ಪಡುಬಿದ್ರಿ | ಕೆಪಿಸಿಸಿ ಎಸ್‍ಸಿ ವಿಭಾಗಕ್ಕೆ ಕೇಶವ ಹೆಜ್ಮಾಡಿ ಆಯ್ಕೆ

ಪಡುಬಿದ್ರಿ: ಕಾಪು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಕೇಶವ ಹೆಜ್ಮಾಡಿ ಇವರನ್ನು ಕೆಪಿಸಿಸಿ ಎಸ್‍ಸಿ ವಿಭಾಗದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಬ್ಲಾಕ್ ಕಾಂಗ್ರೆಸ್ ಎಸ್‍ಸಿ, ಎಸ್ಟಿ ವಿಭಾಗದ ಅಧ್ಯಕ್ಷರಾಗಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು.
ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆಯವರ ಶಿಫಾರಸ್ಸಿನ ಮೇರೆಗೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಎಸ್‍ಸಿ ವಿಭಾಗದ ರಾಜ್ಯಾಧ್ಯಕ್ಷ ಆರ್.ಧರ್ಮಸೇನರವರು, ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಅನುಮೋದನೆ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story





