ಉಪ್ಪಿನಂಗಡಿ: ಅಕ್ರಮ ಮರ ಸಾಗಾಟದ ಆರೋಪಿ ಸೆರೆ

ಉಪ್ಪಿನಂಗಡಿ: ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದಿರುವ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಆರೋಪಿಯನ್ನು ಬಂಧಿಸಿ, ಅಕ್ರಮ ಮರವನ್ನು ವಶಕ್ಕೆ ಪಡೆದುಕೊಂಡಿದೆ.
ಸಕಲೇಶಪುರ ನಿವಾಸಿ ರಝಾಕ್ ಬಂಧಿತ ಆರೋಪಿ. ಈತ ಲಾರಿಯಲ್ಲಿ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವೇಳೆ ನೆಲ್ಯಾಡಿಯ ಹೊಸಮಜಲು ಎಂಬಲ್ಲಿ ಲಾರಿ ಸಮೇತ ಅಕ್ರಮ ಮರವನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಶಿಬಾಜೆ, ಶಿಶಿಲ ಮೊದಲಾದ ಕಡೆ ರಕ್ಷಿತಾರಣ್ಯದಿಂದ ಅಕ್ರಮವಾಗಿ ಮರಗಳನ್ನು ಕಡಿದು ಸಾಗಿಸುತ್ತಿರುವ ಬಗ್ಗೆ ಪತ್ರಿಕೆಗಳಲ್ಲಿ ವರದಿ ಪ್ರಕಟವಾಗಿತ್ತು. ಆ ಬಳಿಕ ಅರಣ್ಯಾಧಿಕಾರಿಗಳಿಗೆ ಹಿರಿಯ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದರು. ಆಮೇಲಿಂದ ಅಕ್ರಮ ಮರ ಸಾಗಾಟದಂತಹ ಪ್ರಕರಣಗಳು ದಾಖಲಾಗುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಸಾರ್ವಜನಿಕರು ಅಭಿಪ್ರಾಯಿಸಿದ್ದಾರೆ.
Next Story