Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ ಸಂದೇಶ...

ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ ಸಂದೇಶ ಹರಡುವವರು ತಮ್ಮ ಹೆತ್ತವರ ಗೌರವ ಉಳಿಸಲಿ : ಪದ್ಮರಾಜ್ ಸಲಹೆ

ವಾರ್ತಾಭಾರತಿವಾರ್ತಾಭಾರತಿ7 May 2025 1:38 PM IST
share
Photo of Press meet

ಮಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಗಳ ಜೊತೆ ಕೆಟ್ಟ ಸಂದೇಶಗಳನ್ನು ಬರೆಯುವವರು ತಮ್ಮ ಹೆತ್ತವರ ಗೌರವ ಉಳಿಸುವತ್ತ ಯೋಚನೆ ಮಾಡಬೇಕು. ಪ್ರಚೋದನಕಾರಿ, ಕೆಟ್ಟ ಸಂದೇಶಗಳನ್ನು ಬರೆದು ಪ್ರಕರಣ ದಾಖಲಿಸಿಕೊಂಡಾಗ ಅದರಿಂದ ತೊಂದರೆಗೊಳಗಾಗುವುದು ಹೆತ್ತವರು ಎಂಬುದನ್ನು ಮರೆಯಬಾರದು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಹೇಳಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಬರೆಯುವ ಸಂದೇಶಗಳು ನಾಗರಿಕ ಸಮಾಜ ತಲೆತಗ್ಗಿಸುವಂತಿದೆ. ಪೊಲೀಸ್ ಇಲಾಖೆ ಈ ನಿಟ್ಟಿನಲ್ಲಿ ಕಾನೂನು ಕ್ರಮ ವಹಿಸುತ್ತದೆ. ಆದರೆ ಈ ರೀತಿಯಲ್ಲಿ ವರ್ತಿಸುವವರು ತಮ್ಮ ಹೆತ್ತವರ ಬಗ್ಗೆ ಆಲೋಚನೆ ಮಾಡಬೇಕು. ಅವರ ಗೌರವಕ್ಕೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು ಎಂದು ಅವರು ಹೇಳಿದರು.

ದ.ಕ. ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಕರಾವಳಿ ಶಾಸಕರ ಜೊತೆ ಸಮಾಲೋಚನೆ ನಡೆಸಿ ಮಾಸ್ಟರ್ ಪ್ಲಾನ್ ತಯಾರಾಗುತ್ತಿರುವ ಹೊತ್ತಿನಲ್ಲಿಯೇ ಕಳೆದ 10ರಿಂದ 12 ದಿನಗಳಿಂದೀಚೆಗೆ ಜಿಲ್ಲೆಗೆ ಕಪ್ಪು ಚುಕ್ಕೆ ತರುವ ಕಾರ್ಯ ನಡೆಯುತ್ತಿದೆ. ಬಜ್ಪೆಯಲ್ಲಿ ಅಮಾಯಕ ಅಶ್ರಫ್‌ನ ಗುಂಪು ಹತ್ಯೆ ನಡೆದಿರುವುದು ನಾಗರಿಕ ಸಮಾಜವೇ ತಲೆತಗ್ಗಿಸುವಂತದ್ದು. ಈ ಪ್ರಕರಣದ ತನಿಖೆಯ ಆರಂಭದಲ್ಲಿ ಪೊಲೀಸರಿಂದ ವಿಳಂಬದ ಜತೆ ಹಾದಿ ತಪ್ಪಿಸುವ ಕೆಲಸ ಆಗಿತ್ತು. ಆದರೆ ಗೃಹ ಸಚಿವರು ಹಾಗೂ ಉಸ್ತುವಾರಿ ಸಚಿವರ ಆದೇಶದ ಮೇರೆಗೆ ತನಿಖೆ ಚುರುಕುಗೊಳಿಸಿ 21 ಮಂದಿಯ ಬಂಧನ ಹಾಗೂ 17 ಜನರಿಗೆ ನೋಟೀಸು ನೀಡುವ ಕೆಲಸವಾಗಿದೆ. ತನಿಖೆ ಸುಗಮವಾಗಿ ಸಾಗುತ್ತಿರುವ ವೇಳೆಯಲ್ಲೇ ಸುಹಾಸ್ ಕೊಲೆಯಾಗಿದೆ. ಸುಹಾಸ್ ಶೆಟ್ಟಿಯ ಕೊಲೆ ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ. ಅನುಕರಣೀಯವೂ ಅಲ್ಲ. ಆ ಕೃತ್ಯ ಎಸಗಿದ ಎಲ್ಲರಿಗೂ ತಕ್ಕ ಶಿಕ್ಷೆಯಾಗಬೇಕು ಎಂಬುದು ನಮ್ಮ ಆಗ್ರಹ. ಆದರೆ ಆತನ ಮೇಲೆ ರೌಡಿ ಶೀಟ್ ತೆರೆದಿರುವುದು ಯಾರು ಹಾಗೂ ಯಾರ ಅವಧಿಯಲ್ಲಿ ಎಂಬುದನ್ನು ಮರೆಯಬಾರದು. ಸಮಾಜ ಬಾಹಿರ ಕೃತ್ಯದಲ್ಲಿ ತೊಡಗಿದವರನ್ನು ಸರಿದಾರಿಗೆ ತರುವ ಕೆಲಸವನ್ನು ಇದೀಗ ಆತನ ಕೊಲೆಯಾದ ಬಳಿಕ ಆತನನ್ನು ಹಿಂದೂ ಕಾರ್ಯಕರ್ತ ಎಂದು ಹೇಳವವರು ಮಾಡಿದ್ದಾರೆಯೇ ಎಂದು ಅವರು ಪ್ರಶ್ನಿಸಿದರು.

