ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ. ರೇವಣ್ಣ ಭೇಟಿ

ಬಂಟ್ವಾಳ : ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ ರೇವಣ್ಣ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಮಂಗಳವಾರ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಅಧಿಕಾರ ಇದ್ದರೂ, ಅಧಿಕಾರ ಇಲ್ಲದಿದ್ದರೂ ಸದಾ ಸಕ್ರಿಯವಾಗಿ ಜನ ಸೇವೆಯಲ್ಲಿ ತೊಡಗಿಸಿಕೊಂಡಿರುವ ಮಾಜಿ ಸಚಿವ, ಮಾಜಿ ಶಾಸಕ ಬಿ. ರಮಾನಾಥ ರೈ ಅವರು ರಾಜಕೀಯ ಕ್ಷೇತ್ರದ ಅಪರೂಪದ ವ್ಯಕ್ತಿಗಳಲ್ಲಿ ಓರ್ವರು ಎಂದರು.
ರಮಾನಾಥ ರೈ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ವೇಳೆ ಪಕ್ಷಕ್ಕೆ ಜಿಲ್ಲಾ ಕಾಂಗ್ರೆಸ್ ಕಛೇರಿ, ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ನ ಸ್ವಂತ ಕಛೇರಿಯನ್ನು ಮಾಡುವ ಮೂಲಕ ಪಕ್ಷದ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಾಣ ಮಾಡಿರುವ ಕಾರ್ಯ ಶ್ಲಾಘನೀಯ ಎಂದರು.
ಮಾಜಿ ಸಚಿವ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ ರೇವಣ್ಣ ಅವರನ್ನು ಕಛೇರಿಗೆ ಬರಮಾಡಿಕೊಂಡ ಮಾಜಿ ಸಚಿವ ಬಿ.ರಮಾನಾಥ ರೈ ಸ್ವಾಗತಿಸಿ, ತಾನು ಮತ್ತು ಎಚ್.ಎಂ.ರೇವಣ್ಣ ಅವರ ಹಿಂದಿನ ಒಡನಾಟದ ನೆನಪುಗಳ ಬಗ್ಗೆ ಮೆಲುಕು ಹಾಕಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ. ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್, ಪಕ್ಷ ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಿಯೂಷ್ ರೋಡ್ರಿಗಸ್, ಪದ್ಮಶೇಖರ ಜೈನ್, ಬಿ.ಎಂ.ಅಬ್ಬಾಸ್ ಅಲಿ, ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ವಾಸು ಪೂಜಾರಿ, ಸುಧಾಕರ ಶೆಣೈ ಖಂಡಿಗ, ಸುದರ್ಶನ್ ಜೈನ್, ಶೇಖ್ ರಹ್ಮತುಲ್ಲಾ, ನೋಟರಿ ಚಂದ್ರಶೇಖರ ಪೂಜಾರಿ, ಇಬ್ರಾಹಿಂ ನವಾಝ್ ಬಡಕಬೈಲು, ಸತೀಶ್ ಪೂಜಾರಿ ಬಾಯಿಲ, ಮುಹಮ್ಮದ್ ನಂದಾವರ, ಸಿರಾಜ್ ಮದಕ, ಸಿದ್ದೀಕ್ ಸರವು, ಐಡಾ ಸುರೇಶ್, ಸತೀಶ್ ಪೂಜಾರಿ ಕೊಪ್ಪರಿಗೆ, ಇಬ್ರಾಹಿಂ ಕೈಲಾರ್, ವೆಂಕಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.







