ಪಣಂಬೂರು ಪೊಲೀಸ್ ಠಾಣೆ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧ : ನಗರ ಪೊಲೀಸ್ ಆಯುಕ್ತರಿಂದ ಆದೇಶ

ಸಾಂದರ್ಭಿಕ ಚಿತ್ರ | PC : GROK
ಮಂಗಳೂರು,ಡಿ.11: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ರಾ.ಹೆ. 66ರ ಸರ್ವಿಸ್ ರಸ್ತೆಯಿಂದ ಪಣಂಬೂರು ಪೊಲೀಸ್ ಠಾಣೆಯವರೆಗೆ ಪ್ರತಿ ದಿನ ಹೆಚ್ಚಿನ ಸಂಖ್ಯೆಯಲ್ಲಿ ಘನ ಸರಕು ವಾಹನಗಳು ಹಾಗೂ ಇತರ ವಾಹನಗಳು ಸಂಚರಿಸುತ್ತಿದೆ. ವಾಹನ ದಟ್ಟಣೆಯಿಂದ ಕೂಡಿದ ರಸ್ತೆಯಾದ ಕಾರಣ ಇಲ್ಲಿ ಪಾರ್ಕಿಂಗ್ ನಿಷೇಧಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಬೃಹತ್ ಕೈಗಾರಿಕಾ ಕಂಪೆನಿಗಳಿಗೆ ಸರಕು ವಸ್ತುಗಳನ್ನು ಸಾಗಾಟ ಮಾಡಲು ಬೃಹತ್ ಗಾತ್ರದ ಹೆಚ್ಚಿನ ಸಂಖ್ಯೆಯಲ್ಲಿ ಘನ ವಾಹನಗಳ ಓಡಾಟವಿರುತ್ತದೆ. ಈ ರಸ್ತೆಯ ಎರಡೂ ಬದಿಗಳಲ್ಲಿ ಎಲ್ಲಾ ರೀತಿಯ ವಾಹನಗಳನ್ನು ಪಾರ್ಕ್ ಮಾಡುವುದರಿಂದ ಪಾದಚಾರಿಗಳು ನಡೆದಾಡಲು ಹಾಗೂ ಇತರ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಹಾಗಾಗಿ ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಬೈಕಂಪಾಡಿ ಕೈಗಾರಿಕಾ ಪ್ರದೇಶದ ರಾ.ಹೆ. 66ರ ಸರ್ವಿಸ್ ರಸ್ತೆಯಿಂದ ಪಣಂಬೂರು ಪೊಲೀಸ್ ಠಾಣೆಯವರೆಗೆ ರಸ್ತೆಯಲ್ಲಿ ವಾಹನಗಳ ನಿಲುಗಡೆ ನಿಷೇಧಿಸಿ ನೋ ಪಾರ್ಕಿಂಗ್ ವಲಯ ಎಂದು ಘೋಷಿಸಲಾಗಿದೆ ಪೊಲೀಸ್ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.





