ಪಜೀರು ಪಂಚಾಯತ್: ವಿಕ್ರಮ್ ಲ್ಯಾಂಡರ್ ಛಾಯಾಚಿತ್ರ ಅನಾವರಣ

ಕೊಣಾಜೆ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ -3 ರ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಆದ ಐತಿಹಾಸಿಕ ಕ್ಷಣದ ಸವಿನೆನಪಿಗಾಗಿ ಪಜೀರು ಗ್ರಾಮ ಪಂಚಾಯತ್ ನ ಕಚೇರಿಯಲ್ಲಿ ಚಂದ್ರನ ಮೇಲ್ಮೈಯಲ್ಲಿ ನಿಂತಿರುವ ವಿಕ್ರಮ್ ಲ್ಯಾಂಡರ್ ನ ಛಾಯಾಚಿತ್ರವನ್ನು ಪಜೀರು ಗ್ರಾಮ ಪಂಚಾಯತ್ ಅಧ್ಯಕ್ಷ ರಫೀಕ್ ಪಜೀರು ಅವರ ಅಧ್ಯಕ್ಷತೆಯಲ್ಲಿ ಅನಾವರಣಗೊಳಿಸಲಾಯಿತು.
ಈ ಕಾರ್ಯಕ್ರಮ ಪಂಚಾಯತ್ ನ ಉಪಾಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಮತ್ತು ಪಜೀರು ಗ್ರಾಮಸ್ಥರ ಉಪಸ್ಥಿತಿಯಲ್ಲಿ ನಡೆಸಲಾಯಿತು.
Next Story





