ಪಜೀರು | ತಡೆಗೋಡೆ ಕುಸಿದು ಬಿದ್ದು ಮನೆಗೆ ಹಾನಿ

ಕೊಣಾಜೆ: ಪಜೀರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಳಕ ಎಂಬಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಇಸ್ಮಾಯೀಲ್ ಎಂಬವರ ಮನೆಗೆ ತಡೆಗೋಡೆ ಕುಸಿದು ಬಿದ್ದು ಮನೆ ಭಾಗಶಃ ಹಾನಿಗೀಡಾಗಿದೆ. ಘಟನೆ ವೇಳೆ ಮನೆಮಂದಿ ಮನೆಯಲ್ಲೇ ಇದ್ದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಸ್ಥಳಕ್ಕೆ ಉಳ್ಳಾಲ ತಹಶೀಲ್ದಾರ್ ಪುಟ್ಟ ರಾಜು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ಸಂದರ್ಭದಲ್ಲಿ ಪಜೀರು ಗ್ರಾಮ ಪಂಚಾಯತ್ ಅಧ್ಯಕ್ಷ ರಫೀಕ್ , ಕುರ್ನಾಡು ಗ್ರಾಮ ಪಂಚಾಯತ್ ಗ್ರಾಮ ಕರಣಿಕ ತೌಫೀಕ್, ಸ್ಥಳೀಯರಾದ ಸಿ.ಎಚ್ ಮೊಯ್ದಿನ್, ನಾಸಿರ್ ಬಳಕ ಮೊದಲಾದವರು ಉಪಸ್ಥಿತರಿದ್ದರು.
Next Story





