Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜನ ಸಹಭಾಗಿತ್ವದಲ್ಲಿ ಅರಣ್ಯ ಸಂರಕ್ಷಣೆ:...

ಜನ ಸಹಭಾಗಿತ್ವದಲ್ಲಿ ಅರಣ್ಯ ಸಂರಕ್ಷಣೆ: ಆ್ಯಂಟೋನಿ ಮರಿಯಪ್ಪ

ವಾರ್ತಾಭಾರತಿವಾರ್ತಾಭಾರತಿ24 May 2024 10:24 PM IST
share
ಜನ ಸಹಭಾಗಿತ್ವದಲ್ಲಿ ಅರಣ್ಯ ಸಂರಕ್ಷಣೆ: ಆ್ಯಂಟೋನಿ ಮರಿಯಪ್ಪ

ಮಂಗಳೂರು: ಜನ ಸಹಭಾಗಿತ್ವದಲ್ಲಿ ಅರಣ್ಯ ಸಂರಕ್ಷಣೆಗೆ ಅರಣ್ಯ ಇಲಾಖೆ ಒತ್ತು ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಗಿಡ ನೆಟ್ಟು ಬೆಳೆಸುವುದಕ್ಕೆ ಹಾಗೂ ಅರಣ್ಯ ಇಲಾಖೆಯ ವಿವಿಧ ಯೋಜನೆಗಳ ಮೂಲಕ ಗಿಡಗಳ ವಿತರಣೆ ಆರ್ಥಿಕ ನೆರವನ್ನು ಕೃಷಿಕರಿಗೆ ನೀಡಲಾ ಗುತ್ತಿದೆ. 2024-25ನೆ ಸಾಲಿನಲ್ಲಿ ರೈತರಿಗೆ 1,63,000ಗಿಡಗಳನ್ನು ವಿತರಿಸುವ ಗುರಿ ಹೊಂದಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ ತಿಳಿಸಿದ್ದಾರೆ.

ಅವರು ಇಂದು ನಗರದ ಪತ್ರಿಕಾಭವನದಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡ ಮಾಧ್ಯಮ ಸಂವಾದದಲ್ಲಿ ವಿವರಿಸಿದರು.

ರೈತರಿಗೆ ತಮ್ಮ ಜಮೀನಿನಲ್ಲಿ ಗಿಡ ಬೆಳೆಸಲು ದಕ್ಷಿಣ ಕನ್ನಡ ಜಿಲ್ಲೆಯ ಅರಣ್ಯ ಇಲಾಖೆಯ 9ನರ್ಸರಿಗಳಲ್ಲಿ ಮತ್ತು ಸಾಮಾಜಿಕ ಅರಣ್ಯ ವಿಭಾಗದ 5ನರ್ಸರಿಗಳ ಮೂಲಕ ಸುಮಾರು 30 ವಿವಿಧ ರೀತಿಯ ಸಸ್ಯಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿದೆ. ಒಬ್ಬ ರೈತನಿಗೆ ಗರಿಷ್ಠ ಒಂದು ಹೆಕ್ಟೇರ್ ಗೆ 400 ಸಸಿ ವಿತರಿಸುವ ಯೋಜನೆ ಇದೆ.ಕೃಷಿ ಅರಣ್ಯ ವಿಕಾಸ ಯೋಜನೆಯಲ್ಲಿ ಪ್ರತಿ ಗಿಡ ನೆಟ್ಟು ಸಂರಕ್ಷಣೆ ಮಾಡಲು 125 ರೂಪಾಯಿ ಆರ್ಥಿಕ ನೆರವು ರೈತರಿಗೆ ನೀಡಲಾಗುತ್ತದೆ. ನರೇಗಾದಲ್ಲೂ ಗಿಡ ನೆಡಲು ಸಹಾಯ ನೀಡಲಾಗುತ್ತದೆ. ಕಳೆದ ವರ್ಷ 7,79,000 ಗಿಡಗಳನ್ನು ಅರಣ್ಯದಲ್ಲಿ,35,600ಗಿಡಗಳನ್ನು ಅರಣ್ಯೇತರ ಕಡೆಗಳಲ್ಲಿ ನೆಡಲಾಗಿದೆ. 4,41,000 ಗಿಡಗಳನ್ನು ರೈತರಿಗೆ ನೀಡಲಾಗಿದೆ. 2024-25 ರಲ್ಲಿ 5 ಲಕ್ಷ ಸಸಿ ನೆಡುವ ಯೋಜನೆ ಇದೆ.ಈ ರೀತಿಯ ಪ್ರತಿ ವರ್ಷ ಸುಮಾರು 7ಲಕ್ಷ ಗಿಡಗಳನ್ನು ನೆಡಲಾಗುತ್ತಿದೆ. ಆದರೆ ರಸ್ತೆ ಕಟ್ಟಡ ಇನ್ನಿತರ ಅಭಿವೃದ್ಧಿ ಯೋಜನೆಗಳ ಸಂದರ್ಭದಲ್ಲಿ ಪ್ರತಿ ವರ್ಷ ಸಾಕಷ್ಟು ಮರಗಳ ನಾಶವಾ ಗುತ್ತದೆ.ಕಳೆದ ವರ್ಷ ಈ ರೀತಿ 1,70,000 ಸಾವಿರ ಮರಗಳನ್ನು ತೆರವುಗೊಳಿಸ ಬೇಕಾಯಿತು. ಸುಮಾರು 3ಸಾವಿರ ಮರಗಳನ್ನು ಅಪಾಯವನ್ನು ತಪ್ಪಿಸಲು ತೆರವುಗೊಳಿಸಬೇಕಾಯಿತು. ಆದರೂ ಶೇ 33ರಷ್ಟು ಅರಣ್ಯ ವನ್ನು ಸಂರಕ್ಷಿಸುವುದು ಅನಿವಾರ್ಯವಾಗಿದೆ ಎಂದು ಮರಿಯಪ್ಪ ಹೇಳಿದರು.

