲುಷಿತಗೊಂಡು ಸಮಸ್ಯೆಯಾಗುತ್ತಿರುವ ಬಗ್ಗೆ ಚರ್ಚಿಸಲು ಸಭೆ ನಡೆಸಲಿದ್ದಾರೆ.
ಅಪರಾಹ್ನ 3 ಗಂಟೆಗೆ ಪಡೀಲ್‌ನ ಪ್ರಜಾಸೌಧದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕೊಠಡಿ ಉದ್ಘಾಟನೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ, 5:15ಕ್ಕೆ ಗುರುಪುರ ಕೈಕಂಬದಲ್ಲಿ ಗುರುಪುರ ಬ್ಲಾಕ್ ಕಾಂಗ್ರೆಸ್ ಕಚೇರಿ ಉದ್ಘಾಟನೆ ಹಾಗೂ ಹೊಸ ಅಧ್ಯಕ್ಷರ ಪದಗ್ರಹಣ ಮತ್ತು ಕಾರ್ಯಕರ್ತರ ಸಭೆ. ಮಂಗಳೂರಿನಲ್ಲಿ ವಾಸ್ತವ್ಯ.
Next Story