ಕೊಲೆಯಾದ ಸುಹಾಸ್‌ಗೆ ಹಿಂದೂ ಕಾರ್ಯಕರ್ತ ಎಂಬ ಹಣೆಪಟ್ಟಿ ಕೊಟ್ಟು, ಇಲ್ಲಿ ಮತ್ತಷ್ಟು ಜನರ ಮೇಲೆ ಹಲ್ಲೆಗೆ ಕಾರಣವಾಯಿತು. ಬಿಜೆಪಿ ಪಕ್ಷದ ಅಧ್ಯಕ್ಷರು, ನಾಯಕರು ಇಲ್ಲಿ ಬಂದು ಮಾಡಿರುವುದೇನು? ಇವರ ಅರ್ಥದಲ್ಲಿ ಹಿಂದೂ ಕಾರ್ಯರ್ತನೆಂದರೆ ಏನೆಂಬುದರ ಬಗ್ಗೆ ಸ್ಪಷ್ಟನೆ ಬೇಕಾಗಿದೆ. ಪದ್ಮರಾಜ್ ಕೂಡಾ ಓರ್ವ ಹಿಂದೂ. ಆದರೆ ನನ್ನ ಹಿಂದೂ ಧರ್ಮ ಯಾವತ್ತೂ ಇನ್ನೊಂದು ಧರ್ಮವನ್ನು ದ್ವೇಷಿಸಲು ಹೇಳಿಕೊಟ್ಟಿಲ್ಲ. ನನ್ನ ಧರ್ಮದ ಅಶಕ್ತರನ್ನು ಮೇಲೆತ್ತುವುದು ಕೆಲಸ ನಮ್ಮಿಂದ ಆಗಬೇಕು. ದ್ವೇಷ ಹರಡುವುದು ಯಾವ ಧರ್ಮದಲ್ಲಿಯೂ ಇಲ್ಲ. ಸಾಮಾಜಿಕ ದುಷ್ಕೃತ್ಯದಲ್ಲಿ ತೊಡಗುವರು ಎಲ್ಲರನ್ನೂ ಭಯೋತ್ಪಾದಕರೆಂದೇ ಪರಿಗಣಿಸಬೇಕು ಹೊರತು ಧರ್ಮದ ಆಧಾರದಲ್ಲಿ ದ್ವೇಷ ಹರಡುವ ಕೃತ್ಯ ಎಸಗಬಾರದು ಎಂದು ಅವರು ಹೇಳಿದರು.

ಗೋಷ್ಟಿಯಲ್ಲಿ ಮುಖಂಡರಾದ ಇಬ್ರಾಹಿಂ ಕೋಡಿಜಾಲ್, ಶಶಿಧರ ಹೆಗ್ಡೆ, ನವೀನ್ ಡಿಸೋಜಾ, ಸಂಶುದ್ದೀನ್, ದುರ್ಗಾಪ್ರಸಾದ್, ಶಬ್ಬೀರ್, ಸುಹಾನ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X