ಕಾಡು ಪ್ರಾಣಿ ಗಳ ಹಾವಳಿ ತಡೆಗೆ ಹಣ್ಣಿನ ಮರಗಳ ತೋಪು:-ಕಾಡು ಪ್ರಾಣಿ ಗಳು ಮುಖ್ಯವಾಗಿ ಆನೆಗಳ ಹಾವಳಿ ತಡೆಯಲು ಕಾಡಿನಲ್ಲಿ ಅಕೇಶಿಯ ಮರಗಳನ್ನು ತೆರವುಗೊಳಿಸಿ ಹಣ್ಣಿನ ಮರಗಳನ್ನು ಬೆಳೆಸಲಾಗುತ್ತಿದೆ. ಇದುವರೆಗೆ ಸುಮಾರು 900 ಹೆಕ್ಟೇರ್ ಅಕೇಶಿಯ ಮರಗಳ ತೋಪು ತೆರವುಗೊಳಿಸಿ ಮರಗಳನ್ನು ಬೆಳೆಸಲಾಗಿದೆ. ಆನೆಗಳ ತಡೆಗೆ ಸೋಲಾರ್ ಬೇಲಿ ಸೇರಿದಂತೆ ಜನವಸತಿಗೆ ನುಗ್ಗದಂತೆ ತಡೆಗಳನ್ನು ನಿರ್ಮಿಸಲಾಗಿದೆ. ಆನೆಗಳ ಪಥ ಹಲವಾರು ವರ್ಷ ಗಳಿಂದ ಒಂದೆ ಆಗಿರುತ್ತದೆ. ರಸ್ತೆ ಇತರ ಕಾಮಗಾರಿಯ ಸಂದರ್ಬದಲ್ಲಿ ಈ ಪಥ ಬದಲಾದರೆ ಆನೆಗಳು ಗೊಂದಲಕ್ಕೆ ಒಳಗಾಗಿ ಹೊಸ ದಾರಿ ಹುಡುಕುತ್ತವೆ. ಇದರಿಂದ ಸಾಕಷ್ಟು ಬಾರಿ ಅವುಗಳು ನಾಡಿಗೆ ನುಗ್ಗಿದ ಉದಾಹರಣೆಗಳಿವೆ. ಕಳೆದ 2023-24ರಲ್ಲಿ ಆನೆ ದಾಳಿಯಿಂದ ನಾಲ್ಕು ಜೀವ ಹಾನಿಯಾಗಿದೆ. 2024-25ರಲ್ಲಿ ಯಾವುದೇ ಜೀವ ಹಾನಿಯಾಗಿಲ್ಲ . ಆನೆ, ಕಡವೆ, ಮಂಗಗಳು ಸೇರಿದಂತೆ ಕಾಡು ಪ್ರಾಣಿಗಳಿಂದ ಬೆಳೆ ಹಾನಿಯಾದರೆ ಅವರಿಗೆ ಪರಿಹಾರ ನೀಡುವ ಯೋಜನೆ ಇದೆ ಎಂದು ಡಿಸಿಎಫ್ ತಿಳಿಸಿದರು.

ಚಾರಣ ಪ್ರೀಯರಿಗೆ ಆನ್ ಲೈನ್ ಮೂಲಕ ಬುಕ್ ಮಾಡಿ ಹೋಗಲು ಅವಕಾಶವಿದೆ. ಅರಣ್ಯದ ಕಾನೂನಿನಲ್ಲಿ ನೀಡಲಾದ ವಿನಾಯಿತಿಗಳ ಹೊರತಾಗಿ ಇನ್ನಿತರ ಚಟುವಟಿಕೆಗಳಿಗೆ ಮಾತ್ರ ಇಲಾಖೆ ಅನುಮತಿ ನೀಡುವುದಿಲ್ಲ. ಅರಣ್ಯ ಸಂರಕ್ಷಣೆಯ ಹಿನ್ನೆಲೆಯಲ್ಲಿ ಈ ನಿಯಮ ರೂಪಿಸಲಾಗಿದೆ ಎಂದು ಡಿಸಿಎಫ್ ಎ.ಮರಿಯಪ್ಪ ವಿವರಿಸಿದರು.

ಮಾಧ್ಯಮ ಸಂವಾದದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್,ಪ್ರೊಬೆಷನರಿ ಐಎಫ್ ಎಸ್ ಅಧಿಕಾರಿ ಅಕ್ಷಯ್ ಪ್ರಕಾಶ್ಕರ್, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X